ಕನ್ನಡಪ್ರಭ ವಾರ್ತೆ ಶಿರಹಟ್ಟಿ
ಶನಿವಾರ ತಾಲೂಕಿನ ಸಾಸಲವಾಡ ಗ್ರಾಮದಲ್ಲಿ ಹೊಳೆಇಟಗಿ, ಸಾಸಲವಾಡ, ಕಲ್ಲಾಗನೂರು, ತೊಳಲಿ ಗ್ರಾಮಗಳ ಆಯ್ದ ಸ್ಥಳಗಳ ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ ನೇರವೆರಿಸಿ ಮಾತನಾಡಿದರು. ಗ್ರಾಮೀಣ ಭಾಗದ ಜನರು ಮೂಲಭೂತ ಸೌಕರ್ಯಗಳ ಕೊರತೆಯಿಂದ ತೊಂದರೆ ಅನುಭವಿಸಬಾರದು. ನಗರ ಪ್ರದೇಶಗಳಂತೆ ಗ್ರಾಮಗಳಲ್ಲಿಯೂ ಗುಣಮಟ್ಟದ ಸೌಲಭ್ಯಗಳು ದೊರೆಯಬೇಕು ಎಂಬುದು ನಮ್ಮ ಆಶಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಗತ್ಯತೆಗಳನ್ನು ಗುರುತಿಸಿ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಗ್ರಾಮೀಣ ಭಾಗದ ಅಭಿವೃದ್ಧಿಯಾದಾಗ ಮಾತ್ರ ದೇಶದ ನೈಜ ಅಭಿವೃದ್ಧಿ ಸಾಧ್ಯ. ರೈತರು, ಕೃಷಿ ಕಾರ್ಮಿಕರು, ಬಡವರು ಹಾಗೂ ಸಾಮಾನ್ಯ ಜನರ ಬದುಕಿನ ಗುಣಮಟ್ಟ ಸುಧಾರಿಸುವಂತಹ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಸರ್ಕಾರದಿಂದ ದೊರೆಯುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಜನರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದರ ಜತೆಗೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಸಾರ್ವಜನಿಕರ ಸಹಕಾರದೊಂದಿಗೆ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನೂ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲು ಶ್ರಮಿಸಲಾಗುವುದು ಎಂದು ಹೇಳಿದರು.
ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ ಸೌಲಭ್ಯ ದೊರೆತರೆ ಕೃಷಿ ಚಟುವಟಿಕೆಗಳು, ವ್ಯಾಪಾರ-ವಹಿವಾಟು, ಶಿಕ್ಷಣ ಹಾಗೂ ಆರೋಗ್ಯ ಸೇವೆಗಳಿಗೆ ಅನುಕೂಲವಾಗಲಿದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿನ ರಸ್ತೆಗಳನ್ನು ಗುಣಮಟ್ಟದೊಂದಿಗೆ ನಿರ್ಮಿಸುವುದು ಹಾಗೂ ಹಾಳಾಗಿರುವ ರಸ್ತೆ ದುರಸ್ತಿಗೊಳಿಸುವುದು ಆದ್ಯತೆಯಾಗಬೇಕು ಎಂದರು.