- ತರಗನಹಳ್ಳಿಗೆ ಬಿವೈವಿ ಭೇಟಿ: ಸ್ಥಳ ಪರಿಶೀಲಿಸಿ ಮಾಜಿ ಸಚಿವ ರೇಣುಕಾಚಾರ್ಯ ಮಾಹಿತಿ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ 40 ದಿನಗಳಿಂದ ಬಿಜೆಪಿ ಜನಜಾಗೃತಿ ಮೂಡಿಸುತ್ತಿದ್ದು, ಫೆ.21ರ ಶನಿವಾರ ತರಗನಹಳ್ಳಿಯಲ್ಲಿ ಸಮಾರೋಪಗೊಳ್ಳಲಿದೆ. ಸಮಾರಂಭವನ್ನು ಬಿಜೆಪಿ ರಾಜ್ಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.ಶುಕ್ರವಾರ ತಾಲೂಕಿನ ತರಗನಹಳ್ಳಿಯಲ್ಲಿ ನಡೆಯುವ ಸಮಾರೋಪ ಸಮಾರಂಭದ ಸ್ಥಳ ವೀಕ್ಷಣೆ ಮಾಡಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೊದಲು ಘಂಟ್ಯಾಪುರದ ಸೇವಾಲಾಲ್ ಹಾಗೂ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕೂಲಿ ಕಾರ್ಮಿಕರ ಜತೆ ಪಾದಯಾತ್ರೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿ, ಪಾಲ್ಗೊಳ್ಳಲಿದ್ದಾರೆ ಎಂದರು.
30 ದಿನಗಳಲ್ಲಿ 196 ಸ್ಥಳಗಳಲ್ಲಿ ವಿಬಿ ಜಿ ರಾಮ್ ಜಿ ಬಗ್ಗೆ ಸಾರ್ವಜನಿಕರಲ್ಲಿ, ಕೂಲಿ ಕಾರ್ಮಿಕರಲ್ಲಿ ಜಾಗೃತಿ ಮೂಡಿಸಿದ್ದೇವೆ. ತಾಲೂಕಿನ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುತ್ತಿರುವ ರೈತರು, ಹೋಟೆಲ್‌ನಲ್ಲಿದ್ದ ಸಾರ್ವಜನಿಕರು, ಮದುವೆ, ನಾಮಕರಣ ಹಾಗೂ ಇನ್ನಿತರ ಶುಭ ಸಮಾರಂಭಗಳಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಕರಪತ್ರ ನೀಡಿ ಜಾಗೃತಿ ಮೂಡಿಸಿದ್ದೇವೆ. ಜಿ ರಾಮ್ ಜಿ ಹೊಸ ಕಾಯ್ದೆ ಜನರಿಗೆ ಹೇಗೆ ಅನುಕೂಲ ಎಂಬುದು ತಿಳಿಸಿದ್ದೇವೆ ಎಂದ ಅವರು, ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ಹಾಗೂ ಇತರ ಮುಖಂಡರು ಉಪಸ್ಥಿತರಿರುತ್ತಾರೆ ಎಂದರು.
- - -