ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಡಾ.ಎಚ್.ಎನ್.ವೃತ್ತದಿಂದ ಪಟ್ಟಣದ ಮುಖ್ಯ ರಸ್ತೆಯಲ್ಲಿ ಪಂಜಿನ ಮೆರವಣಿಗೆ ನಡೆಸಿದ ಪಕ್ಷದ ಕಾರ್ಯಕರ್ತರು ನಂತರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಹಿಂದುಗಳೇ ಟಾರ್ಗೆಟ್ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಬಾಗೇಪಲ್ಲಿ ತಾಲೂಕು ಮಂಡಲಾಧ್ಯಕ್ಷ ಆರ್.ಪ್ರತಾಪ್, ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಿರುವುದು ಖಂಡನೀಯ. ಪ್ರವಾಸಕ್ಕೆ ತೆರಳಿದ್ದವರನ್ನು ಉಗ್ರರು ಅಮಾನುಷವಾಗಿ ಹತ್ಯೆ ಮಾಡಿರುವುದು ಹೇಯ ಕೃತ್ಯ. ಈ ಕೃತ್ಯವೆಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಈ ಕೃತ್ಯಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. 370ನೇ ವಿಧಿ ರದ್ದಾದ ನಂತರ ಕಾಶ್ಮೀರ ಸಹಜ ಸ್ಥಿತಿಗೆ ಮರಳುತ್ತಿದೆ. ನೆರೆಯ ಪಾಕಿಸ್ತಾನಕ್ಕೆ ಇದನ್ನು ಸಹಿಸಲು ಆಗುತ್ತಿಲ್ಲ. ದಿವಾಳಿ ಎದುರಿಸುತ್ತಿರುವ ಪಾಕಿಸ್ತಾನ ಸರ್ಕಾರ ಅಲ್ಲಿನ ಜನರ ಮನಸ್ಸು ಬೇರೆಡೆ ತಿರುಗಿಸಲು ಇಂತಹ ಭಯೋತ್ಪಾದಕ ಕೃತ್ಯಗಳಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.