ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಗೃಹ ಇಲಾಖೆಯ ಅಧಿಕಾರ ದುರ್ಬಳಕೆ ಹಾಗೂ ಸಿಪಿಐ(ಎಂ) ಮತ್ತು ಇತರ ನಾಯಕರ ಬಂಧನವನ್ನು ಖಂಡಿಸಿ ಡಿವೈಎಫ್‌ಐ, ಎಸ್‌ಎಫ್‌ಐನಿಂದ ಭಾನುವಾರ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಯಿತು.
ಕನಕಗಿರಿ: ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯನ್ನು ಹತ್ತಿಕ್ಕಲು ಕೇಂದ್ರ ಗೃಹ ಇಲಾಖೆಯ ಅಧಿಕಾರ ದುರ್ಬಳಕೆ ಹಾಗೂ ಸಿಪಿಐ(ಎಂ) ಮತ್ತು ಇತರ ನಾಯಕರ ಬಂಧನವನ್ನು ಖಂಡಿಸಿ ಡಿವೈಎಫ್‌ಐ, ಎಸ್‌ಎಫ್‌ಐನಿಂದ ಭಾನುವಾರ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಯಿತು.
ಡಿವೈಎಫ್‌ಐ ಜಿಲ್ಲಾ ಸಂಚಾಲಕ ಅಮರೇಶ ಕಡಗದ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಆಗ್ರಹಿಸಿ, ಜಂತರ್ ಮಂತರ್‌ನಲ್ಲಿ ವಿವಿಧ ಎಡಪಂಥೀಯ, ಪ್ರಜಾಸತ್ತಾತ್ಮಕ, ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದವು. ಇದರಲ್ಲಿ ಸಿಪಿಐ(ಎಂ)ನ ಹಿರಿಯ ನಾಯಕರಾದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಪಾಲಿಟ್ ಬ್ಯೂರೋ ಸದಸ್ಯರಾದ ಕಾಮ್ರೇಡ್ ಪಿಣರಾಯಿ ವಿಜಯನ್ ಸೇರಿ ಹಲವು ನಾಯಕರು ಪಾಲ್ಗೊಂಡಿದ್ದರು. ಆದರೆ, ಇವರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ. ಪ್ರತಿಭಟನಾಕಾರರನ್ನು ದೆಹಲಿಗೆ ತಲುಪದಂತೆ ತಡೆಯಲು ರೈಲು ಸಂಚಾರಕ್ಕೆ ಅಡ್ಡಿಪಡಿಸಿರುವುದು, ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸಿರುವುದು, ಅಂತರ್ಜಾಲ ಮತ್ತು ಸಂಪರ್ಕ ಜಾಲಗಳ ಮೇಲೆ ನಿರ್ಬಂಧ ವಿಧಿಸಿರುವುದು, ನಗರದಾದ್ಯಂತ ಬ್ಯಾರಿಕೇಡ್‌ಗಳನ್ನು ನಿರ್ಮಿಸಿರುವುದು ಹಾಗೂ ಪ್ರತಿಭಟನಾಕಾರರ ಸಂಚಾರಕ್ಕೆ ಅಡ್ಡಿಪಡಿಸಿರುವುದಾಗಿ ವರದಿಯಾಗಿರುವ ಕ್ರಮಗಳು ನಾಗರಿಕರ ಮೂಲಭೂತ ಹಕ್ಕುಗಳ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತುವುದಲ್ಲದೇ, ಘಟನೆಗಳು ಪ್ರಜಾಸತ್ತಾತ್ಮಕ ವಾತಾವರಣಕ್ಕೆ ಧಕ್ಕೆ ತರುವಂತಹವುಗಳಾಗಿವೆ ಎಂದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಸ್‌ಎಫ್‌ಐ, ಎಐಎಸ್‌ಎಫ್, ಎಐಡಿಎಸ್‌ಒ, ಕೆವಿಎಸ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದನ್ನೂ ನಮ್ಮ ಸಮಿತಿ ಖಂಡಿಸುತ್ತದೆ. ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದೆ. ಪ್ರತಿಭಟನೆಯ ಹಕ್ಕನ್ನು ಪೊಲೀಸ್ ಬಲಪ್ರಯೋಗದ ಮೂಲಕ ಹತ್ತಿಕ್ಕುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ದೂರಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.