ಇಂದಿನ ಜಗತ್ತಿಗೆ ರೇಣುಕಾಚಾರ್ಯರ ಶಾಂತಿ ಸಂದೇಶದ ಅಗತ್ಯವಿದೆ

KannadaprabhaNewsNetwork |  
Published : Mar 04, 2026, 01:45 AM IST
3ಎಚ್ಎಸ್ಎನ್19 :  | Kannada Prabha

ಸಾರಾಂಶ

ಜಗದ್ಗುರು ಶ್ರೀ ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕ. ಯುದ್ಧ ಮತ್ತು ಹಿಂಸೆಯ ವಾತಾವರಣವು ಆತಂಕಕಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಭಾರತೀಯ ಸಂಸ್ಕೃತಿಯ ಶಾಂತಿ ಮಂತ್ರ ಮತ್ತು ರೇಣುಕಾಚಾರ್ಯರ ತತ್ವಗಳು ಜಗತ್ತಿಗೆ ದಾರಿದೀಪವಾಗಲಿ ಎಂದು ತಿಳಿಸಿದರು. ಅಂದಿನ ರೇಣುಕಾಚಾರ್ಯರು ಕಾಲದಲ್ಲೇ ಮಹಿಳೆಯರಿಗೆ ಸಮಾನ ಗೌರವ ನೀಡಿದರು. ಅವರು ಕೇವಲ ಒಂದು ಧರ್ಮಕ್ಕೆ ಸೀಮಿತವಾಗದೆ, ಸಕಲ ಜೀವಾತ್ಮರಿಗೂ ಲೇಸನ್ನು ಬಯಸುವ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಮಾನವ ಧರ್ಮಕ್ಕೆ ಜಯವಾಗಲಿ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಜಗದ್ಗುರು ಶ್ರೀ ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕವಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ವೀರಶೈವ ಸಮಾಜದ ವತಿಯಿಂದ ಆಯೋಜಿಸಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಅವರ ತತ್ವಗಳು ಆದರ್ಶವಾಗಿವೆ ಎಂದರು.ಜಗದ್ಗುರು ಶ್ರೀ ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕ. ಯುದ್ಧ ಮತ್ತು ಹಿಂಸೆಯ ವಾತಾವರಣವು ಆತಂಕಕಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಭಾರತೀಯ ಸಂಸ್ಕೃತಿಯ ಶಾಂತಿ ಮಂತ್ರ ಮತ್ತು ರೇಣುಕಾಚಾರ್ಯರ ತತ್ವಗಳು ಜಗತ್ತಿಗೆ ದಾರಿದೀಪವಾಗಲಿ ಎಂದು ತಿಳಿಸಿದರು. ಅಂದಿನ ರೇಣುಕಾಚಾರ್ಯರು ಕಾಲದಲ್ಲೇ ಮಹಿಳೆಯರಿಗೆ ಸಮಾನ ಗೌರವ ನೀಡಿದರು. ಅವರು ಕೇವಲ ಒಂದು ಧರ್ಮಕ್ಕೆ ಸೀಮಿತವಾಗದೆ, ಸಕಲ ಜೀವಾತ್ಮರಿಗೂ ಲೇಸನ್ನು ಬಯಸುವ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ.

ಪುರವರ್ಗ ಹಿರೇಮಠದ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಗದ್ಗುರು ರೇಣುಕಾಚಾರ್ಯರು ತಮ್ಮ ವಚನಗಳಲ್ಲಿ ಮತ್ತು ಬಸವಾದಿ ಶರಣರು ವಚನ ಸಾಹಿತ್ಯದ ಮೂಲಕ ಜನರಿಗೆ ಸರಿ ಮಾರ್ಗ ತೋರಿದ್ದಾರೆ. ಮನೆಯಲ್ಲಿ ತಾಯಂದಿರು ಮಕ್ಕಳಿಗೆ ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂದು ಹೇಳಲೇಬೇಕು ಎಂದರು.ಪಾಲಕರು ಒಳ್ಳೆಯ ವಿದ್ಯಾಭ್ಯಾಸ ಜೊತೆಗೆ ಒಳ್ಳೆಯ ಸಂಸ್ಕೃತಿ ಕೂಡ ಕೊಡಬೇಕು, ಮನುಷ್ಯ ಜನ್ಮವು ಅತ್ಯಂತ ದುರ್ಲಭವಾದುದು. ಜೀವನದಲ್ಲಿ ಸಾರ್ಥಕತೆ ಪಡೆಯಲು ಅಹಿಂಸೆ, ಸತ್ಯ, ಅಸ್ತೇಯ, ಬ್ರಹ್ಮಚರ್ಯ, ದಯೆ, ಕ್ಷಮೆ, ದಾನ, ಪೂಜೆ, ಜಪ ಮತ್ತು ಧ್ಯಾನ ಎಂಬ ಹತ್ತು ಧರ್ಮ ಸೂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಜಿ.ಎಸ್.ಶಂಕರಪ್ಪ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ರಾಜಣ್ಣ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಅರಳಾಪುರ ಮಂಜೇಗೌಡ, ತಾಲೂಕು ಅಧ್ಯಕ್ಷ ಗಿರೀಶ್, ಉಪ ತಹಸಿಲ್ದಾರ್ ಅನಿಲ್ ಕುಮಾರ್, ಸಮಾಜದ ಮುಖಂಡರಾದ ಅರ್ಚಕ ಶಿವಾನಂದ್, ತಗಡೂರು ಮಂಜಣ್ಣ, ರುದ್ರೇಶ್, ರಕ್ಷಿತ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ ಸೇರಿದ ಜೆಡಿಎಸ್‌ ಕಾರ್ಯಕರ್ತರು
ಚಂದ್ರಗುತ್ತಿಯಲ್ಲಿ ವಿಜಯನಗರ ಅರಸರ ಕಾಲದ ವೀರಗಲ್ಲು ಪತ್ತೆ