ಕನ್ನಡಪ್ರಭ ವಾರ್ತೆ ಮಂಗಳೂರು
ಗುಣಮಟ್ಟದಲ್ಲಿ ರಾಜಿಯಾಗದೆ ಈ ಕ್ರೀಡಾಂಗಣದ ಕಾಮಗಾರಿಯನ್ನು ನಡೆಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು ಉನ್ನತ ತಂತ್ರಜ್ಞಾನದ ಸಹಾಯದಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಸ್ಪೀಕರ್ ಸೂಚಿಸಿದರು.
ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಕ್ರೀಡಾಂಗಣವನ್ನು ಬಳಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾಮಗಾರಿ ನಿರ್ವಹಿಸಬೇಕು. ಆದಷ್ಟು ಬೇಗನೆ ಕ್ರೀಡಾಂಗಣವನ್ನು ಉದ್ಘಾಟಿಸಿ ಕ್ರೀಡಾ ಚಟುವಟಿಕೆಗಳಿಗೆ ಸಮರ್ಪಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು, ಕ್ರೀಡಾ ಸಂಘಟನೆಗಳ ಪದಾಧಿಕಾರಿಗಳು ಇದ್ದರು.