ಹುಬ್ಬಳ್ಳಿ:
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 14 ವರ್ಷದಿಂದ ಜಗ್ಗಲಗಿ ಹಬ್ಬ ಆಚರಿಸಲಾಗುತ್ತಿದೆ. ಹೋಳಿ ಹಬ್ಬ ಪ್ರೋತ್ಸಾಹಿಸಲು, ಹಿಂದೂ ಸಮಾಜ ಸಂಘಟಿಸಲು ಜಗ್ಗಲಗಿ ಹಬ್ಬ ಆಚರಿಸಿಕೊಂಡು ಬರಲಾಗುತ್ತಿದೆ. ಚರ್ಮ ವಾದ್ಯ ನುಡಿಸುವ ಕಲಾವಿದರ ತೊಡಗಿಸಿಕೊಳ್ಳಲಾಗುತ್ತದೆ ಎಂದರು.
ಜಗ್ಗಲಗಿ ಹಬ್ಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಲಿದ್ದು ಪಕ್ಷಾತೀತವಾಗಿ ಜನಪ್ರತಿನಿಧಿಗಳಿಗೆ ಆಹ್ವಾನಿಸಲಾಗಿದೆ. ಬಹುತೇಕ ಎಲ್ಲರೂ ಪಾಲ್ಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಮೂರುಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸೇರಿದಂತೆ 30ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಹುಬ್ಬಳ್ಳಿ, ಧಾರವಾಡ, ವಿವಿಧ ಜಿಲ್ಲೆ, ರಾಜ್ಯಗಳಿಂದ 400ಕ್ಕೂ ಅಧಿಕ ಜಗ್ಗಲಗಿ ಕಲಾವಿದರು, ಮಹಾರಾಷ್ಟ್ರ ಇಚ್ಚಲಕರಂಜಿಯ ಜೀವಿಕಾ ಇವೆಂಟ್ಸ್ ತಂಡ 50 ಜನರ ತಂಡ, ಹುಬ್ಬಳ್ಳಿ ನ್ಯೂ ಆಲ್ ಮ್ಯೂಸಿಕಲ್ ಸ್ಟಾಪ್ ತಾಷಾರಾಮ್ ಡೋಲ್ ಕಮಂ ಹಾಗೂ ಸುಪರ್ ಕಿಂಗ್ ನಾಸಿಕ ಡೋಳ ತಂಡದ 40 ಜನ ಸದಸ್ಯರು ಭಾಗವಹಿಸಲಿದ್ದಾರೆ. ಉಡುಪಿ ಕಾಡು ಬೆಟ್ಟ ಪ್ರದೇಶದಿಂದ ಹುಲಿ ಕುಣಿತ, ಹನುಮಾನ, ನಂದಿ, ನಾಗಾಸಾಧುಗಳೊಂದಿಗೆ ಪರಮೇಶ್ವರ ನರಸಿಂಹ ಸೇರಿದಂತೆ 1 ಸಾವಿರ ಕಲಾವಿದರು ಭಾಗವಹಿಸಲಿದ್ದಾರೆ ಎಂದರು.ಮೆರವಣಿಗೆ:
ಮೇಯರ್ ಜ್ಯೋತಿ ಪಾಟೀಲ, ಉಪಮೇಯರ್ ಸಂತೋಷ ಚವ್ಹಾಣ, ಬಿಜೆಪಿ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ, ದತ್ತುಮೂರ್ತಿ ಕುಲಕರ್ಣಿ, ಮಂಜುನಾಥ ಕಾಟಕರ, ಶಿವು ಮೆಣಸಿನಕಾಯಿ, ರವಿ ನಾಯಕ, ಸುಬ್ರಹ್ಮಣ್ಯ ಶಿರಕೋಳ ಇದ್ದರು.