ಬಾಂಗ್ಲಾದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪಂಜಿನ ಮೆರವಣಿಗೆ

KannadaprabhaNewsNetwork |  
Published : Dec 29, 2025, 02:15 AM IST
27ಕೆಎಂಎನ್ ಡಿ19  | Kannada Prabha

ಸಾರಾಂಶ

ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿ ಭಾರತದಿಂದ ತುಂಡಾದ ಬಾಂಗ್ಲಾದೇಶದಲ್ಲಿ ಲಕ್ಷಾಂತರ ಶಾಂತಿ ಪ್ರಿಯ ಹಿಂದೂಗಳು ಮೇಲಿನ ನರಮೇಧ ಖಂಡಿಸಿದರು. ನೂರಾರು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಬಾಂಗ್ಲಾದೇಶ ಸೇರಿದಂತೆ ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತ ಹಿಂದೂಗಳು ವಾಸ ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮುಖಂಡರ ನೇತೃತ್ವದಲ್ಲಿ ಶ್ರೀನರಸಿಂಹ ಸ್ವಾಮಿ ದೇವಾಲಯದ ಬಳಿ ಸೇರಿದ ನೂರಾರು ಕಾರ್ಯಕರ್ತರು ನಂತರ ಕೋಟೆ ಬೀದಿ, ಪೇಟೆ ಬೀದಿ ಗಳಮೂಲಕ ಪ್ರವಾಸಿ ಮಂದಿರದವರೆಗೆ ಬೃಹತ್ ಪಂಜಿನ ಮೆರವಣಿಗೆ ನಡೆಸಿದರು.

ಬಾಂಗ್ಲಾದೇಶದ ವಿರುದ್ಧ ಘೋಷಣೆ ಕೂಗಿ ಭಾರತದಿಂದ ತುಂಡಾದ ಬಾಂಗ್ಲಾದೇಶದಲ್ಲಿ ಲಕ್ಷಾಂತರ ಶಾಂತಿ ಪ್ರಿಯ ಹಿಂದೂಗಳು ಮೇಲಿನ ನರಮೇಧ ಖಂಡಿಸಿದರು. ನೂರಾರು ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಬಾಂಗ್ಲಾದೇಶ ಸೇರಿದಂತೆ ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತ ಹಿಂದೂಗಳು ವಾಸ ಮಾಡುತ್ತಿದ್ದಾರೆ. ಇವರ ಮೇಲೆ ನಿರಂತರ ಹಲ್ಲೆ, ಹಿಂಸಾಚಾರಗಳು ನಡೆಯುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡು ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ನಿಲ್ಲಬೇಕು. ಬಾಂಗ್ಲಾ ಸರ್ಕಾರ ಹಿಂದೂಗಳನ್ನು ರಕ್ಷಿಸಿ ಕಿಡಿಗೇಡಿಗಳಿಗೆ ಮರಣ ದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಪಂಜಿನ ಮೆರವಣಿಗೆ ಹಿನ್ನೆಲೆಯಲ್ಲಿ ಪೇಟೆಬೀದಿ ಮಸೀದಿ ಮತ್ತು ದರ್ಗಾ ಗಳಿಗೆ ಸಿಪಿಐ ನವೀನ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮುಖಂಡರಾದ ಸಿ.ಕೆ.ಸತೀಶ್, ಶಾಮಿಯಾನ ಗುರುಸ್ವಾಮಿ, ಎಂ.ಸಿ.ಸಿದ್ದು, ಕದಲೂರು ನವೀನ್, ಮಲ್ಲಿಕಾರ್ಜುನ್, ಅಭಿ, ಮಧು, ಎಂ.ಜೆ.ಅನಿಲ್ ಕುಮಾರ್, ಮಧು ಕುಮಾರ್, ಸೇರಿದಂತೆ ಹಲವು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಮನುಸ್ಮೃತಿ ವಿರೋಧಿಸಿ ದಲಿತರಿಂದ ಪ್ರತಿಭಟನೆ

ಮಂಡ್ಯ: ಮನುಸ್ಮೃತಿಯನ್ನು ವಿರೋಧಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಮನುವಾದ ತೊಲಗಲಿ- ಸಂವಿಧಾನ ಉಳಿಯಲಿ ಎಂದು ಘೋಷಣೆಗಳನ್ನು ಕೂಗಿದರು.

ಮೈಸೂರು- ಬೆಂಗಳೂರು ಹೆದ್ದಾರಿಯ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಪ್ರತಿಭಟನೆಕಾರರು, ಜಾತಿ ವ್ಯವಸ್ಥೆ ಮತ್ತು ಆಡಳಿತ ವ್ಯವಸ್ಥೆ ವಿರುದ್ಧ ಕಿಡಿಕಾರಿದರು.

ದಸಂಸ ಮುಖಂಡ ಗುರುಪ್ರಸಾದ್ ಕೆರಗೋಡು ಮಾತನಾಡಿ, ೨೧ನೇ ಶತಮಾನದ ದಿನಗಳಲ್ಲೂ ನಾಗರಿಕರ ಜೀವನ ಪರಿಸ್ಥಿತಿ ಬದಲಾಗಿಲ್ಲ. ಆರ್‌ಎಸ್‌ಎಸ್ ಮತ್ತು ಅದರ ರಾಜಕೀಯ ಪಕ್ಷವಾದ ಬಿಜೆಪಿ ಅಂದಿನಿಂದ ಇಂದಿನವರೆಗೂ ಆಂತರಿಕವಾಗಿ, ಬಹಿರಂಗವಾಗಿ ಅಂಬೇಡ್ಕರ್‌ ಅವರ ಮೇಲೆ, ಸಂವಿಧಾನದ ಮೇಲೆ ಅಸಹಿಷ್ಣುತೆಯನ್ನು ಸಂಘಪರಿವಾರ ಹೊರಹಾಕುತ್ತಲೇ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಮನುಸ್ಮೃತಿಯನ್ನು ದಹಿಸಿದ ದಿನವಾದ ಡಿ.೨೫ ರಂದು ಸಾಂಕೇತಿಕವಾಗಿ ನಾವೂ ಕೂಡ ಮನುಸ್ಮೃತಿಯನ್ನು ಸುಟ್ಟು ಹಾಕುವ ಮೂಲಕ ಅಂಬೇಡ್ಕರ್ ಹೋರಾಟವನ್ನು ಮುಂದುವರಿಸಿದ್ದೇವೆ. ಅವರ ಆಶಯಗಳು ನೆರವೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಸೋಮಶೇಖರ್ ಕೆರಗೋಡು, ಸಿದ್ದರಾಜು, ಸಿ.ಕುಮಾರಿ, ಗಾಯಕ ಹುರುಗಾಲವಾಡಿ ರಾಮಯ್ಯ, ನಾರಾಯಣಸ್ವಾಮಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಹೋರಾಟಗಾರರ ಪ್ರಕರಣ ವಾಪಸ್‌: ಸಿದ್ದರಾಮಯ್ಯ
ರಾಜ್ಯದಲ್ಲಿ ಡ್ರಗ್ಸ್‌ ಫ್ಯಾಕ್ಟರಿ ಪತ್ತೆಯಾಗಿದ್ದಕ್ಕೆ ಬಿಜೆಪಿ ಕಿಡಿ