ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ಚಿಂತನೆ: ಪ್ರತೀಕ್ ಬಾಯಲ್

KannadaprabhaNewsNetwork |  
Published : Oct 03, 2026, 02:45 AM IST
ವಿಶ್ವ ಪ್ರವಾಸೋದ್ಯಮ ದಿನವನ್ನು ಜಿಪಂ ಸಿಇಓ ಬಾಯಲ್ ಉದ್ಘಙಾಟಿಸಿದರು  | Kannada Prabha

ಸಾರಾಂಶ

ಪ್ಯಾಲೇಸ್ ಗಾರ್ಡನ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಉಡುಪಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಇನ್ಲ್ಫುಎನ್ಸರ್ಸ್ ಆ್ಯಂಡ್ ಸ್ಟೇಕ್ ಹೋರ್ಲ್ಡ್ಸ್ ಮೀಟ್

ಕಾಪು; ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ ಜೊತೆಗೆ ಗ್ರಾಮೀಣ ಬದುಕು ಮತ್ತು ಕೃಷಿ ಸಂಸ್ಕೃತಿಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯಲು ಕೃಷಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಚಿಂತನೆ ಇದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ತಿಳಿಸಿದರು.

ಅವರು ಇಲ್ಲಿನ ಪ್ಯಾಲೇಸ್ ಗಾರ್ಡನ್‌ನಲ್ಲಿ ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಉಡುಪಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಇನ್ಲ್ಫುಎನ್ಸರ್ಸ್ ಆ್ಯಂಡ್ ಸ್ಟೇಕ್ ಹೋರ್ಲ್ಡ್ಸ್ ಮೀಟ್ - 2026 ನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಸ್ಥಳೀಯ ಗ್ರಾಮೀಣ ಜೀವನಶೈಲಿ, ಕೃಷಿ ಚಟುವಟಿಕೆಗಳು, ಸ್ಥಳೀಯ ಆಹಾರ ಪದ್ಧತಿ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ನೇರವಾಗಿ ಅನುಭವಿಸುವ ಅವಕಾಶ ಕಲ್ಪಿಸುವ, ಇದರ ಭಾಗವಾಗಿ ವಿಲೇಜ್ ವಾಕ್, ಫಾರ್ಮ್ ವಿಸಿಟ್‌ನಂತಹ ಚಟುವಟಿಕೆಗಳನ್ನು ಪ್ರವಾಸೋದ್ಯಮ ಪ್ಯಾಕೇಜ್‌ಗಳಲ್ಲಿ ಅಳವಡಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು. ಜಿಲ್ಲೆಯ 20 ಇನ್ಫ್ಲುಯೆನ್ಸರ್‌ಗಳನ್ನು ಸನ್ಮಾನಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಕರಾವಳಿ ಪ್ರವಾಸೋದ್ಯಮ ಸಂಘದ ಅಧ್ಯಕ್ಷ ಮನೋಹರ್ ಶೆಟ್ಟಿ, ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯ ಉಪಸ್ಥಿತರಿದ್ದರು. ಸುದೀಪ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳೆಯ ಪಾದರಕ್ಷೆಗಳಿಗೆ ಹೊಸ ರೂಪ ‘ದಾನ’
ಉಡುಪಿ: ನ. 27ರಿಂದ ರಾಜ್ಯ ಮಟ್ಟದ ಆಹಾರ ಮೇಳ