(ಪ್ರತಿಭಟನೆ ಫೋಟೋ ದೊಂದಿಗೆ ಸಿ.ಟಿ.ರವಿ ಅವರ ಫೋಟೋ ಸಹ ಬಳಸಿ)
ನೀಟ್ ಪರೀಕ್ಷೆ ಹೆಸರಲ್ಲಿ ನಡೆಯುತ್ತಿರುವ ಪ್ರತಿಭಟನೆ ಕೇವಲ ಒಂದು ಟೂಲ್ ಕಿಟ್ ರಾಜಕಾರಣ ಇದು ದೇಶದಲ್ಲಿ ಅರಾಜಕತೆ ಸೃಷ್ಟಿಸುವುದಾಗಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.
ಭಾರತ ವಿರೋಧ ಶಕ್ತಿಗಳ ಸಂಸತ್ ಭವನದ ಮೇಲಿನ ದಾಳಿ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಗುರುವಾರ ಸಂಜೆ ನಗರದ ಹನುಮಂತಪ್ಪ ವೃತ್ತದಿಂದ ಅಜಾದ್ ಪಾರ್ಕ್ ವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು. ಪ್ರತಿಭಟನಾ ಮೆರವಣಿಗೆ ವೇಳೆ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.ಈ ವೇಳೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಡಾ.ಸಿ.ಟಿ.ರವಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೆಸರಿನಲ್ಲಿ ಕಾಂಕ್ರೋಚ್ ಜತನಾ ಪಕ್ಷ, ಕಾಂಗ್ರೆಸ್ ಹಾಗೂ ಎಡಪಂತೀಯ ಪಕ್ಷಗಳು ನಡೆಸುತ್ತಿರುವ ಹೋರಾಟ, ವಿದ್ಯಾರ್ಥಿಗಳಿಗೆ ನ್ಯಾಯಕೊಡಿಸುವ ಹೋರಾಟದ ಉದ್ದೇಶವಿಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಉದ್ದೇಶವಾಗಿದ್ದರೆ ಹೈಡ್ರೋಜನ್ ರೈಲಿಗೆ ಮತ್ತು ಸರ್ಕಾರಿ ಆಸ್ಪತ್ರೆಗೆ ಕಲ್ಲು ಎಸೆಯುತ್ತಿರಲಿಲ್ಲ. ಅವರ ಉದ್ದೇಶ ಸ್ಪಷ್ಟವಾಗಿದ್ದು ದೇಶದಲ್ಲಿ ಅರಾಜಕಥೆ ಸೃಷ್ಟಿಸುವುದಾಗಿದೆ ಎಂದು ಆರೋಪಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನೀಟ್ ಮರು ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಫಲಿತಾಂಶ ಸಹ ಪ್ರಕಟವಾಗಿದೆ. ಆದರೆ, ಈಗ ನೀಟ್ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕೇವಲ ರಾಜಕೀಯ ಲಾಭಕ್ಕೆ ಎಂದು ದೂರಿದರು.
ಬಿಜೆಪಿ ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷ ದೇಶ ದ್ರೋಹಿ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಸೇರಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲಾಗುತ್ತಿದೆ. ವಿದೇಶಿ ಹಣದ ನೆರವಿನಿಂದ ಕಾಂಕ್ರೋಚ್ ಜನತಾ ಪಕ್ಷ ಸ್ಥಾಪಿಸಲಾಗಿದೆ. ನೀಟ್ ಪರೀಕ್ಷೆ ನೆಪದಲ್ಲಿ ದೇಶದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ದೇಶದ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ ಎಂದರು.