ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಕಾರ್ಯಕ್ರಮ
ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಮಡಿಲು ಶೀರ್ಷಿಕೆಯಡಿ ‘ಮಮತೆಯ ಮಡಿಲಿಗಿದು ಗೀತ ನಮನ’ ಕಾರ್ಯಕ್ರಮವನ್ನು ಮೇ 9 ರ ಸಂಜೆ 6 ಕ್ಕೆ ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಯುರೇಕಾ ಅಕಾಡೆಮಿ ಮುಖ್ಯಸ್ಥ ದೀಪಕ್ ದೊಡ್ಡಯ್ಯ ತಿಳಿಸಿದರು.
ನಗರದ ಪ್ರಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಯುರೇಕಾ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ತು, ಲಯನ್ಸ್ ಸಂಸ್ಥೆ ಹಾಗೂ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಕಾರ್ಯಕ್ರಮವನ್ನು ಸಂಸ್ಕೃತಿ ಚಿಂತಕಿ ನಾಗಶ್ರೀ ತ್ಯಾಗರಾಜ್ ಉದ್ಘಾಟಿಸಲಿದ್ದಾರೆ. ಯುರೇಖಾ ಅಕಾಡೆಮಿ ಸಂಸ್ಥಾಪಕ ದೀಪಕ್ ದೊಡ್ಡಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿ.ರಮೇಶ್, ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್.ವೆಂಕಟೇಶ್, ಲಯತ್ ಸಂಸ್ಥೆ ಅಧ್ಯಕ್ಷ ಸಿ.ಎನ್.ಕುಮಾರ್, ಕಾರ್ಯದರ್ಶಿ ಗೋಪಿಕೃಷ್ಣ ಉಪಸ್ಥಿತರಿರಲಿದ್ದಾರೆ ಎಂದರು.
ಕೀಬೋರ್ಡ್ ನಲ್ಲಿ ಮೆಲ್ವಿನ್ ಲೀಮಾ, ಕೊಳಲಿನಲ್ಲಿ ಸಮರ್ಥ್ ಹೆಗಡೆ, ತಬಲಾದಲ್ಲಿ ವಿಠಲ್ ರಂಗಧೋಳ್ ಹಾಗೂ ರಿದಂ ಪ್ಯಾಡ್ ನಲ್ಲಿ ಮೋಹನ್ ಕುಮಾರ್ ವಾದ್ಯ ಸಹಕಾರ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.