ನಾಳೆ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ

KannadaprabhaNewsNetwork | Published : Jun 2, 2024 1:45 AM

ಸಾರಾಂಶ

ಜೂ.೪ರಂದು ಲೋಕಸಭಾ ಮತ ಎಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನ ಪೂರ್ವ ದಿನ ಮತ್ತು ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ

ಮತದಾರರ ಮಾಹಿತಿ ಕೇಂದ್ರ ಸ್ಥಾಪನೆ: ಜಿಲ್ಲಾಧಿಕಾರಿ ಮಾಹಿತಿ

ಮತದಾರರ ಮಾಹಿತಿ ಕೇಂದ್ರ ಸ್ಥಾಪನೆ, ಬೆಳಗ್ಗೆ 8 ಗಂಟೆಯಿಂದ ಮತದಾನ, ಮದ್ಯ ಮಾರಾಟ ನಿಷೇಧ, ಜಿಲ್ಲಾಧಿಕಾರಿ ಅಕ್ರಂ ಪಾಷ, ಕೋಲಾರ

ಜೂ.೪ರಂದು ಲೋಕಸಭಾ ಮತ ಎಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನ ಪೂರ್ವ ದಿನ ಮತ್ತು ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ

ಕನ್ನಡಪ್ರಭ ವಾರ್ತೆ ಕೋಲಾರಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ-೨೦೨೪ರ ಮತದಾನವು ೨೦೨೪ರ ಜೂ.೩ರಂದು ಬೆಳಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆ ವರೆಗೆ ನಡೆಯಲಿದೆಂದು ಕೋಲಾರ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಪಟ್ಟಂತೆ ಯಾವುದಾದರೂ ಮಾಹಿತಿ ಬೇಕಾದಲ್ಲಿ ಸಾರ್ವಜನಿಕರು, ಮತದಾರರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿರುವ ಮತದಾರರ ಮಾಹಿತಿ ಕೇಂದ್ರ ದೂ.ಸಂಖ್ಯೆ ೧೯೫೦ ಹಾಗೂ ೦೮೧೫೨೨೪೩೫೦೭ ಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ.

ಮದ್ಯ ಮಾರಾಟ ನಿಷೇಧ

ಭಾರತ ಚುನಾವಣಾ ಆಯೋಗದ ಆದೇಶದಂತೆ ಮತದಾನ ಅಂತ್ಯಗೊಳ್ಳುವ ೪೮ ಗಂಟೆಗಳ ಪೂರ್ವದಿಂದ ಅಂದರೆ ಜೂ.೧ ಸಂಜೆ ೫ ಗಂಟೆಯಿಂದ ಜೂ.೩ ಮಧ್ಯರಾತ್ರಿಯವರೆಗೆ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಚುನಾವಣಾ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳು ಮುಚ್ಚಲ್ಪಡುತ್ತವೆ ಎಂದು ತಿಳಿಸಿದರು.ಜೂ.೪ರಂದು ಮತ ಎಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತದಾನ ಪೂರ್ವ ದಿನ ಮತ್ತು ಮತ ಎಣಿಕೆ ದಿನ ಅಂದರೆ ಜೂ.೪ ಬೆಳಗ್ಗೆ ೬ ಗಂಟೆಯಿಂದ ಜೂ.೫ ಬೆಳಗ್ಗೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯಪಾನ, ಮದ್ಯಮಾರಾಟ, ಮದ್ಯ ಸಾಗಾಣಿಕೆ ಮತ್ತು ಮದ್ಯ ಸಂಗ್ರಹಣೆ ನಿಷೇಧಿಸಿ ಜಿಲ್ಲಾಧಿಕಾರಿ ಅಕ್ರಂಪಾ? ಆದೇಶಿಸಿದ್ದಾರೆ.

ಶಾಂತಿ ಪಾಲನೆಗೆ ಅಗತ್ಯ ಕ್ರಮ

ಜಿಲ್ಲೆಯ ಎಲ್ಲಾ ವಿಧಾನಸಭಾ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ. ಆದೇಶ ಜಾರಿ ಸಮಯದಲ್ಲಿ ಯಾವತ್ತೂ ಭಾರತೀಯ ತಯಾರಿಕೆಯ ಮದ್ಯದ ಅಂಗಡಿಗಳು, ಬಿಯರ್, ಬಾರ್‌ಗಳು, ಕ್ಲಬ್‌ಗಳು, ಮತ್ತು ಮದ್ಯದ ಡಿಪೋಗಳನ್ನು ಮುಚ್ಚತಕ್ಕದ್ದು ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತಿ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್‌ಸ್ಪೆಕ್ಟರ್, ಉಪವಿಭಾಗದ ಅಬಕಾರಿ ಅಧೀಕ್ಷಕ ಅವಶ್ಯಕತೆ ಕಂಡು ಬಂದಲ್ಲಿ ಶಾಂತಿ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ಆದೇಶ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಆದೇಶದಲ್ಲಿ ತಿಳಿಸಿದ್ದಾರೆ.

Share this article