ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿ ಪರೀಕ್ಷೆಯ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಅ.೨೬ರಂದು ಮಧ್ಯಾಹ್ನ ೨.೩೦ರಿಂದ ೪.೩೦ ಗಂಟೆಯವರೆಗೆ ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಕಡ್ಡಾಯ ಕನ್ನಡ ಪರೀಕ್ಷೆಯು ಮಂಡ್ಯ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡ, ಸರ್ಕಾರಿ ಪದವಿ ಪೂರ್ವ ಕಾಲೇಜು (ಮಾಜಿಪುರ ಸಭೆ) ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಅರ್ಕೇಶ್ವರ ನಗರದಲ್ಲಿ ಒಟ್ಟು ೩ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು ೧೧೪೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ನುಡಿದರು.ಅ.೨೭ ರಂದು ಬೆಳಗ್ಗೆ ೧೦.೩೦ ರಿಂದ ೧೨.೩೦ ಹಾಗೂ ಮಧ್ಯಾಹ್ನ ೨.೩೦ ರಿಂದ ೪.೩೦ ಗಂಟೆಯವರೆಗೆ ಎರಡು ಅಧಿವೇಶನಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ೧೦,೩೦೧ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಮಂಡ್ಯ -೧೨, ಕೃಷ್ಣರಾಜಪೇಟೆ-೨, ಮದ್ದೂರು-೩ ಮಳವಳ್ಳಿ -೨, ನಾಗಮಂಗಲ-೨, ಪಾಂಡವಪುರ-೧, ಶ್ರೀರಂಗಪಟ್ಟಣ - ೧ರಂತೆ ಮಂಡ್ಯ ಜಿಲ್ಲಾದ್ಯಂತ ಒಟ್ಟು ೨೩ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪರೀಕ್ಷೆಗೆ ತಡವಾಗಿ ಬಂದ ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸುವಂತಿಲ್ಲ ಹಾಗೂ ಪರೀಕ್ಷೆ ನಡೆಯುವಾಗ ಅರ್ಧಕ್ಕೆ ಅಭ್ಯರ್ಥಿಗಳನ್ನು ಕೊಠಡಿಯಿಂದ ಹೊರಗೆ ಕಳುಹಿಸುವಂತಿಲ್ಲ ಎಂದರು.
ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ಮತ್ತು ಗೈರುಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಆನ್‌ಲೈನ್ ಮೂಲಕ ದಾಖಲಿಸುವಂತೆ ಪರೀಕ್ಷಾ ಕೇಂದ್ರಗಳ ಉಪಮುಖ್ಯ ಅಧೀಕ್ಷಕರು, ಪ್ರಾಂಶುಪಾಲರಿಗೆ ಸೂಚಿಸಿದರು.
ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ಸಲುವಾಗಿ ಫುಲ್ ಶರ್ಟ್, ಶೂ, ಟೋಪಿ ಧರಿಸುವುದನ್ನು ಬಾಯಿ, ಕಿವಿ ಹಾಗೂ ತಲೆಮುಚ್ಚುವ ವಸ್ತು, ಸಾಧನ ಧರಿಸುವುದನ್ನು ನಿಷೇಧಿಸಿದ್ದು, ಯಾವುದೇ ರೀತಿಯ ಮಾಸ್ಕ್ನ್ ಧರಿಸಿ ಪರೀಕ್ಷಾ ಕೇಂದ್ರದ ಒಳಗೆ ಬರುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಮಾಂಗಲ್ಯ ಸರ ಹಾಗೂ ಮೂಗುತಿಯನ್ನು ಹೊರತುಪಡಿಸಿ ಇನ್ನಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದರು.
ಸಭೆಯಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ಚೆಲುವಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ರವಿಶಂಕರ್, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೇಶವಮೂರ್ತಿ ಸೇರಿದಂತೆ ವಿವಿಧ ಕಾಲೇಜುಗಳ ಅಧ್ಯಾಪಕರು ಉಪಸ್ಥಿತರಿದ್ದರು.