ಮಹದಾಯಿ ನೀರು, ವಿಮಾನ ನಿಲ್ದಾಣಗಳ ನಾಮಕರಣಕ್ಕೆ ಆಗ್ರಹಿಸಿ ಸೆ. 13ರಂದು ಟ್ರ್ಯಾಕ್ಟರ್ ರ‍್ಯಾಲಿ

KannadaprabhaNewsNetwork |  
Published : Sep 11, 2026, 02:30 AM IST
ಕಾಂಗ್ರೆಸ್‌ ಅಧ್ಯಕ್ಷರು | Kannada Prabha

ಸಾರಾಂಶ

ಮಹದಾಯಿ ಯೋಜನೆಯಿಂದ ಮೂರು ಜಿಲ್ಲೆಗಳ 14 ತಾಲೂಕುಗಳ ಕುಡಿಯುವ ನೀರು ಹಾಗೂ ನೀರಾವರಿ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಕುಡಿಯುವ ನೀರಿನ ಸಮಸ್ಯೆಗೂ ಯೋಜನೆ ಮಹತ್ವದ್ದಾಗಿದೆ. ಕರ್ನಾಟಕಕ್ಕೆ 16.5 ಟಿಎಂಸಿ ಮಹದಾಯಿ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು.

ಕುಂದಗೋಳ:

ಕಳೆದ 45 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಹದಾಯಿ ನೀರಿನ ಸಮಸ್ಯೆ ಬಗೆಹರಿಸುವುದು ಸೇರಿದಂತೆ ರಾಜ್ಯದ ವಿಮಾನ ನಿಲ್ದಾಣಗಳಿಗೆ ನಾಡಿನ ಮಹನೀಯರ ಹೆಸರಿಡುವಂತೆ ಆಗ್ರಹಿಸಿ ಸೆ. 13ರಂದು ಹುಬ್ಬಳ್ಳಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಹದಾಯಿ ಹಾಗೂ ನಾಮಕರಣ ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಕುನ್ನೂರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹದಾಯಿ ಯೋಜನೆಯಿಂದ ಮೂರು ಜಿಲ್ಲೆಗಳ 14 ತಾಲೂಕುಗಳ ಕುಡಿಯುವ ನೀರು ಹಾಗೂ ನೀರಾವರಿ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ಕುಡಿಯುವ ನೀರಿನ ಸಮಸ್ಯೆಗೂ ಯೋಜನೆ ಮಹತ್ವದ್ದಾಗಿದೆ. ಕರ್ನಾಟಕಕ್ಕೆ 16.5 ಟಿಎಂಸಿ ಮಹದಾಯಿ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು ಎಂದರು.

4 ವಿಮಾನ ನಿಲ್ದಾಣಗಳ ನಾಮಕರಣ:

ರಾಜ್ಯ ಸರ್ಕಾರವು 2023ರ ಬೆಳಗಾವಿ ಅಧಿವೇಶನದಲ್ಲಿ ಪಕ್ಷಾತೀತವಾಗಿ ವಿಧಾನಮಂಡಲದಲ್ಲಿ ಚರ್ಚಿಸಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹಾಗೂ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ, ಈ ವರೆಗೂ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರಿನ ಎರಡನೇ ಟರ್ಮಿನಲ್ ವಿಮಾನ ನಿಲ್ದಾಣಕ್ಕೆ ವರನಟ ಡಾ. ರಾಜ್‌ಕುಮಾರ್ ಅವರ ಹೆಸರಿಡಬೇಕು. ಈ ಎಲ್ಲ ಬೇಡಿಕೆ ಈಡೇರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಸೆಳೆಯಲು ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಮೂರುಸಾವಿರ ಮಠದಿಂದ ರ‍್ಯಾಲಿ:

ಸೆ.13ರಂದು ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಆರಂಭವಾಗಲಿದೆ. ಮಠಾಧೀಶರು, ವಿವಿಧ ಜನಪ್ರತಿನಿಧಿಗಳು, ರೈತ ಮುಖಂಡರು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಕುಂದಗೋಳ ತಾಲೂಕಿನ ನಾಮಕರಣ ಸಮಿತಿ ವತಿಯಿಂದಲೂ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಶಿವಾನಂದ ಮುತ್ತಣ್ಣವರ, ಹೇಮನಗೌಡ ಬಸನಗೌಡ್ರ, ಗಂಗಾಧರ ಗುಡೆಮ್ಮನವರ, ಚನ್ನಬಸನಗೌಡ ಸಂಶಿ, ಶಂಕರಗೌಡ ನಿಜಲಿಂಗನಗೌಡ್ರ, ಈಶ್ವರ ಹೊಳೆಯನ್ನವರ, ರಾಜು ಮಲ್ಲಿಗವಾಡ, ರಾಜು ಹೂಗಾರ, ಶಾರುಖ್ ಖಾನ್ ಬಿಜಾಪುರ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

80 ಡೆಸಿಬಲ್‌ ಮೀರಿದರೆ ಡಿಜೆ ಬಾಕ್ಸ್‌ ವಶ, ಪ್ರಕರಣ ದಾಖಲು
ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್‌ ಪೂಜಾರಿ ದ.ಕ. ಕಾಂಗ್ರೆಸ್‌ ಅಧ್ಯಕ್ಷ