ನಾಳೆ ವೀರಶೈವ ಲಿಂಗಾಯತ ಸಂಘದ ಪ್ರಥಮ ವಾರ್ಷಿಕೋತ್ಸವ

KannadaprabhaNewsNetwork |  
Published : Jan 28, 2025, 12:47 AM IST
ಯಾದಗಿರಿ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಮ್ಮ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದ ಭಿತ್ತಿ ಪತ್ರಿಕೆ ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

Tomorrow is the first anniversary of the Veerashaiva Lingayat Sangha.

- ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿಯವರಿಗೆ ಪ್ರಥಮ ಬಾರಿಗೆ ಪ್ರಶಸ್ತಿ ಪ್ರದಾನ

ಕನ್ನಡಪ್ರಭ ವಾರ್ತೆ ಸುರಪುರ

ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಜ.29 ರಂದು ಲಕ್ಷ್ಮಿಪುರ-ಬಿಜಾಸಪುರ ಮಾರ್ಗದ ಶ್ರೀಗಿರಿ ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಅಮ್ಮಾಪುರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಉದ್ಘಾಟನೆಯನ್ನು ಶ್ರೀಗಿರಿ ಮಠದಲ್ಲಿಯೇ ನಡೆಸಲಾಗಿತ್ತು. ಈಗ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನೂ ಅಲ್ಲಿಯೇ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಸೇವಾ ರತ್ನ ಪ್ರಶಸ್ತಿಯನ್ನು ಆರಂಭಿಸಲಾಗಿದ್ದು, ಪ್ರಥಮ ಬಾರಿಗೆ ಈ ಪ್ರಶಸ್ತಿಯನ್ನು ನಿವೃತ್ತ ಪೊಲೀಸ್ ಮಹಾನಿರ್ದೇಶಕರು ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಎಂ. ಬಿದರಿ ಅವರಿಗೆ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಗಿರಿ ಮಠದ ಡಾ. ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ವಹಿಸಲಿದ್ದು, ಕೊಡೇಕಲ್ ದುರುದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷರಾದ ಡಾ. ಸುರೇಶ ಸಜ್ಜನ್, ಯಾದಗಿರಿಯ ಯುವ ಮುಖಂಡರಾದ ಮಹೇಶರೆಡ್ಡಿ ಮುದ್ನಾಳ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಸಮಾಜ ಸೇವಕರಾದ ಶರಣು ನಾಯಕ ಬೈರಿಮರಡಿ, ಕರವೇ ಕಲ್ಯಾಣ ಕರ್ನಾಟಕ ಅಧ್ಯಕ್ಷ ಶಿವಮೋನಯ್ಯ ಎಲ್.ಡಿ. ನಾಯಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ಸಿದ್ಧಲಿಂಗರೆಡ್ಡಿ, ತಾಲೂಕಾಧ್ಯಕ್ಷ ಮಲ್ಲು ಬಾದ್ಯಾಪುರ, ಹುಣಸಗಿ ತಾಲೂಕಾಧ್ಯಕ್ಷ ವಿರೇಶ ಹೂಗಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರೆಡ್ಡಿ ಸರ್ಪಾಟೀಲ್, ಮುಖಂಡ ಮಲ್ಲಣ್ಣ ಸಾಹು, ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸನಗೌಡ ಕಮತಗಿ, ದೇವು ಕುಂಬಾರ ಇದ್ದರು.

------

27ವೈಡಿಆರ್8: ಯಾದಗಿರಿ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಮ್ಮ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮದ ಭಿತ್ತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.

---000---

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ