ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಆರಂಭ: ಡಿಸಿ ಜಾನಕಿ

KannadaprabhaNewsNetwork |  
Published : Jan 10, 2025, 12:47 AM IST
(ಫೋಟೋ 9ಬಿಕೆಟಿ2, ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಟಾಸ್ಕಪೋರ್ಷ ಸಮಿತಿಯ ಅಧ್ಯಕ್ಷೆ ಜಾನಕಿ ಕೆ.ಎಂ) | Kannada Prabha

ಸಾರಾಂಶ

ತೊಗರಿಗೆ ಪ್ರತಿ ಕ್ವಿಂಟಲ್‌ಗೆ ₹7550 ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಟ ಪ್ರತಿ ರೈತರಿಂದ 40 ಕ್ವಿಂಟಲ್ ತೊಗರಿ ಖರೀದಿಸಲಾಗುತ್ತದೆ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ತೊಗರಿಗೆ ಪ್ರತಿ ಕ್ವಿಂಟಲ್‌ಗೆ ₹7550 ನಂತೆ ಪ್ರತಿ ಎಕರೆಗೆ 4 ಕ್ವಿಂಟಲ್ ಮತ್ತು ಗರಿಷ್ಟ ಪ್ರತಿ ರೈತರಿಂದ 40 ಕ್ವಿಂಟಲ್ ತೊಗರಿ ಖರೀದಿಸಲಾಗುತ್ತದೆ ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ರೈತರ ನೋಂದಣಿ ಕಾರ್ಯವನ್ನು 75 ದಿನಗಳವರೆಗೆ ಮತ್ತು ಖರೀದಿ ಅವಧಿ 90 ದಿನಗಳವರೆಗೆ ನಿಗದಿಪಡಿಸಲಾಗಿದೆ. ಖರೀದಿ ಕೇಂದ್ರಗಳಲ್ಲಿ ರೈತರು ಆಧಾರ್‌ ಕಾರ್ಡ್‌ ಪ್ರತಿ, ರೈತರಿಗೆ ಸಂಬಂಧಿಸಿದ ಎಫ್ಐಡಿ ಹಾಗೂ ಪಹಣಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ತೊಗರಿ ಉತ್ಪನ್ನ ಖರೀದಿಸುವ ಪೂರ್ವದಲ್ಲಿ ರೈತರು ನೀಡಿರುವ ವಿವರವನ್ನು ಎನ್ಐಸಿ ಸಂಸ್ಥೆಯ ತಂತ್ರಾಂಶದೊಂದಿಗೆ ಭೂಮಿ ಯುಐಡಿಎಐ ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ಪರಿಶೀಲಿಸಿದ ನಂತರವೇ ನೋಂದಾಯಿಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಒಂದು ವೇಳೆ ಬೆಳೆ ದರ್ಶಕದಲ್ಲಿ ಬೆಳೆ ಬೆಳೆಯದೇ ಇರುವುದು ಕಂಡು ಬಂದಲ್ಲಿ ಅಂತಹ ರೈತರು ಹತ್ತಿರದ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೇ ಇಲಾಖೆ ಸಂಪರ್ಕಿಸಿ ಆಕ್ಷೇಪಣೆ ಸಲ್ಲಿಸಿ ಬೆಳೆ ದರ್ಶಕದಲ್ಲಿ ಬೆಳೆ ನಮೂದಿಸಿಕೊಂಡು ನಂತರ ಖರೀದಿ ಕೇಂದ್ರದಲ್ಲಿ ನೋಂದಾಯಿಸತಕ್ಕದ್ದು. ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಖರೀದಿ ಕೇಂದ್ರಗಳ ಮಾಹಿತಿ:

ಬಾಗಲಕೋಟೆ ತಾಲೂಕಿನ ಪಿಕೆಪಿಎಸ್ ಬೆನಕಟ್ಟಿ (9741066862), ಹಳ್ಳೂರು (9901325201), ಬಾದಾಮಿ (9611358837), ಕೆರೂರು (9972301729), ಹುನಗುಂದ ಮತ್ತು ಇಳಕಲ್ಲ ತಾಲೂಕಿನ ಟಿಎಪಿಸಿಎಂಎಸ್ ಹುನಗುಂದ (9480262655), ನಂದವಾಡಗಿ (9902377067), ಹಿರೇಅದಾಪೂರ (8497876996), ಬೂದಿಹಾಳ (7019825319), ಎಫ್‌ಪಿಒ ಸುಳೇಬಾವಿ (9449762433), ಮುಗನೂರು (8310324070), ಕೂಡಲಸಂಗಮ (9449357061), ಮುಧೋಳ (9242783318), ಎಫ್‌ಪಿಒ ಲೋಕಾಪೂರ (9880927310), ಲೋಕಾಪೂರ (9844474344), ಜಮಖಂಡಿ (7019445935), ತೊದಲಬಾಗಿ (9741998771), ಬೀಳಗಿ (7019682890), ಬೀಳಗಿ ಕ್ರಾಸ್ (9880376768) ಇವುಗಳಿಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!