ನಾಳೆ ಸಾಹೇ ವಿವಿ 13ನೇ ಘಟಿಕೋತ್ಸವ

KannadaprabhaNewsNetwork |  
Published : Dec 13, 2024, 12:48 AM IST
ತುಮಕೂರಿನಲ್ಲಿ ಸಾಹೇ ವಿವಿ ಘಟಿಕೋತ್ಸವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಡಾ. ಕೆ.ಬಿ. ಲಿಂಗೇಗೌಡ | Kannada Prabha

ಸಾರಾಂಶ

ನಗರದ ಅಗಲಕೋಟೆಯಲ್ಲಿರುವ ಶ್ರೀಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಎಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ ಡಿ.14ರಂದು ಬೆಳಿಗ್ಗೆ 10.30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುನಗರದ ಅಗಲಕೋಟೆಯಲ್ಲಿರುವ ಶ್ರೀಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಎಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಶನಿವಾರ ಡಿ.14ರಂದು ಬೆಳಿಗ್ಗೆ 10.30ಕ್ಕೆ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಬಿ.ಲಿಂಗೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 13ನೇ ಸಾಹೇ ಘಟಿಕೋತ್ಸವದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ನಿಕಟಪೂರ್ವ ರಾಜ್ಯಪಾಲರು ಆದ ಮಾರ್ಗರೆಟ್ ಆಳ್ವ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ. ನವದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ನ ಅಧ್ಯಕ್ಷರಾದ ಪ್ರೊ. ಟಿ.ಜಿ.ಸಿತಾರಾಮ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ಗೃಹ ಸಚಿವರಾದ ಸವ್ಯಸಾಚಿ ಡಾ.ಜಿ.ಪರಮೇಶ್ವರ ಅವರು ಪದವಿ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಗೌಪ್ಯತೆಯನ್ನು ಭೋದಿಸಿ, ಪ್ರಮಾಣ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಅವರು ಗೌರವ ಡಾಕ್ಟರೇಟ್ ಪಡೆದವರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅತಿಥಿಗಳ ಬಗ್ಗೆ ವಿವರಿಸಿದರು. ಕುಲಸಚಿವರಾದ ಡಾ.ಎಂ.ಝೆಡ್ ಕುರಿಯನ್ ಮಾತನಾಡಿ, ಸಾಹೇ ವಿವಿಯ ಘಟಿಕೋತ್ಸವದಲ್ಲಿ ರ್ಯಾಂ ಕ್ ಪಡೆದವರ ವಿವರಗಳನ್ನು ನೀಡುತ್ತಾ, ಸಾಹೇ ಬೆಳೆದು ಬಂದ ಹಾದಿ ಹಾಗೂ ನ್ಯಾಕ್ ಎ+ ಪಡೆದಿರುವ ಕುರಿತು ಮಾಹಿತಿಯನ್ನು ನೀಡಿದರು. ಮುಂದಿನ ದಿನಗಳಲ್ಲಿ ಸಾಹೇ ವಿವಿಯು ಅಂತಾರಾಷ್ಟ್ರೀಯ ಪಟ್ಟಿಯಲ್ಲಿ ಬರುವ ಎಲ್ಲಾ ರೀತಿಯ ಪ್ರಯತ್ನಗಳು ನಡೆಸುತ್ತಿದೆ ಎಂದರು. ಇತ್ತೀಚೆಗೆ ಅಮೆರಿಕಾದ ಅವಲಾನ್ ವೈದ್ಯಕೀಯ ವಿವಿಯೊಂದಿಗೆ ಸಾಹೇ ವಿವಿ ಒಪ್ಪಂದ ನಡೆಸಿತ್ತು. ಅದರ ಒಪ್ಪಂದದ ಪ್ರಕಾರ ಮುಂದಿನ ಜನವರಿ ಮಾಹೆಯಲ್ಲಿ ವೈದ್ಯಕೀಯ ಆನ್‌ಲೈನ್ ತರಗತಿಗಳನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ. ಅವಲಾನ್ ವಿವಿಯ ವಿದ್ಯಾರ್ಥಿಗಳು ಎರಡು ವರ್ಷಗಳ ಕಾಲ ಸಾಹೇ ವಿವಿಯಲ್ಲಿ ಆನ್‌ಲೈನ್ ಮೂಲಕ ಬೋಧನಾ ಮತ್ತು ಪ್ರಾಯೋಗಿಕ ತರಗತಿಗಳು ಪಡೆದುಕೊಳ್ಳುತ್ತಾರೆ ಎಂದು ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರ ಡಾ.ವಿವೇಕ್ ವೀರಯ್ಯ ತಿಳಿಸಿದರು. ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಲು ಶೇ.80ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಾಗಿರುತ್ತಾರೆ. ಅತೀ ಹೆಚ್ಚು ರ್ಯಾಂ ಕ್ ಪಡೆದವರಲ್ಲಿ ಅವರೇ ಮೇಲುಗೈ ಎಂದರು.ಸಾಹೇ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ.ಗುರುಶಂಕರ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಾಣಿಕೊಪ್ಪ, ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಪ್ರವೀಣ್ ಕುಡುವ, ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ ಡಾ.ಪ್ರಭಾಕರ್ ಜಿ ಎನ್, ಉಪ ಕುಲಸಚಿವರು ಆದ ಡಾ.ಸುದೀಪ್ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್‌ಪಿಜಿ ಪೂರೈಕೆ ಸುಧಾರಣೆ: ಸಪ್ಲೈ ಶೇ.20ರಷ್ಟು ಏರಿಕೆ
ಬಾಗಲಕೋಟೆ, ದಾವಣಗೆರೆ ಕ್ಷೇತ್ರಕ್ಕೆ ಏ.9ಕ್ಕೆ ಉಪಸಮರ