ಹೆಬ್ಬಾಳಕರವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪಂಜಿನ ಮೆರವಣಿಗೆ

KannadaprabhaNewsNetwork |  
Published : Aug 06, 2026, 03:00 AM IST
ಬೆಳಗಾವಿ | Kannada Prabha

ಸಾರಾಂಶ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಮುಖಂಡ ಅಡಿವೇಶ ಇಟಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯು ಹಿರೇಬಾಗೇವಾಡಿ ಬಸವೇಶ್ವರ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಸಾಗಿತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ತಡೆಯಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದರು.ಪ್ರತಿಭಟನೆ ನೇತೃತ್ವ ವಹಿಸಿ ಮುಖಂಡ ಅಡಿವೇಶ ಇಟಗಿ ಮಾತನಾಡಿ, ಮಾಜಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರವರು ಕರ್ನಾಟಕ ರಾಜ್ಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಪಕ್ಷದ ಸಂಘಟನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅನುಭವ, ಜನಪರ ಕಾರ್ಯ ಹಾಗೂ ಪಕ್ಷದ ನಿಷ್ಠೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ. ರಾಜ್ಯದ ಜನರ ಜನರ ಆಶಯವನ್ನು ಕಾಂಗ್ರೆಸ್ ಹೈಕಮಾಂಡ್ ಗೌರವಿಸಿ ಶೀಘ್ರದಲ್ಲೇ ಅವರಿಗೆ ಸಚಿವ ಸ್ಥಾನ ಘೋಷಿಸಬೇಕು. ಇಲ್ಲವಾದರೇ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಸಿದ್ದಪ್ಪ ಸಿಂಗಾಡಿ, ರಘು ಪಾಟೀಲ, ಮನ್ಸುರ್ ಅಲಿ ಅತ್ತಾರ, ಅನಿಲ್ ಕರಲಿಂಗಣ್ಣವರ, ಸಿದ್ದಪ್ಪ ಚಾಪಗಾಂವಿ, ಅಡಿವೆಪ್ಪ ತೋಟಗಿ, ರವಿ ಗಾಣಗಿ, ಮುಶ್ಯಾಪ ಉಪ್ಪಾರ, ರಾಜು ಉಪ್ಪಾರ, ನೀಲಕಂಠ, ಆಂಜನೇಯ ಗೌಸ್ ಜಾಲಿಕೊಪ್ಪ, ರವಿ ಗಣಿಗಾ, ರಮೇಶ್ ವಾಲಿ, ರಶೀದ್ ಸಾಹೇದ್, ಬಸವರಾಜ್ ಇಟಗಿ, ಆನಂದ್ ಪಾಟೀಲ್, ಸುರೇಶ್ ಗೊಂಡ್ಲೂರು, ಚನ್ನಪ್ಪ ಹುದಲಿ, ನೀಲಕಂಠ ಪರವತಿ, ಬಸವರಾಜ್ ಯಾದವಾಡ, ಮಹೇಶ್ ಗುಂಡ್ಲೂರು ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.ಮಾಜಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರವರು ಕರ್ನಾಟಕ ರಾಜ್ಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಪಕ್ಷದ ಸಂಘಟನೆಗೂ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅನುಭವ, ಜನಪರ ಕಾರ್ಯ ಹಾಗೂ ಪಕ್ಷದ ನಿಷ್ಠೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ. ರಾಜ್ಯದ ಜನರ ಜನರ ಆಶಯವನ್ನು ಕಾಂಗ್ರೆಸ್ ಹೈಕಮಾಂಡ್ ಗೌರವಿಸಿ ಶೀಘ್ರದಲ್ಲೇ ಅವರಿಗೆ ಸಚಿವ ಸ್ಥಾನ ಘೋಷಿಸಬೇಕು. ಇಲ್ಲವಾದರೇ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು.

-ಅಡಿವೇಶ ಇಟಗಿ, ಕಾಂಗ್ರೆಸ್ ಮುಖಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಡಿಪಿಒ ಹುದ್ದೆಗೆ ಇಬ್ಬರ ಕಾದಾಟ!
ಪತ್ರಕರ್ತರು ಜನಸಾಮಾನ್ಯರ ಧ್ವನಿ