ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,91,258 ಮತದಾರರು

KannadaprabhaNewsNetwork | Published : Apr 3, 2024 1:37 AM

ಸಾರಾಂಶ

ತರೀಕೆರೆಯಲ್ಲಿ ಉಪವಿಭಾಗಾಧಿಕಾರಿ ಕಾರ್ಯಾಲಯದಲ್ಲಿ ಏರ್ಪಾಡಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಚುನಾವಣಾಧಿಕಾರಿ, ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು. ತಹಸೀಲ್ದಾರ್ ವಿ.ಎಸ್.ರಾಜೀವ್, ಚುನಾವಣಾ ಶಾಖೆ ಶಿರಸ್ತೆದಾರ್ ಕೃಷ್ಣಮೂರ್ತಿ ಇದ್ದಾರೆ.

ಕನ್ನಡಪ್ರಭ ವಾರ್ತೆ ತರೀಕೆರೆ

ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಒಟ್ಟು 1,91,258 ಮತದಾರರು ಇದ್ದು, ಅದರಲ್ಲಿ 94,299 ಪುರುಷರು ಮತ್ತು 96, 958 ಹೆಂಗಸರು, ಇತರೆ 1 ಮತದಾರರು ಇದ್ದು, ತರೀಕೆರೆ ತಾಲೂಕಿನಲ್ಲಿ 145 ಮತಗಟ್ಟೆ, ಅಜ್ಜಂಪುರ ತಾಲೂಕಿನಲ್ಲಿ 88 ಮತಗಟ್ಟೆ ಸ್ಥಾಪಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಸಹಾಯಕ ಚುನಾವಣಾಧಿಕಾರಿ, ತರೀಕೆರೆ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದ್ದಾರೆ.ಅವರು, ಮಂಗಳವಾರ ಉಪವಿಭಾಗಾಧಿಕಾರಿ ಕಾರ್ಯಾಲಯದಲ್ಲಿ ಏರ್ಪಾಡಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮೂಲಸೌಲಭ್ಯಗಳು:

ವಿಧಾನಸಭಾ ಕ್ಷೇತ್ರದಲ್ಲಿ , 3 ವಲ್ನರಬಲ್, 36 ಕ್ರಿಟಿಕಲ್ ಮತಗಳಟ್ಟೆಗಳಿದ್ದು, ಮಹಿಳಾ ಮತದಾರರಿಗೆ ಪಿಂಕ್ ಮತಗಟ್ಟೆ ಕೇಂದ್ರ, ವಿಕಲಚೇತನರಿಗೆ, ಯುವ ಮತದಾರರಿಗೆ ಮತಗಟ್ಟೆ ಕೇಂದ್ರ ಸ್ಥಾಪಿಸಲಾಗಿದೆ, ತರೀಕೆರೆ ತಾ.13 ಮತ್ತು ಅ್ಜಜಂಪುರಕ್ಕೆ 8 ಒಟ್ಟು 21 ಸೆಕ್ಟರ್ ಅಧಿಕಾರಿ ನೇಮಕ ಮಾಡಲಾಗಿದ್ದು, ಪ್ರತಿ ಮತಗಟ್ಟೆಗಳಲ್ಲೂ ಕುಡಿಯುವ ನೀರು, ವಿದ್ಯುತ್, ಸುರಕ್ಷತೆ ಇತ್ಯಾದಿ ಮೂಲಸೌಲಭ್ಯ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಮತದಾನ ಹೀಗೆ ನೆಡೆಯಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಎರಡು ಬಾರಿ ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಬಾರಿ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ, ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಭಾರತ ಚುವಾವಣಾ ಆಯೋಗ ಸೂಚಿಸಿದಂತೆ ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ, ಎಂ.ಸಿ.ಹಳ್ಳಿ, ಎಂ.ಎನ್.ಕ್ಯಾಂಪ್, ಭಕ್ತನಕಟ್ಟೆ, ನಾಗಬೋಗನಹಳ್ಳಿ ಈ ನಾಲ್ಕು ಕಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳನ್ನು, ಕ್ಯಾಮೆರಾಮೆನ್‌ಗಳನ್ನು ನೇಮಿಸಲಾಗಿದ್ದು, ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಎಸ್ಎಸ್‌ಪಿ, ಫ್ಲೈಯಿಂಗ್ ಸ್ಕ್ಯಾಡ್ಸ್‌ಗಳು ನಾಲ್ಕು ತಂಡಗಳಲ್ಲಿ ನೇಮಕ ಮಾಡಲಾಗಿದ್ದು, ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಆಗಾಗ ಭೇಟಿ ಕೊಡುತ್ತಾರೆ ಎಂದು ತಿಳಿಸಿದರು.

ನೀತಿ ಸಂಹಿತೆ ಉಲ್ಲಂಘನೆ ಆಗದ ರೀತಿ ನೋಡಿಕೊಳ್ಳಲು 11 ತಂಡಗಳಲ್ಲಿ ಅಧಿಕಾರಿ ನೇಮಿಸಿದ್ದು, ಆಬ್ಸರ್ವರ್‌ಗೆ ಅಧಿಕಾರಿಗಳು ವರದಿ ನೀಡುತ್ತಾರೆ, 85 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರಗೆ ಮನೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ಕರ್ತವ್ಯಗಳಲ್ಲಿ ಭಾಗವಹಿಸುವ ವಿವಿಧ ಸರ್ಕಾರಿ ಅಧಿಕಾರಿಗಳಿಗೂ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯು ಏ.26 ರಂದು ನೆಡೆಯಲಿದ್ದು ತರೀಕೆರೆ ವಿಧಾನಸಭಾ ಕ್ಷೇತ್ರದಾದ್ಯಂತ ಮತದಾನ ಜಾಗೃತಿ ಶಿಬಿರ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ತಹಸೀಲ್ದಾರ್ ವಿ.ಎಸ್.ರಾಜೀವ್, ಚುನಾವಣಾ ಶಾಖೆ ಶಿರಸ್ತೆದಾರ್ ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Share this article