ಕನ್ನಡಪ್ರಭ ವಾರ್ತೆ ಮಂಡ್ಯ
ಅಂದು ಬೆಳಗ್ಗೆ ೧೦ ಗಂಟೆಗೆ ಕ್ರೀಡಾ ಸ್ಪರ್ಧೆಗೆ ಶಾಸಕ ಪಿ.ರವಿಕುಮಾರ್ ಚಾಲನೆ ನೀಡುರವರು. ಕೆರಗೋಡು, ಮಾರಗೌಡನಹಳ್ಳಿ, ಹುಲಿವಾನ, ಹೊಡಾಘಟ್ಟ ಗ್ರಾಮದ ಮುಖಂಡರು ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಹಗ್ಗ-ಜಗ್ಗಾಟ, ಇಟ್ಟಿಗೆ ಹೊತ್ತು ಓಡುವ ಸ್ಪರ್ಧೆ, ಮ್ಯೂಸಿಕಲ್ ಚೇರ್, ಇಂಧನ ರಹಿತ ಅಡುಗೆ ಸೇರಿದಂತೆ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈಗಾಗಲೇ ೧೫೦೦ ಮಹಿಳೆಯರು ಸ್ಪರ್ಧೆಗಳಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ನುಡಿದರು.ಸಂಜೆ ೩ ಗಂಟೆಗೆ ಸಮಾರೋಪ ಸಮಾರಂಭ ಏರ್ಪಡಿಸಲಾಗಿದ್ದು, ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಶುಭದಾಯಿನಿ ಪ್ರಾಸ್ತಾವಿಕ ನುಡಿಗಳನ್ನಾಡುವರು. ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್ ಉಪಸ್ಥಿತರಿರುವರು.
ಬೆಂಗಳೂರಿನಲ್ಲಿ ಏ.24 ರಿಂದ 26ರವರೆಗೆ ರಾಜ್ಯ ಮಟ್ಟದ ವಿಶ್ವಕರ್ಮ ವಧು-ವರರ ಅನ್ವೇಷಣೆ: ಎಂ.ಪಿ.ಮಹೇಶ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ರೇಸ್ ಕೋರ್ಸ್ ರಸ್ತೆಯ ಕನ್ನಡ ಚಲನಚಿತ್ರ, ವಾಣಿಜ್ಯ ಮಂಡಳಿ ಪಕ್ಕದ ಗುರುರಾಜ ಕಲ್ಯಾಣ ಮಂಟಪದಲ್ಲಿ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ ಅವರ ಸಾರಥ್ಯದಲ್ಲಿ ಮೂರು ದಿನ ಸಮುದಾಯದ ವಧು-ವರರ ಅನೇಷಣೆ ನಡೆಯಲಿದೆ ಎಂದರು.ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಬಸವರಾಜು ಕದಲೂರು ಹಾಗೂ ಅಶೋಕ್‌ಪುತ್ತಾರ್ ಅಧ್ಯಕ್ಷತೆ ವಹಿಸುವರು. ಮೊದಲ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ 200 ಜೋಡಿಗಳು, 2 ನೇ ಬಾರಿ 350 ಜೋಡಿಗಳು ಯಶಸ್ವಿ ಅನ್ವೇಷಣೆಗೊಂಡಿದ್ದವು. ಈ ಬಾರಿ 500ಕ್ಕೂ ಹೆಚ್ಚು ಜೋಡಿಗಳು ಅನ್ವೇಷಣೆಗೊಳ್ಳುವ ನಿರೀಕ್ಷೆಯಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಹಾಸಭಾ ರಾಜ್ಯ ಉಪಾಧ್ಯಕ್ಷ ಬಸವರಾಜು ಕದಲೂರು, ಜಿಲ್ಲಾಧ್ಯಕ್ಷ ಎಂ.ಎನ್.ಸುದರ್ಶನ್, ಮುಖಂಡರಾದ ದೇವರಾಜು, ರವಿಪ್ರಸಾದ ಆಚಾರ್, ಸೋಮಣ್ಣ, ಈಶ್ವರ್ ಆಚಾರ್, ಎಂ.ಎನ್.ಕುಮಾರ್ ಇದ್ದರು.