ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸ್ವಾವಲಂಬನೆಯತ್ತ: ಜಿ.ಟಿ. ಪಂಪಾಪತಿ

KannadaprabhaNewsNetwork |  
Published : Apr 27, 2024, 01:21 AM IST
26ಎಸ್.ಎನ್.ಡಿ.01ಸಂಡೂರಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ ಮಾತನಾಡಿದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಮಾವೇಶದಲ್ಲಿ ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿರುವ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ.

ಕನ್ನಡಪ್ರಭ ವಾರ್ತೆ ಸಂಡೂರು

ಹೊಸಪೇಟೆಯಲ್ಲಿ ಏ. 28ರಂದು ನಡೆಯುವ ವಿಜಯ ಸಂಕಲ್ಪ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಜಿ.ಟಿ. ಪಂಪಾಪತಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸಮಾವೇಶದಲ್ಲಿ ಬಳ್ಳಾರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿರುವ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಸಂಡೂರು ಕ್ಷೇತ್ರದ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಿ, ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ವಿ.ಕೆ. ಬಸಪ್ಪ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಮಕೃಷ್ಣ, ಸಂಡೂರು ಮಂಡಲ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ, ಉಪಾಧ್ಯಕ್ಷೆ ಪುಷ್ಪಾ ಪೊಂಪನಗೌಡ ಹಾಗೂ ಮುಖಂಡರಾದ ಕೆ.ಎಸ್. ದಿವಾಕರ್ ಅವರು ಮಾತನಾಡಿ, ಸಂಡೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳು ಸಿಗುತ್ತಿಲ್ಲ. ಇಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ದೊರೆಯುತ್ತಿಲ್ಲ. ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಅವರು ಪ.ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ್ದಾರೆ. ಆದ್ದರಿಂದ ಕ್ಷೇತ್ರದಲ್ಲಿ ಬಿ. ಶ್ರೀರಾಮುಲು ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರ ಕೈಯ್ಯನ್ನು ಬಲಪಡಿಸೋಣ ಎಂದರು.

ಸಂಡೂರು ಮಂಡಲ ಪ್ರಧಾನ ಕಾರ್ಯದರ್ಶಿ ಆರ್.ಟಿ. ರಘುನಾಥ, ಮುಖಂಡರಾದ ದರೋಜಿ ರಮೇಶ್, ನರಸಿಂಹ, ಪ್ರಭುಗೌಡ, ಹರೀಶ್, ದೀಪಾ ಘೋಡ್ಕೆ, ರಮೇಶ್ ಧರ್ಮಾಪುರ, ವಿಶ್ವನಾಥಗೌಡ, ಯರ್ರೆಮ್ಮಮ್ಮ, ವಿ.ಎಸ್. ಶಂಕರ್, ರಮೇಶ್, ಕೆ. ವಿಜಯಕುಮಾರ್, ಹನುಮೇಶ್, ಜಿರಂಜೀವಿ, ಎ.ಎಂ. ಶರಣಯ್ಯ, ಗೀತಾ ಮುಂತಾದವರು ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ