)
ಸಾಗರ: ಪಟ್ಟಣದ ಅಗ್ರಹಾರದಲ್ಲಿರುವ ಶ್ರೀರಾಘವೇಂದ್ರಸ್ವಾಮಿ ಮಠದಲ್ಲಿ ಆ.೨೯ರಿಂದ ಶ್ರೀರಾಘವೇಂದ್ರಸ್ವಾಮಿಗಳ ಆರಾಧನಾ ಮಹೋತ್ಸವ ನಡೆಯಲಿದೆ. ಆ.೨೯ರಂದು ಪೂರ್ವಾರಾಧನೆ, ೩೦ರಂದು ಮಧ್ಯಾರಾಧನೆ (ಪುಣ್ಯದಿನ), ೩೧ರಂದು ಉತ್ತರಾರಾಧನೆ ನಡೆಯಲಿದೆ. ಆರೋಧನಾ ಮಹೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ ಪ್ರಾಕಾರೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಠದ ಆಡಳಿತ ಸಮಿತಿ ನೀಡಿದೆ.