ಕನ್ನಡಪ್ರಭ ವಾರ್ತೆ ಮಂಡ್ಯ
ಉದ್ಘಾಟನೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮಶೆಟ್ಟಿ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತಾ ಪಾಲ್ಗೊಳ್ಳುವರು. ಆಂಧ್ರಪ್ರದೇಶದ ಆದಾಯ ತೆರಿಗೆ ಮುಖ್ಯ ಆಯುಕ್ತ ಜಯರಾಮ್ ರಾಯಪುರ, ಸಮಾಜಸೇವಕರಾದ ಆರ್‌ಟಿಓ ಮಲ್ಲಿಕಾರ್ಜುನ್, ಜನಾರ್ಧನ್, ನಿವೃತ್ತ ಪ್ರಾಧ್ಯಾಪಕ ಡಾ.ಚಿಕ್ಕಣ್ಣ ಯಣ್ಣೆಕಟ್ಟೆ ಮೂಡಲಪಾಯ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಬಿಡುಗಡೆಗೊಳಿಸುವರು. ಶಾಲಾ ವಿದ್ಯಾರ್ಥಿಗಳಿಗೆ ೩ ಸಾವಿರ ರು., ಕಾಲೇಜು ವಿದ್ಯಾರ್ಥಿಗಳಿಗೆ ೫ ಸಾವಿರ ರು. ವಿದ್ಯಾರ್ಥಿ ವೇತನ ನೀಡಲಾಗುವುದು ಎಂದರು.
ದೇವಿ ಮಹಾತ್ಮೆ ೯೦ ನಿಮಿಷಗಳ ನಾಟಕವಾಗಿದ್ದು ಇದನ್ನು ಆದಿ ಚುಂಚನಗಿರಿ ಮೂಡಲಪಾಯ ಯಕ್ಷಗಾನ ಕೇಂದ್ರದ ಡಿಪ್ಲೋಮಾ ವಿದ್ಯಾರ್ಥಿಗಳು ಪ್ರದರ್ಶಿಸಿದರೆ, ಅತ್ತಲಾ ಕಿಷ್ಕೆಂದೆಯೋಳ್ ನಾಟಕ ೮೦ ನಿಮಿಷದ ನಾಟಕವಾಗಿದ್ದು, ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ರಂಗತಂಡದವರು ಪ್ರಸ್ತುತಪಡಿಸಲಿದ್ದಾರೆ ಎಂದರು.ಗೋಷ್ಠಿಯಲ್ಲಿ ಪ್ರೊ.ಎಸ್.ಬಿ.ಶಂಕರೇಗೌಡ, ಪಿ.ಲೋಕೇಶ್ ಚಂದಗಾಲು, ಎಚ್.ಡಿ.ಸೋಮಶೇಖರ್ ಇದ್ದರು.ನಾಳೆ ಅಂಬೇಡ್ಕರ್ ಹುಟ್ಟುಹಬ್ಬ ಕಾರ್ಯಕ್ರಮ
ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ನಂಜುಂಡಸ್ವಾಮಿ, ಬೆಂಗಳೂರು ಮಾತೃಶ್ರೀ ರಮಾಬಾಯಿ ಅಂಬೇಡ್ಕರ್ ದಂತ ಮಹಾವಿದ್ಯಾಲಯದ ನಿರ್ದೆಶಕ ಎಂ.ಕೆ.ಶಿವಕುಮಾರ್, ತಹಸೀಲ್ದಾರ್ ಲೊಕೇಶ್, ಡಿವೈಎಸ್‌ಪಿ ಎಸ್.ಬಿ ಯಶವಂತ ಕುಮಾರ್, ಚೆಸ್ಕಾಂ ಎಇಇ ಪ್ರೇಮ್‌ಕುಮಾರ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ ನಾಗರತ್ನ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಸೈನಿಕರಿಗೆ ಸನ್ಮಾನ ಸೇರಿದಂತೆ ಕಲ್ಕುಣಿ ಯೂತ್ ಮೆಲೋಡಿಯಿಸ್ ತಂಡದಿಂದ ಗೀತಾಗಾಯನ, ಎಂ.ಪಿ ರಿಷಿತಾ ವಿಸ್ಮಯ ತಂಡದಿಂದ ಭರತನಾಟ್ಯ ಹಾಗೂ ಅಲ್ಟಿಮೆಟ್ ಡ್ಯಾನ್ಸ್,ಕರಾಟೆ, ಜೂಡೋ ಕ್ಲಾಸ್ ತಂಡದಿಂದ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಭಗವಾನ್ ಬುದ್ಧ ಡಾ. ಬಿ.ಆರ್ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.