ಪ್ರವಾಸಿ ಬೋಟುಗಳಿಗೆ ಪರವಾನಗಿ ಕಡ್ಡಾಯ: ಡಿಸಿ ಸ್ವರೂಪ

KannadaprabhaNewsNetwork |  
Published : Jan 28, 2026, 03:30 AM IST
ಕಡಲ ತೀರದ ಪ್ರವಾಸೋದ್ಯಮದ ಭದ್ರತೆಗೆ ಬಗ್ಗೆ ಡಿಸಿ ಕಚೇರಿಯಲ್ಲಿ ಸಭೆ ನಡೆಯಿತು  | Kannada Prabha

ಸಾರಾಂಶ

ಸಮುದ್ರದಲ್ಲಿ ಪ್ರವಾಸಿಗರನ್ನು ಸಾಗಿಸುವ ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟುಗಳು 45 ದಿನಗಳೊಳಗೆ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು, ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಪಡೆಯದ ಪ್ರವಾಸಿ ಬೋಟ್‌ಗಳ ಕಾರ್ಯಾಚರಣೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕಟ್ಟನಿಟ್ಟಾಗಿ ಸೂಚನೆ ನೀಡಿದ್ದಾರೆ.

ಉಡುಪಿ: ಸಮುದ್ರದಲ್ಲಿ ಪ್ರವಾಸಿಗರನ್ನು ಸಾಗಿಸುವ ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟುಗಳು 45 ದಿನಗಳೊಳಗೆ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡು, ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದ ಅನುಮತಿ ಪಡೆದುಕೊಳ್ಳಬೇಕು. ಅನುಮತಿ ಪಡೆಯದ ಪ್ರವಾಸಿ ಬೋಟ್‌ಗಳ ಕಾರ್ಯಾಚರಣೆಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕಟ್ಟನಿಟ್ಟಾಗಿ ಸೂಚನೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಕೋಡಿಬೆಂಗ್ರೆಯಲ್ಲಿ ನಡೆದ ದೋಣಿ ದುರಂತದಲ್ಲಿ ಇಬ್ಬರು ಪ್ರವಾಸಿಗರ ದುರ್ಮರಣದ ಹಿನ್ನೆಲೆಯಲ್ಲಿ ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಕಡಲ ತೀರದ ಪ್ರವಾಸೋದ್ಯಮದಲ್ಲಿ ಭದ್ರತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಗೆ, ಮುಖ್ಯವಾಗಿ ಕಡಲ ತೀರಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರು ಕಡಲಲ್ಲಿ ವಿಹರಿಸಲು ಪ್ರವಾಸಿ ಬೋಟ್‌ಗಳ ಮೊರೆ ಹೋಗುತ್ತಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಕಡ್ಡಾಯವಾಗಿ ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿ ಪಡೆಯಬೇಕು ಮತ್ತು ಪ್ರತೀ ವರ್ಷ ಪರವಾನಿಗೆಯನ್ನು ನವೀಕರಿಸಿಕೊಳ್ಳಬೇಕು ಎಂದರು.ಪ್ರವಾಸಿ ಬೋಟ್‌ಗಳಲ್ಲಿ ಪ್ರವಾಸಿಗರ ಕಡ್ಡಾಯವಾಗಿ ಲೈಫ್ ಜಾಕೆಟ್ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರವಾಸಿಗರು ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳುವುದು ಬೋಟುಗಳವರ ಹೊಣೆ. ಎಲ್ಲರೂ ಲೈಫ್ ಜಾಕೆಟ್ ಧರಿಸಿದ್ದಲ್ಲಿ ಮಾತ್ರ ಬೋಟ್ ಮುಂದೆ ಸಾಗಲಿದೆ ಎಂಬ ಪ್ರೀ-ರೆಕಾರ್ಡೆಡ್ ಆಡಿಯೋವನ್ನು ಬೋಟ್‌ಗಳಲ್ಲಿ ಹೊರಡಿಸಬೇಕು ಎಂದರು.ಪ್ರವಾಸಿ ಬೋಟ್ ಮಾಲೀಕರು ಮತ್ತು ಚಾಲಕರ ಸಭೆಯನ್ನು ಶೀಘ್ರದಲ್ಲಿ ಕರೆದು ಪರವಾನಿಗೆ ಪಡೆಯುವ, ಸುರಕ್ಷತಾ ವಿಧಾನ ಅನುಸರಿಸುವ ಬಗ್ಗೆ, ವಿಮೆ ಸೌಲಭ್ಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಬೇಕು. ಜೀವ ರಕ್ಷಕ ಸಿಬ್ಬಂದಿ ಸಹ ಜೀವರಕ್ಷಣಾ ವಿಧಾನಗಳ ಬಗ್ಗೆ ಮಾಹಿತಿ ಹೊಂದಿರುವಂತೆ ನೋಡಿಕೊಳ್ಳಬೇಕು ಎಂದವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ.ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ