ಕನ್ನಡಪ್ರಭ ವಾರ್ತೆ ಮಂಗಳೂರು
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5 ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದ್ದು, ಈಗ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟವನ್ನು ಸಂಘಟಿಸಲಾಗುತ್ತಿದೆ ಎಂಬುವುದನ್ನು ಅವರ ಗಮನಕ್ಕೆ ತರಲಾಯಿತು.ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ ಮತ್ತಿತರರಿದ್ದರು.