ರಾಜ್ಯಕ್ಕೆ ಮಾದರಿ ಮದ್ದೂರು ತಾಲೂಕು ಮಾಡುವುದು ನನ್ನ ಗುರಿ: ಕೆ.ಎಂ.ಉದಯ್

KannadaprabhaNewsNetwork |  
Published : May 14, 2026, 12:45 AM IST
13ಕೆಎಂಎನ್ ಡಿ18 | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನು ಅನುದಾನ ಕೇಳಿದಾಗಲೆಲ್ಲಾ ಬಿಡುಗಡೆ ಮಾಡಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ವಿಶೇಷವಾಗಿ ಕ್ಷೇತ್ರದ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು 1500 ಕೋಟಿ ರು. ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಈಗಾಗಲೇ 800 ಕೋಟಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಅಗತ್ಯ ಸೌಕರ್ಯ ಕಲ್ಪಿಸುವ ಮೂಲಕ ರಾಜ್ಯಕ್ಕೆ ಮಾದರಿ ತಾಲೂಕನ್ನಾಗಿ ಮಾಡುವುದು ನನ್ನ ಗುರಿ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಮಾರಸಿಂಗನಹಳ್ಳಿಯಲ್ಲಿ ಬುಧವಾರ 12.75 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬಿದೆ. ಈ ಅವಧಿಯಲ್ಲಿ ಕ್ಷೇತ್ರದ ಜನರ ನಿರೀಕ್ಷೆಗೂ ಮೀರಿ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಸಂತಸ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾನು ಅನುದಾನ ಕೇಳಿದಾಗಲೆಲ್ಲಾ ಬಿಡುಗಡೆ ಮಾಡಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ವಿಶೇಷವಾಗಿ ಕ್ಷೇತ್ರದ ನೀರಾವರಿ ಯೋಜನೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು 1500 ಕೋಟಿ ರು. ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಈಗಾಗಲೇ 800 ಕೋಟಿಗೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ. ಮುಂದಿನ ಒಂದು ತಿಂಗಳಲ್ಲಿ ಮಂಡಳಿಯ ಸಭೆಯಲ್ಲಿ ಇನ್ನು 500 ಕೋಟಿ ರು. ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದರು.

ಈಗಾಗಲೇ ಕ್ಷೇತ್ರದಲ್ಲಿ ರೈತರ ಬಹು ವರ್ಷಗಳ ಸಮಸ್ಯೆಗಳಾಗಿದ್ದ ಸೂಳೆಕೆರೆ, ಅಚ್ಚುಕಟ್ಟು, ಮದ್ದೂರು ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ನಾಲೆಗಳ ಆಧುನೀಕರಣದ ಜೊತೆಗೆ ಕೆರೆಗಳ ಪುನಶ್ಚೇತನ ಕಾಮಗಾರಿಯೂ ಭರದಿಂದ ಸಾಗುತ್ತಿದೆ. ಇದರ ಜೊತೆಗೆ ಶಿಂಷಾ ನದಿಯ ಬಲ ಮತ್ತು ಎಡ ದಂಡೆ ನಾಲೆಗಳ ಆಧುನೀಕರಣಕ್ಕೂ ಚಾಲನೆ ನೀಡಲಾಗುತ್ತಿದೆ ಎಂದರು.

ಶಿಂಷಾ ನದಿಯ ಏತ ನೀರಾವರಿ ಯೋಜನೆಗಳಲ್ಲಿ ಯಂತ್ರಗಳು ಶಿಥಿಲಗೊಂಡಿವೆ. ಅವುಗಳನ್ನು ಹೊಸ ತಂತ್ರಜ್ಞಾನದ ಯಂತ್ರೋಪಕರಣಗಳನ್ನು 130 ಕೋಟಿ ರು. ವೆಚ್ಚದಲ್ಲಿ ಅಳವಡಿಸಲಾಗುತ್ತಿದೆ. ಜೊತೆಗೆ ಬನ್ನಹಳ್ಳಿ ಏತ ನೀರಾವರಿ ಯೋಜನೆಯೂ ಎರಡು ಮೂರು ತಿಂಗಳಲ್ಲಿ ಉದ್ಘಾಟನೆಗೊಂಡು ಇದರಿಂದ ರೈತರ ಬೇಸಾಯಕ್ಕೆ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಈಗಾಗಲೇ ಮಂಡ್ಯದಿಂದ ಚಂದೂಪುರವರೆಗೂ 25 ಕೋಟಿ ರು. ವೆಚ್ಚದಲ್ಲಿ ರಸ್ತೆ ಅಗಲೀಕರಣ ಮಾಡುವ ಜೊತೆಗೆ ಸಿಎ ಕೆರೆ ಹೋಬಳಿಯ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಸಚಿವರಿಗೆ 17 ಕೋಟಿ ರು. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮದ್ದೂರು ನಗರದಲ್ಲಿ ಮಾಂಸ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ನೂತನ ನಗರಸಭಾ ಕಚೇರಿ ಕಟ್ಟಡಕ್ಕೆ 10 ಕೋಟಿ ರು., ತಾಪಂ ನೂತನ ಕಟ್ಟಡಕ್ಕೆ 4.5 ಕೋಟಿ ರು., ತಾಲೂಕು ನ್ಯಾಯಾಲಯ ಸಂಕೀರ್ಣಕ್ಕೆ 30 ಕೋಟಿ ರು., ತಾಲೂಕು ಆಸ್ಪತ್ರೆ ಉನ್ನತೀಕರಣಕ್ಕೆ 30 ಕೋಟಿ ರು. ಹಾಗೂ ನಗರದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 80 ಅಡಿಗಳ ರಸ್ತೆ ಅಗಲೀಕರಣಕ್ಕೆ 150 ಕೋಟಿ ರು. ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರದಲ್ಲೇ ಅನುಮೋದನೆ ದೊರೆಯಲಿದೆ. ನಗರಸಭಾ ವ್ಯಾಪ್ತಿಯ ನಾಲ್ಕು ಗ್ರಾಪಂಗಳನ್ನು ನಗರದ ರೀತಿಯಲ್ಲೆ ಅಭಿವೃದ್ಧಿಪಡಿಸಿ ರಾಜ್ಯದಲ್ಲಿಯೇ ಮಾದರಿ ತಾಲೂಕನ್ನಾಗಿ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿ, ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು 2 ಸಾವಿರ ಕೋಟಿ ಅನುದಾನ ತಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿರುವುದು ಶ್ಲಾಘನೀಯ. ಶಾಸಕ ತವರು ಗ್ರಾಮ ಕದಲೂರು ಹಾಗೂ ತಾಯಿ ಗ್ರಾಮ ಮಾರಸಿಂಗನಹಳ್ಳಿಯನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನನ್ನ ಸ್ವಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ಶಾಸಕ ಕೆ.ಎಂ.ಉದಯ್ ಅವರ ಶ್ರಮದಿಂದ 12.75 ಕೋಟಿ ರು. ವೆಚ್ಚದಲ್ಲಿ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲ ಮತ್ತಷ್ಟು ಅನುದಾನ ತಂದು ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು. ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಮುಖಂಡರಾದ ಕೆ.ಎಂ.ರವಿ, ದೊಡ್ಡ ಗೂಳೀಗೌಡ, ಪುಟ್ಟಸ್ವಾಮಿ, ಗೂಳೀಗೌಡ, ಅಪ್ಪಾಜಣ್ಣ, ಅಡ್ಡರಸ್ತೆ ಗೋಪಿ, ಮಾರಸಿಂಗನಹಳ್ಳಿ ರಾಮಚಂದ್ರ, ಶರತ್, ಗೋವಿಂದ್, ಪ್ರಕಾಶ್, ವಿಜಿ, ಕಿರಣ್, ನವೀನ್, ರಾಘವೇಂದ್ರ, ಶಿವನಂಜಪ್ಪ, ರಾಜಶೇಖರ್, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜ್ ಮತ್ತಿತರರು ಇದ್ದರು.ತಮಿಳುನಾಡಿನಲ್ಲಿ ಟಿವಿಕೆಯೊಂದಿಗೆ ಕಾಂಗ್ರೆಸ್ ಅಧಿಕಾರ: ಮೇಕೆದಾಟು ಯೋಜನೆಗೆ ಸಹಕಾರಿ

ಮದ್ದೂರು:

ತಮಿಳುನಾಡು ರಾಜ್ಯದಲ್ಲಿ ಸಿಎಂ ವಿಜಯ್ ನೇತೃತ್ವದ ಟಿವಿಕೆ ಪಕ್ಷದೊಂದಿಗೆ ಕಾಂಗ್ರೆಸ್ ಮಿತ್ರಪಕ್ಷವಾಗಿ ಅಧಿಕಾರಕ್ಕೆ ಬಂದಿರುವ ಕಾರಣ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಹಾದಿ ಸಹಕಾರಿಯಾಗಬಹುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸುದ್ದಿಗಾರರೊಂದಿಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮೇಕೆದಾಟು ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲೂ ಕೂಡ ರಾಜ್ಯದ ಪರವಾಗಿಯೇ ಆದೇಶ ಬಂದಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿನ ಈ ಬೆಳವಣಿಗೆಯೂ ಕೂಡಾ ರಾಜ್ಯಕ್ಕೆ ಸಹಕಾರಿಯಾಗಬಹುದು ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ವಿಷಯದಲ್ಲಿ ಹೆಚ್ಚು ಆಸಕ್ತಿ ಇರುವ ಜೊತೆಗೆ ಬೆಂಗಳೂರು ಸೇರಿದಂತೆ ಹಲವು ಪಟ್ಟಣ ಹಾಗೂ ನಗರ ಪ್ರದೇಶದ ಜನತೆಗೆ ಕುಡಿಯುವ ನೀರು ಪೂರೈಸಲು ಅನುಕೂಲವಾಗಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡೀಸೆಲ್‌ ಬೆಲೆ ಏರಿಕೆಯಾದ್ರೆ ಸಮಸ್ಯೆ: ಸಚಿವ ರೆಡ್ಡಿ
ಕಿರಿ ವಯಸ್ಸಲ್ಲೇ ಮರೆಯಾದ ನಟ ದಿಲೀಪ್‌ ರಾಜ್‌