ಕನ್ನಡಪ್ರಭ ವಾರ್ತೆ ಕಾರ್ಕಳಧಾರ್ಮಿಕತೆಯ ಜೊತೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವುದೇ ಪ್ರಧಾನಿ ಮೋದಿಯವರ ಕನಸಾಗಿದೆ ಎಂದು ಕೇಂದ್ರ ಸಂಸ್ಕೃತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು.
ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಅದರಲ್ಲೂ ಕಾರ್ಕಳ ತಾಲೂಕಿನ ಕೆರೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ನೆರವು ಒದಗಿಸುವುದಾಗಿ ಗಜೇಂದ್ರ ಸಿಂಗ್ ಭರವಸೆ ನಿಡಿದರು.
ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಮಾತನಾಡಿ, ಶ್ರದ್ಧಾ ಕೇಂದ್ರಗಳ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಸ್ವದೇಶಿ ದರ್ಶನ್ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಅದಕ್ಕಾಗಿ 116 ಕೋಟಿ ರು. ಅನುದಾನವನ್ನು ಆನೆಕೆರೆ, ವರಂಗ ಜೈನ ಬಸದಿ ಮತ್ತು ರಾಮಸಮುದ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಶ್ರಮಿಸಲಿದೆ. ಅನುದಾನ ಬಿಡುಗಡೆಗೆ ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ದೆಹಲಿಯಲ್ಲಿ ಭೇಟಿಯಾಗಿ ವಿನಂತಿ ಮಾಡಿಕೊಳ್ಳಲಾಗಿತ್ತು ಎಂದರು.ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಬಿಜೆಪಿ ಹಿರಿಯ ನಾಯಕ ಎಂ.ಕೆ. ವಿಜಯ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಕ್ಷೇತ್ರಾಧ್ಯಕ್ಷ ನವೀನ್ ನಾಯಕ್, ಪುರಸಭಾ ಅಧ್ಯಕ್ಷ ಯೋಗೀಶ್ ದೇವಾಡಿಗ, ಉಪಾಧ್ಯಕ್ಷ ಪ್ರಶಾಂತ್ ಕೋಟ್ಯಾನ್, ಬಿಜೆಪಿ ಪ್ರಮುಖರಾದ ಮಣಿರಾಜ ಶೆಟ್ಟಿ, ಮಹಾವೀರ ಹೆಗ್ಡೆ, ರೇಷ್ಮಾ ಉದಯ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ಗುಣಪಾಲ್ ಕಡಂಬ, ಸಂತೋಷ್ ಜೈನ್ ರೆಂಜಾಳ ಮೊದಲಾದವರು ಈ ಸಂದರ್ಭದಲ್ಲಿದ್ದರು.