ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸುವರು. ಸೆಲ್ಕೋ ಇಂಡಿಯಾ ಸಹ ಸಂಸ್ಥಾಪಕ, ಸೆಲ್ಕೋ ಫೌಂಡೇಶನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಹರೀಶ ಹಂದೆ ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಹಾಜರಿರುವರು ಎಂದರು.
ಈ ಘಟಿಕೋತ್ಸವ ಸಮಾರಂಭದಲ್ಲಿ ಎಂಬಿಎ-4514, ಎಂಸಿಎ- 4024, ಎಂಟೆಕ್- 920, ಎಂ ಆರ್ಕ್- 44, ಎಂ. ಪ್ಲಾನ್ 27, ಸಂಶೋಧನಾ ಪದವಿಗಳಾದ ಫೀ. ಎಚ್‌ಡಿ 667 ಮತ್ತು 2 ಎಂಎಸ್ಸಿ ಬೈರಿಸರ್ಚ್, ಮತ್ತು 2 ಇಂಟಿಗ್ರೇಟೆಡ್ ಡುಯಲ್ ಡಿಗ್ರಿ ಟು ರಿಸರ್ಚ್ ಪದವಿ ನೀಡಲಾಗುವುದು ಎಂದು ಹೇಳಿದರು.ಕರ್ನಾಟಕವನ್ನು ಜಾಗತಿಕ ಅಧ್ಯಯನ ತಾಣವನ್ನಾಗಿ ರೂಪಿಸುವ ಮತ್ತು ಶಿಕ್ಷಣದ ಅಂತಾರಾಷ್ಟ್ರೀಕರಣಕ್ಕೆ ವಿ.ಟಿ.ಯು.ಸಂಶೋಧನೆಗೆ ಮತ್ತು ನಾವೀನ್ಯತೆಗೆ ಒತ್ತು ಕೊಡುವ ಉದ್ದೇಶದಿಂದ ಮತ್ತು ಹೊಸದಾದ ಬೋಧನಾ ಆಯಾಮಗಳ ಬಗ್ಗೆ ಚಿಂತನೆ ನಡೆಸಿದ್ದು, ಉತ್ತಮ ಗುಣಮಟ್ಟದ ವಿದೇಶಿ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಹಾಗೂ ಔದ್ಯೋಗಿಕ ರಂಗದ ದಿಗ್ಗಜರೊಂದಿಗೆ ಇಂಟರ್ನಶಿಪ್ , ತರಬೇತಿ ರೀತಿಯಲ್ಲಿ ಅಧ್ಯಾಪಕರು, ವಿದ್ಯಾರ್ಥಿ ವಿನಿಮಯದಂತಹ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಟಿಯು ಕುಲಸಚಿವರಾದ ಪ್ರೊ. ಟಿ.ಎನ್.ಶ್ರೀನಿವಾಸ, ಪ್ರೊ.ಬಿ.ಈ.ರಂಗಸ್ವಾಮಿ ಉಪಸ್ಥಿತರಿದ್ದರು.---
ಬಾಕ್ಸ್....ತನು ಜಿ.ಗೆ ನಾಲ್ಕು ಚಿನ್ನದ ಪದಕ
ಬೆಂಗಳೂರಿನ ಹುಂದನಹಳ್ಳಿಯ ಸಿಎಂಆರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿನಿ ತನು ಜಿ. ಅವರು 4 ಚಿನ್ನದ ಪದಕ ಬಾಜಿಕೊಂಡಿದ್ದಾಳೆ. ಹುಬ್ಬಳ್ಳಿಯ ಕೆಎಲ್‌ಇ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾರ್ಥಿನಿ ಅಕ್ಷತಾ ಎಸ್ ನಾಯಕ, ದಾವಣಗೆರೆಯ ಯುಬಿಡಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಪೂಜಾ ಎಂ ಅವರು ತಲಾ 3 ಚಿನ್ನದ ಪದಕ ಪಡೆದಿದ್ದಾರೆ. ಬೆಳಗಾವಿಯ ಎಸ್.ಜಿ.ಬಾಳೆಕುಂದ್ರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿನಿ ಕ್ರಾಂತಿ ಉತ್ತಮ ಮೋರೆ, ಚಿಕ್ಕಮಗಳೂರಿನ ಆದಿಚುಂಚನಗಿರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿ ಚೇತನ ಎಚ್.ಪಿ ಮತ್ತು ದಾವಣಗೆರೆಯ ಯುಬಿಡಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿತ್ಯಾ ಎ.ಎಸ್ ಅವರು ತಲಾ 2 ಚಿನ್ನದ ಪದಕ ಪಡೆದಿದ್ದಾರೆ.