ನಾಳೆ 6ನೇ ವರ್ಷದ ಶ್ರೀ ಬಸವ ಜಯಂತಿ ಕಾರ್ಯಕ್ರಮ

KannadaprabhaNewsNetwork |  
Published : May 29, 2026, 02:45 AM IST
ಪತ್ರಿಕಾಗೋಷ್ಠಿ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ 30 ರಂದು 6ನೇ ವರ್ಷದ ಶ್ರೀ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ತಿಳಿಸಿದರು.

ಕನ್ನಡಪ್ರಭವಾರ್ತೆ ಕುಶಾಲನಗರ

ಕುಶಾಲನಗರ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ 30 ರಂದು 6ನೇ ವರ್ಷದ ಶ್ರೀ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ತಿಳಿಸಿದರು.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಮೇ 30 ರಂದು ಸಂಜೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ಬೈಚನಹಳ್ಳಿ ಶ್ರೀ ಮಾರಮ್ಮ ದೇವಾಲಯದಿಂದ ಸಭಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿಯ ದಿವ್ಯ ಸಾನಿಧ್ಯದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮಹಾಸಭಾದ ರಾಜ್ಯಾಧ್ಯಕ್ಷ ಡಾ.ಶಂಕರ ಮಹದೇವ ಬಿದರಿ ಉದ್ಘಾಟಿಸಲಿದ್ದಾರೆ ಎಂದರು.ಮಹಾಸಭಾದ ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಹೆಚ್.ಎಂ.ಮಧುಸೂದನ್ ಅಧ್ಯಕ್ಷತೆ ವಹಿಸಲಿದ್ದಾರೆ.ಕೊಡ್ಲಿಪೇಟೆ ಕಿರಿಕೊಡ್ಲಿ‌ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಆಶಯ ನುಡಿಗಳಾಡಲಿದ್ದಾರೆ. ಮೈಸೂರಿನ‌ ಬಸವಜ್ಞಾನ ಮಂದಿರದ ಪೀಠಾಧ್ಯಕ್ಷೆ ಮಾತೆ ಬಸವಾಂಜಲಿದೇವಿ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಾಸಭಾ ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಪೊಲೀಸ್ ಉಪ ಅಧೀಕ್ಷಕ ಪಿ.ಚಂದ್ರಶೇಖರ್ ಸೇರಿದಂತೆ ವಿವಿಧ ಮಠಾಧಿಪತಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ‌ ನೀಡಿದರು.ಗೋಷ್ಠಿಯಲ್ಲಿ ಘಟಕದ ಪ್ರಧಾನ ಕಾರ್ಯದರ್ಶಿ ಶುಭಶೇಖರ್, ಸಂಘಟನಾ ಕಾರ್ಯದರ್ಶಿ ಎಸ್.ಧರ್ಮೇಂದ್ರ, ಕಾರ್ಯದರ್ಶಿ ಷಣ್ಮುಖ, ನಿರ್ದೇಶಕ ಜೆ.ಎಸ್.ಉದಯಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಲ್ಲಟ ಜೆಸ್ಕಾಂ ಉಪ ಕಚೇರಿಗೆ ಬೆಂಕಿ: ಸಿಬ್ಬಂದಿಗೆ ಹಲ್ಲೆ, ದೂರು
3 ರಾಜ್ಯ ಸಿಎಂಗಳೆದುರು ಇಂದು ಟಿಬಿ ಡ್ಯಾಂ ಗೇಟ್‌ ಉದ್ಘಾಟನೆ