ಕನ್ನಡಪ್ರಭ ವಾರ್ತೆ ಶಿವಮೊಗ್ಗ ಶಿರಸಿ ತಾಲೂಕಿನ ಮಠದೇವಳದ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ಫೆ.22ರಂದು ಶಿಷ್ಯ ಸ್ವೀಕಾರ ಮಹೋತ್ಸವ ಆಯೋಜಿಸಲಾಗಿದೆ ಎಂದು ವಕೀಲ ಅಶೋಕ್ ಜಿ. ಭಟ್ ಹೇಳಿದರು.
1300 ವರ್ಷಗಳ ಇತಿಹಾಸ:
ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಅತ್ಯಂತ ಪ್ರಾಚೀನವಾದುದು. ಶಂಕರಾಚಾರ್ಯ ಪರಂಪರೆ ಇತಿಹಾಸವನ್ನು ಹೊಂದಿದೆ. 1300 ವರ್ಷಗಳ ಇತಿಹಾಸ ಜೊಂದಿದೆ. ಅತ್ಯಂತ ಸಾಮಾಜಿಕ ಕಾರ್ಯಕ್ರಮಗಳು, ಚಟುವಟಿಕೆಗಳನ್ನು ನಡೆಸುತ್ತಿದೆ. ಇಂತಹ ಇತಿಹಾಸವುಳ್ಳ ಮಠಕ್ಕೆ ಒಳ್ಳೆಯ ಉತ್ತರಾಧಿಕಾರಿ ಶಿಷ್ಯರ ಅಗತ್ಯವಿದೆ. ಈಗಿರುವ ಶ್ರೀಗಳ ನಿರ್ಣಯದಂತೆ ಕಾರ್ಯಕ್ರಮ ನಡೆಯಲಿದೆ ಎಂದರು.ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ಫೆ.18ರಿಂದ 22 ರವರೆಗೆ ಶಿಷ್ಯ ಸ್ವೀಕಾರ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದರ ಅಂಗವಾಗಿ ಹಲವು ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯುತ್ತಿವೆ. ಮುಖ್ಯವಾಗಿ 22ರಂದು ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
22ರ ಕಾರ್ಯಕ್ರಮದಲ್ಲಿ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳ ವಿರಚಿತ ಯೋಗವಾಸಿಷ್ಠ ಪ್ರಥಮ ಸಂಪುಟ ಕೂಡ ಬಿಡುಗಡೆಯಾಗಲಿದೆ. ಕಾರ್ಯಕ್ರಮದಲ್ಲಿ ಹಲವು ಸ್ವಾಮೀಜಿಗಳು ಉಪಸ್ಥಿತರಿರುವರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಅವರೊಂದಿಗೆ ಮಂತ್ರಿಗಳು, ಜನಪ್ರತಿನಿಧಿಗಳು, ವಿದ್ವಾಂಸರು ಮತ್ತು ಗಣ್ಯರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಲಕ್ಷ್ಮೀ ನಾರಾಯಣ ಜೋಷಿ, ಡಿ.ಎಂ. ಹೆಗಡೆ, ದೇವೇಂದ್ರ ಭಟ್, ಪಿ.ಪಿ. ಹೆಗಡೆ, ಬಾಲಾಜಿ ದೇಶಪಾಂಡೆ, ಮೋಹನ್ ಹೆಗಡೆ ಉಪಸ್ಥಿತರಿದ್ದರು.