ನಾಳೆ ಯಾಳವಾರ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ ಸುವರ್ಣ ಮಹೋತ್ಸವ

KannadaprabhaNewsNetwork |  
Published : Jul 04, 2026, 02:45 AM IST
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ತಪಾಸಣೆ | Kannada Prabha

ಸಾರಾಂಶ

ದೇವರಹಿಪ್ಪರಗಿ ತಾಲೂಕಿನ ಯಾಳವಾರ ಗ್ರಾಮದ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ ನೂತನ ಕಟ್ಟಡ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟನೆ ಮತ್ತು ಸುವರ್ಣ ಮಹೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ, ಗುರುವಂದನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜು.5 ರಂದು ಜರುಗಲಿವೆ ಎಂದು ಸಂಸ್ಥೆಯ ಅಧ್ಯಕ್ಷ ರಾಜುಗೌಡ.ಸಂ.ನಾಡಗೌಡ್ರ ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ತಾಲೂಕಿನ ಯಾಳವಾರ ಗ್ರಾಮದ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ ನೂತನ ಕಟ್ಟಡ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟನೆ ಮತ್ತು ಸುವರ್ಣ ಮಹೋತ್ಸವದ ಅಂಗವಾಗಿ ಸ್ಮರಣ ಸಂಚಿಕೆ ಬಿಡುಗಡೆ, ಗುರುವಂದನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜು.5 ರಂದು ಜರುಗಲಿವೆ ಎಂದು ಸಂಸ್ಥೆಯ ಅಧ್ಯಕ್ಷ ರಾಜುಗೌಡ.ಸಂ.ನಾಡಗೌಡ್ರ ಹೇಳಿದರು.

ತಾಲೂಕಿನ ಯಾಳವಾರ ಗ್ರಾಮದ ಸೋಮೇಶ್ವರ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ಸಂಘದ ಸುವರ್ಣ ಮಹೋತ್ಸವದ ಕಾರ್ಯಕ್ರಮಗಳು ಬಾಳೆಹೊನ್ನುರ ರಂಭಾಪುರಿ ವೀರ ಸಿಂಹಾಸನಾಧೀಶ್ವರ ಜಗದ್ಗುರು ಡಾ.ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜ್ಯ ದೇಶಿಕೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ನಡೆಯಲಿವೆ. ಕಾರ್ಯಕ್ರಮದ ನೇತೃತ್ವ ಯಾಳವಾರ ಗುರುಮಠದ ದಾರುಕಲಿಂಗ ಶಿವಾಚಾರ್ಯರು ಹಾಗೂ ಆಲಮೇಲ ಗುರು ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸುವವರು. ಹರಳಕಟ್ಟೆಯ ಪ.ಪೂ ಸದ್ಗುರು ನಿಜಗುಣ ಮಹಾಸ್ವಾಮಿಗಳು, ಕಡಕೋಳ ಸಂಸ್ಥಾತನ ಮಠದ ಪಪೂ ರಾಜಗುರು ಮಹಾಲಿಂಗ ಸ್ವಾಮಿಗಳು ಹಾಗೂ ದೇವರಹಿಪ್ಪರಗಿ ಪರದೇಶಿ ಮಠದ ಶಿವಯೋಗಿ ಸ್ವಾಮಿಜಿಗಳು ವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮೇಶ್ವರ ವಿದ್ಯಾವರ್ಧಕ ಸಂಘದ ಹಾಗೂ ಸ್ಥಳೀಯ ಪಿಕೆಪಿಎಸ್ ಅಧ್ಯಕ್ಷ ರಾಜುಗೌಡ ಸಂಗನಗೌಡ ನಾಡಗೌಡ್ರ, ಕಾರ್ಯಕ್ರಮದ ಜ್ಯೋತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಸಂಸದರಾದ ರಮೇಶ ಜಿಗಜಿಣಗಿ ಬೆಳಗಿಸುವರು. ಸ್ಮರಣ ಸಂಚಿಕೆಯನ್ನು ಕೆ.ಎಸ್.ಐ.ಡಿ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್.ನಾಡಗೌಡ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಹಾಗೂ ಸ್ಥಳೀಯ ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಬಿಡುಗಡೆಗೊಳಿಸುವರು ಎಂದರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಶಿವಾನಂದ ಪಾಟೀಲ, ಮಾಜಿ ಶಾಸಕರುಗಳಾದ ಎಸ್.ಎಂ.ದೇಸಾಯಿ, ಸೋಮನಗೌಡ ಪಾಟೀಲ ಸಾಸನೂರ, ಶರಣಪ್ಪ ಸುಣಗಾರ, ವಿ.ಪ ಸದಸ್ಯರುಗಳಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಮಾಜಿ ಎಂಎಲ್ಸಿ ಅರುಣ ಶಹಾಪುರ, ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ, ಆನಂದಗೌಡ ದೋಡಮನಿ, ಸುಭಾಷ ಛಾಯಗೋಳ, ಬಸನಗೌಡ ಪಾಟೀಲ, ಭೀಮನಗೌಡ ಪಾಟೀಲ, ಶರಣಗೌಡ ನ್ಯಾಮಣ್ಣವರ ಸೇರಿದಂತೆ ಹಲವಾರು ರಾಜಕೀಯ ಮುಖಂಡರು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನದ ಗುರುವಂದನೆ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮಾಗಮ ಕಾರ್ಯಕ್ರಮದಲ್ಲಿ ಉಪನ್ಯಾಸ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 1970-2026ರವರೆಗೆ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಮಾಜಿ ಸಚಿವರು, ಶಾಸಕರು, ವಿ.ಪ ಸದಸ್ಯರು, ರಾಜಕೀಯ ಮುಖಂಡರು, ಸಂಸ್ಥೆಯ ನಿರ್ದೇಶಕ ಮಂಡಳಿ, ವಿವಿಧ ಘಟಕಗಳ ಪದಾಧಿಕಾರಿಗಳ, ಗ್ರಾಮದ ಪ್ರಮುಖರು, ಗಣ್ಯರು ಸೇರಿದಂತೆ ಸುತ್ತ-ಮುತ್ತಲಿನ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ನಂತರ ರಾತ್ರಿ ವಿಜಯಪುರದ ಮಂದಾರ ಮೆಲೋಡೀಸ್ ಹಾಗೂ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಬಿ-ಜಿ ರ‍್ಯಾಮ್ ಜಿ ಸೌಲಭ್ಯ ಅರ್ಹ ಕುಟುಂಬ ಪಡೆದುಕೊಳ್ಳಲಿ: ಮೇತ್ರಿ
ಪ್ರಪಂಚದಲ್ಲಿಯೇ ಭಾರತೀಯರ ಇಂಗ್ಲಿಷ್‌ ಭಾಷೆ ಪರಿಶುದ್ಧ: ಡಾ.ದೀಪಕ ಶಿಂಧೆ