- ಬೆಳಗ್ಗೆ ಜಗದ್ಗುರು ಭಾವಚಿತ್ರ ಸಾರೋಟ್ ಮೆರವಣಿಗೆ: ಶಾಸಕ ಡಾ.ಶಿವಶಂಕರಪ್ಪ ಮಾಹಿತಿ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾವಣಗೆರೆ ಸಹಯೋಗದೊಂದಿಗೆ ಶ್ರೀಮದ್ ವೀರಶೈವ ಮಹಾಮತ ಸ್ಥಾಪನಾಚಾರ್ಯರಾದ ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಮಾ. 12ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಬೆಳಗ್ಗೆ 11.30 ರಿಂದ ಶ್ರೀ ಅಭಿನವ ರೇಣುಕ ಮಂದಿರದಲ್ಲಿ ಜನಜಾಗೃತಿ ಧಾರ್ಮಿಕ ಸಮಾರಂಭವು ಶ್ರೀ ರೇವಣಸಿದ್ಧ ಶಿವಾಚಾರ್ಯ ಶ್ರೀ, ಶ್ರೀ ರುದ್ರಮುನಿ ಶಿವಾಚಾರ್ಯರು, ಶ್ರೀ ಒಡೆಯರ್ ಚನ್ನಮಲ್ಲಕಾರ್ಜುನ ಶಿವಾಚಾರ್ಯರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ಓಂಕಾರ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಉಪಾದೇಶಾಮೃತ ನೀಡುವರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಗೌರವಾಧ್ಯಕ್ಷ ಎಸ್.ಜಿ. ಉಳವಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸುವರು ಎಂದಿದ್ದಾರೆ.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ವೀರಭದ್ರಪ್ಪ ತೆಲಿಗಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಹಾಗೂ ಲೋಕಕಲ್ಯಾಣ ವಿಷಯವಾಗಿ ಉಪನ್ಯಾಸ ನೀಡುವರು. ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ಶತಾಯುಷಿ, ಪಂಡಿತ ಎಸ್.ಎಂ. ರುದ್ರಮುನಿ ಅಯ್ಯ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.ಮುಖ್ಯ ಅತಿಥಿಗಳಾಗಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ, ಡೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಮಾಜಿ ಎಂಎಲ್‌ಸಿ ಡಾ. ಎ.ಎಚ್. ಶಿವಯೋಗಿಸ್ವಾಮಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಆಯುಕ್ತೆ ರೇಣುಕಾ, ಡಾ.ಅಥಣಿ ಎಸ್. ವೀರಣ್ಣ, ಬಿ.ಸಿ. ಉಮಾಪತಿ, ಅಣಬೇರು ರಾಜಣ್ಣ, ಚಂದ್ರಣ್ಣ ಐಗೂರು, ಎನ್.ಎ. ಮುರುಗೇಶ್, ದೇವರಮನಿ ಶಿವಕುಮಾರ್, ಕೆ.ಎಂ.ಸುರೇಶ್, ಬಿ.ಎಂ. ವಾಗೀಶ ಸ್ವಾಮಿ, ಎಚ್.ಎಂ. ರುದ್ರಮುನಿ ಸ್ವಾಮಿ ಪಾಲ್ಗೊಳ್ಳುವರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಗುರುರಕ್ಷೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
- - - -10ಕೆಡಿವಿಜಿ44.ಜೆಪಿಜಿ: ಡಾ.ಶಾಮನೂರು ಶಿವಶಂಕರಪ್ಪ