ನಾಳೆ ಕೆ.ಎಚ್. ಪಾಟೀಲ 101ನೇ ಜಯಂತ್ಯುತ್ಸವ: ಡಿ.ಆರ್. ಪಾಟೀಲ

KannadaprabhaNewsNetwork |  
Published : Mar 15, 2026, 02:15 AM IST
ಸುದ್ದಿಗೋಷ್ಠಿಯಲ್ಲಿ ಡಿ.ಆರ್.ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಸಹಕಾರಿ ರಂಗದ ಭೀಷ್ಮ, ಮಾಜಿ ಸಚಿವ ದಿ. ಕೆ.ಎಚ್. ಪಾಟೀಲರ 101ನೇ ಜಯಂತ್ಯುತ್ಸವ ಸಮಾರಂಭವನ್ನು ಮಾ. 16ರಂದು ಬೆಳಗ್ಗೆ 10.30ಕ್ಕೆ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.

ಗದಗ: ಸಹಕಾರಿ ರಂಗದ ಭೀಷ್ಮ, ಮಾಜಿ ಸಚಿವ ದಿ. ಕೆ.ಎಚ್. ಪಾಟೀಲರ 101ನೇ ಜಯಂತ್ಯುತ್ಸವ ಸಮಾರಂಭವನ್ನು ಮಾ. 16ರಂದು ಬೆಳಗ್ಗೆ 10.30ಕ್ಕೆ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿವರ ನೀಡಿದರು. ಕೆ.ಎಚ್. ಪಾಟೀಲರ 101 ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಈ ಬಾರಿ ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ದಿ. ಕಾಟನ್ ಸೇಲ್ ಸೊಸೈಟಿ ಶತಮಾನೋತ್ಸವದ ನೂತನ ಕಟ್ಟಡದ ಉದ್ಘಾಟನೆ ಹಾಗೂ ರಾಜೇಶ್ವರಿ ವಿದ್ಯಾನಿಕೇತನದ ವರ್ಗಗಳ ಸಂಕೀರ್ಣವನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಲಿದ್ದಾರೆ. ಅದೇ ರೀತಿ ಕೆ.ಎಚ್. ಪಾಟೀಲ ಆಸ್ಪತ್ರೆಯ ನೂತನ ಕಟ್ಡಡದ ಭೂಮಿಪೂಜೆ ಮತ್ತು ಆಸ್ಪತ್ರೆಯಲ್ಲಿ ಈ ವರ್ಷ 100 ಉಚಿತ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಯೋಜನೆಗೆ ಚಾಲನೆ, 12 ಉಚಿತ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ, ಒಂದು ವರ್ಷದಲ್ಲಿ ಆಸ್ಪತ್ರೆಯಲ್ಲಿ ಜನಿಸುವ ಹೆಣ್ಣು ಮಗುವಿಗೆ ಹೆರಿಗೆ ವೆಚ್ಚ ಉಚಿತ, ಒಂದು ವರ್ಷದಲ್ಲಿ 1000 ಮೋತಿಬಿಂದು ಶಸ್ತ್ರಚಿಕಿತ್ಸೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಲಿದ್ದಾರೆ.

ಅದೇ ರೀತಿ ಜಿಲ್ಲಾಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಮತ್ತು ಅವರ ಸಂಬಂಧಿಗಳಿಗೆ ಅನುಕೂಲ ಆಗಲಿ ಎನ್ನುವ ಉದ್ದೇಶದಿಂದ ಕೆ.ಎಚ್.ಪಾಟೀಲ ಪ್ರತಿಷ್ಠಾನದ ವತಿಯಿಂದ ಊಟ, ಉಪಹಾರ ಒದಗಿಸುವ ಬುತ್ತಿ ಎನ್ನುವ ಆಲಯವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ರಾಜ್ಯಸಭಾ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಮಾಜಿ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಈ ಬಾರಿಯ ಕೆ.ಎಚ್. ಪಾಟೀಲ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ₹5 ಲಕ್ಷ, ಸ್ಮರಣಿಕೆ ಒಳಗೊಂಡಿದೆ. ಅಲ್ಲದೇ ಅವಿಭಜಿತ ಧಾರವಾಡ ಜಿಲ್ಲೆಯ ಕೆ.ಎಚ್. ಪಾಟೀಲ ಅವರ 100ಕ್ಕೂ ಹೆಚ್ಚು ಒಡನಾಡಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ.

ಕಾರ್ಯಕ್ರಮಕ್ಕೆ ಉಪಸಭಾಪತಿ ರುದ್ರಪ್ಪ ಲಮಾಣಿ, ರೋಣ ಶಾಸಕ ಜಿ.ಎಸ್. ಪಾಟೀಲ, ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ನರಗುಂದ ಶಾಸಕ ಸಿ.ಸಿ. ಪಾಟೀಲ, ವಿಪ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವರಾದ ಎ.ಎಂ. ಹಿಂಡಸಗೇರಿ, ಬಿ.ಆರ್. ಯಾವಗಲ್, ಮಾಜಿ ಸಂಸದ ಐ.ಜಿ. ಸನದಿ ಭಾಗವಹಿಸುವರು.

ಶಾಸಕರಾದ ಬಸವರಾಜ ಶಿವಣ್ಣವರ, ಪ್ರಸಾದ ಅಬ್ಬಯ್ಯ, ಯು.ಬಿ. ಬಣಕಾರ, ಎನ್.ಎಚ್. ಕೋನರೆಡ್ಡಿ, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ, ಯಾಸೀರ್ ಅಹ್ಮದ್ ಖಾನ್ ಪಠಾಣ, ವಿಪ ಸದಸ್ಯ ಎಫ್.ಎಚ್.‌ ಜಕ್ಕಪ್ಪನವರ, ಹೆಸ್ಕಾಂ ಅಧ್ಯಕ್ಷ ಅಜ್ಜೀಂಪೀರ ಖಾದ್ರಿ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆನಂದ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಗೋಷ್ಠಿಯಲ್ಲಿ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ಮುಖಂಡರಾದ ಪ್ರಭು ಬುರಬುರೆ, ಜೆ.ಕೆ. ಜಮಾದಾರ, ಕೃಷ್ಣಗೌಡ ಪಾಟೀಲ, ಬಸವರಾಜ ಸುಂಕಾಪುರ, ಅಶೋಕ ಮಂದಾಲಿ, ಸಿದ್ಧಲಿಂಗೇಶ ಪಾಟೀಲ, ಬಸವರಾಜ ಕಟ್ಟಿಮನಿ, ರವಿ ಮೂಲಿಮನಿ, ಶಕುಂತಲಾ ಅಕ್ಕಿ, ಉಮರಫಾರೂಕ್ ಹುಬ್ಬಳ್ಳಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿಂಗರಾಜ ಪಾಟೀಲಗೆ ವಿಜಯೇಂದ್ರ, ಜೋಶಿ ಸಮಾಧಾನ
ಉತ್ತಮ ಶಿಕ್ಷಕರಾಗಲು ಪಾಠದ ಜ್ಞಾನದ ಜತೆಗೆ ಮಾನವೀಯ ಮೌಲ್ಯಗಳು ಅಗತ್ಯ