ನಾಳೆ ಆನಗೋಡು ಬಳಿ ರೈತ ಹುತಾತ್ಮರ ಸ್ಮರಣೆ: ಪುಟ್ಟಸ್ವಾಮಿ

KannadaprabhaNewsNetwork |  
Published : Sep 12, 2024, 01:56 AM IST
11ಕೆಡಿವಿಜಿ12-ದಾವಣಗೆರೆಯಲ್ಲಿ ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ಅಧ್ಯಕ್ಷ ಎನ್.ಜಿ.ಪುಟ್ಟಸ್ವಾಮಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಪೊಲೀಸ್ ಗೋಲಿಬಾರ್‌ನಲ್ಲಿ ಹುತಾತ್ಮರಾಗಿದ್ದ ದಿವಂಗತ ಓಬೇನಹಳ್ಳಿ ಕಲ್ಲಿಂಗಪ್ಪ, ಸಿದ್ದನೂರು ನಾಗರಾಜಾಚಾರ್‌ರ 32ನೇ ವರ್ಷದ ರೈತ ಹುತಾತ್ಮರ ದಿನಾಚರಣೆಯನ್ನು ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ಹಾಗೂ ರೈತಪರ ಸಂಘಟನೆಗಳಿಂದ ಸೆ.13ರಂದು ತಾಲೂಕಿನ ಆನಗೋಡು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಹುಳುಪಿನಕಟ್ಟೆ ಕ್ರಾಸ್ ಬಳಿ ಹುತಾತ್ಮರ ಸಮಾಧಿ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್.ಜಿ.ಪುಟ್ಟಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ದಾವಣಗೆರೆ: ಪೊಲೀಸ್ ಗೋಲಿಬಾರ್‌ನಲ್ಲಿ ಹುತಾತ್ಮರಾಗಿದ್ದ ದಿವಂಗತ ಓಬೇನಹಳ್ಳಿ ಕಲ್ಲಿಂಗಪ್ಪ, ಸಿದ್ದನೂರು ನಾಗರಾಜಾಚಾರ್‌ರ 32ನೇ ವರ್ಷದ ರೈತ ಹುತಾತ್ಮರ ದಿನಾಚರಣೆಯನ್ನು ರೈತ ಹುತಾತ್ಮರ ಸ್ಮರಣಾರ್ಥ ಸಮಿತಿ ಹಾಗೂ ರೈತಪರ ಸಂಘಟನೆಗಳಿಂದ ಸೆ.13ರಂದು ತಾಲೂಕಿನ ಆನಗೋಡು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-48ರ ಹುಳುಪಿನಕಟ್ಟೆ ಕ್ರಾಸ್ ಬಳಿ ಹುತಾತ್ಮರ ಸಮಾಧಿ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಎನ್.ಜಿ.ಪುಟ್ಟಸ್ವಾಮಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 12 ಗಂಟೆಗೆ ಹುಳುಪಿನಕಟ್ಟೆ ಬಳಿ ಹುತಾತ್ಮರ ಸಮಾಧಿ ಸ್ಥಳದಲ್ಲಿ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಹುತಾತ್ಮರ ಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್.ಜಯದೇವ ನಾಯ್ಕ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಸಮಿತಿಯ ಗೌರವಾಧ್ಯಕ್ಷ ಆನಗೋಡು ನಂಜುಂಡಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ, ಜಿಪಂ ಸಿಇಒ ಸುರೇಶ ಇಟ್ನಾಳ್‌, ಉಪವಿಭಾಗಾಧಿಕಾರಿ ಸಂತೋಷಕುಮಾರ, ಇಇ ಮಂಜುನಾಥ, ಎಇಇ ಕೆ.ಎನ್. ತೀರ್ಥೇಶ, ತಹಸೀಲ್ದಾರ್ ಡಾ. ಎಂ.ವಿ. ಅಶ್ವತ್ಥ್‌, ಎಚ್.ಟಾಟಾ ಶಿವನ್‌, ತಾಪಂ ಇಓ ರಾಮಭೋವಿ, ಎಇ ಕೆ.ಎನ್.ಶಿವಮೂರ್ತಿ ಭಾಗವಹಿಸುವರು ಎಂದು ಹೇಳಿದರು.

ಸಮಿತಿ ಮುಖಂಡರಾದ ಶಾಬನೂರು ಎಚ್.ಆರ್.ಲಿಂಗರಾಜ, ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ, ಆವರಗೆರೆ ರುದ್ರಮುನಿ, ಎಚ್.ಎನ್.ಶಿವಕುಮಾರ, ತುಂಬಿಗೆರೆ ಗಂಗಾಧರಪ್ಪ, ರಾಜಶೇಖರ, ಮೋಹನಕುಮಾರ, ಮಟ್ಟಿಕಲ್ಲು ವೀರಭದ್ರಸ್ವಾಮಿ, ಅಣಜಿ ಬಸವರಾಜ, ಚಟ್ಟೋಬನಹಳ್ಳಿ ಕಂಪ್ಲೇಶ ಇತರರು ಇದ್ದರು.

- - -

-11ಕೆಡಿವಿಜಿ12:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!