ಗದಗ: ಸೆ. 20ರಂದು ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗದುಗಿಗೆ ಆಗಮಿಸಲಿದ್ದಾರೆ ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಾಮಫಲಕ ಅನಾವರಣ ಮಾಡಲಿದ್ದಾರೆ. ಗದಗ ತಾಲೂಕು ಕುರುಬರ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಹಲವಾರು ಸಚಿವರು, ಶಾಸಕರು, ಸಂಸದರು, ಮತ್ತು ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ, ಕಾರ್ಮಿಕ ಸಚಿವ ಸಂತೋಷ ಲಾಡ್, ಕರ್ನಾಟಕ ರಾಜ್ಯ ಪಂಚ ಯೋಜನಾ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಮ್. ರೇವಣ್ಣ, ವಿಪ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಹಾವೇರಿ-ಗದಗ ಲೋಕಸಭಾ ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುವರು ಎಂದರು.ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಬಿ.ಆರ್.ಯಾವಗಲ್ಲ, ಫಕೀರಪ್ಪ ಹೆಬಸೂರ, ರುದ್ರಣ್ಣ ಗುಳಗುಳಿ, ವಾಸಪ್ಪ ಕುರುಡಗಿ, ಪ್ರಕಾಶ ಕರಿ, ವಾಸಣ್ಣ ಕುರಡಗಿ, ಮಂಜು ಜಡಿ ಹಾಗೂ ಕುರುಬ ಸಮಾಜದ ಹಿರಿಯರು, ವಿವಿಧ ಘಟಕಗಳ ಪದಾಧಿಕಾರಿಗಳು ಇತರರು ಉಪಸ್ಥಿತರಿದ್ದರು.