ತೋಂಟದ ಸಿದ್ಧಲಿಂಗ ಶ್ರೀಗೆ ಮಕ್ಕಳ ಬಗ್ಗೆ ಅಪಾರ ಕಾಳಜಿ ಇತ್ತು: ಈಶಣ್ಣ ಬೆಟಗೇರಿ

KannadaprabhaNewsNetwork |  
Published : Nov 18, 2026, 02:15 AM IST
ಮುಂಡರಗಿ ಪಟ್ಟಣದ ಜಗದ್ಗುರು ತೋಂಟದಾರ್ಯ ಸಿಬಿಎಸ್ಇ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಜರುಗಿತು. | Kannada Prabha

ಸಾರಾಂಶ

ಕನ್ನಡದ ಜಗದ್ಗುರು ಎಂದೇ ಖ್ಯಾತವಾಗಿರುವ ಗದುಗಿನ ಜ.ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿಯವರು ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಅದರಲ್ಲೂ ವಿಶೇಷವಾಗಿ ಬಡ ಮತ್ತು ಹಿಂದುಳಿದ ವರ್ಗಗಳ ಮಕ್ಕಳಂದರಂತೂ ಪ್ರಾಣ. ಹೀಗಾಗಿ ಅಂತಹ ಮಕ್ಕಳ ಶಿಕ್ಷಣಕ್ಕಾಗಿ ಮುಂಡರಗಿಯೂ ಸೇರಿದಂತೆ ವಿವಿಧೆಡೆ ಶಾಲಾ-ಕಾಲೇಜುಗಳನ್ನು ತೆರೆದು ಶಿಕ್ಷಣಕ್ಕೆ ಅನುಕೂಲ ಮಾಡಿಕೊಟ್ಟಿದ್ದರು.

ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಜಗದ್ಗುರು ತೋಂಟದಾರ್ಯ ಸಿಬಿಎಸ್ಇ ಶಾಲೆಯ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ

ಕನ್ನಡಪ್ರಭ ವಾರ್ತೆ ಮುಂಡರಗಿ

ಕನ್ನಡದ ಜಗದ್ಗುರು ಎಂದೇ ಖ್ಯಾತವಾಗಿರುವ ಗದುಗಿನ ಜ.ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿಯವರು ಮಕ್ಕಳ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಅದರಲ್ಲೂ ವಿಶೇಷವಾಗಿ ಬಡ ಮತ್ತು ಹಿಂದುಳಿದ ವರ್ಗಗಳ ಮಕ್ಕಳಂದರಂತೂ ಪ್ರಾಣ. ಹೀಗಾಗಿ ಅಂತಹ ಮಕ್ಕಳ ಶಿಕ್ಷಣಕ್ಕಾಗಿ ಮುಂಡರಗಿಯೂ ಸೇರಿದಂತೆ ವಿವಿಧೆಡೆ ಶಾಲಾ-ಕಾಲೇಜುಗಳನ್ನು ತೆರೆದು ಶಿಕ್ಷಣಕ್ಕೆ ಅನುಕೂಲ ಮಾಡಿಕೊಟ್ಟಿದ್ದರು ಎಂದು ಜಗದ್ಗುರು ತೋಂಟದಾರ್ಯ ಸಿಬಿಎಸ್ಇ ಶಾಲೆಯ ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಈಶಣ್ಣ ಬೆಟಗೇರಿ ಹೇಳಿದರು.

ಸ್ಥಳೀಯ ಜಗದ್ಗುರು ತೋಂಟದಾರ್ಯಸಿಬಿಎಸ್ಇ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲ ಮಕ್ಕಳೂ ಉತ್ತಮವಾಗಿ ಓದುವ ಮೂಲಕ ಜವಾಹರಲಾಲ ನೆಹರು ಅವರ ಹಾಗೆ ದೇಶದ ಪ್ರಧಾನಮಂತ್ರಿಯಾಗಿ ಉನ್ನತ ಮಟ್ಟದ ಸಾಧನೆ ಮಾಡಬೇಕು. ಶಿಕ್ಷಕರು ಎಲ್ಲ ಮಕ್ಕಳಿಗೂ ಸಂಸ್ಕಾರಯುತವಾಗ ಶಿಕ್ಷಣ ನೀಡಬೇಕು ಎಂದರು.

ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಹೇಮಗಿರೀಶ ಹಾವಿನಾಳ ಮಾತನಾಡಿ, ದೇವರು ಗುಡಿಗಳಲ್ಲಿಲ್ಲ, ಬದಲಾಗಿ ಮಕ್ಕಳ ರೂಪದಲ್ಲಿ ನಮ್ಮ ಮನೆಗಳಲ್ಲಿ, ಶಾಲೆಗಳಲ್ಲಿದ್ದಾರೆ. ನಾವು ಮಕ್ಕಳನ್ನು ಪ್ರೀತಿಸಿದಾಗ ಮಾತ್ರ ಅವರು ನಮ್ಮನ್ನು ಪ್ರೀತಿಸುತ್ತಾರೆ. ಇಂದಿನ ಮಕ್ಕಳೇ ಮುಂದಿನ ನಾಡಿನ ನಾಯಕರು ಎಂದರು.

ಪ್ರಾಚಾರ್ಯ ಶರಣಕುಮಾರ ಬುಗಟಿ ಮಾತನಾಡಿದರು.

ಶಾಲಾ ಸಂಸತ್ ಸದಸ್ಯರು, ಪದಾಧಿಕಾರಿಗಳು, ಶಾಲಾ ಭೋಧಕ ಹಾಗೂ ಭೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಜಯಶ್ರೀ ಅಳವಂಡಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ತಬಸೂಮ ತಾಂಬೋಟಿ ಸ್ವಾಗತಿಸಿದರು. ವಿಶಾಲಾಕ್ಷಿ ಅಕ್ಕೂರ ನಿರೂಪಿಸಿ, ಶಶಿಕಲಾ ಹಳ್ಳಿಕೇರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ನರ್ ವ್ಹೀಲ್ ಕ್ಲಬ್ ಹೆಣ್ಣುಮಕ್ಕಳ ಆರೋಗ್ಯ ಅರಿವು ಕಾರ್ಯಕ್ರಮ
ಸಿದ್ದಾಪುರ: ಗುಂಡಿ ಮುಚ್ಚದಿದ್ದರೆ ಉಗ್ರ ಹೋರಾಟ ಎಚ್ಚರಿಕೆ