ಇಂದು, ನಾಳೆ ಮಂಗಳೂರಲ್ಲಿ ಸಂಜೆಯಿಂದ ಸಂಚಾರ ಬದಲಾವಣೆ

KannadaprabhaNewsNetwork |  
Published : May 25, 2024, 12:53 AM IST
2 | Kannada Prabha

ಸಾರಾಂಶ

ಮಂಗಳೂರಿನಲ್ಲಿ ಶನಿವಾರ ನಗರದ ಪಿವಿಎಸ್‌ ಹಾಗೂ ಲಾಲ್‌ಬಾಗ್ ಜಂಕ್ಷನ್‌ಗಳ ನಡುವೆ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲ ಮೀಡಿಯನ್‌ಗಳನ್ನು ಮುಚ್ಚಬೇಕಾಗುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಹಲವಾರು ಪ್ರಮುಖ ವಿವಿಐಪಿಗಳು ಮಂಗಳೂರು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಸಂಜೆ 5 ರಿಂದ ರಾತ್ರಿ 9 ಗಂಟೆ ವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ನಗರದ ಪಿವಿಎಸ್‌ ಹಾಗೂ ಲಾಲ್‌ಬಾಗ್ ಜಂಕ್ಷನ್‌ಗಳ ನಡುವೆ ಎಂ.ಜಿ ರಸ್ತೆಯಲ್ಲಿನ ಟಿ.ಎಂ.ಎ.ಪೈ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಗಣ್ಯರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆ ಇರುತ್ತದೆ. ಈ ಕಾರಣದಿಂದ ನವಭಾರತ ಸರ್ಕಲ್‌ನಿಂದ ಪಿವಿಎಸ್ ಮುಖಾಂತರ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ ರಸ್ತೆಯಲ್ಲಿನ ಎಲ್ಲ ಮೀಡಿಯನ್‌ಗಳನ್ನು ಮುಚ್ಚಬೇಕಾಗುತ್ತದೆ. (ಬೆಸೆಂಟ್ ಜಂಕ್ಷನ್, ಕೋಡಿಯಾಲ್‌ಗುತ್ತು ಕ್ರಾಸ್, ಬಲ್ಲಾಳ್‌ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್). ಆದ ಕಾರಣ ಈ ರಸ್ತೆಯನ್ನು ಉಪಯೋಗಿಸುವ ಎಲ್ಲ ವಾಹನ ಚಾಲಕರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಸೂಚಿಸಿದೆ ಎಂದು ಪೊಲೀಸ್‌ ಕಮಿಷನರ್‌ ಕಚೇರಿ ಪ್ರಕಟಣೆ ತಿಳಿಸಿದೆ. ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯ ಸ್ಥಳಗಳು:ಕೊಟ್ಟಾರ ಚೌಕಿ, ಕುಂಟಿಕಾನ, ಕೆ.ಪಿ.ಟಿ, ನಂತೂರು, ಕೆ.ಎಸ್.ಆರ್.ಟಿ.ಸಿ., ಬಂಟ್ಸ್ ಹಾಸ್ಟೆಲ್, ಡಾ. ಅಂಬೇಡ್ಕರ್ ಸರ್ಕಲ್, ಹಾರ್ಟಿಕಲ್ಚರ್ ಜಂಕ್ಷನ್, ಬಲ್ಮಠ, ಹಂಪನಕಟ್ಟೆ, ಕರಾವಳಿ ಸರ್ಕಲ್, ಕಂಕನಾಡಿ, ಪಂಪ್‌ವೆಲ್, ತೊಕ್ಕೊಟ್ಟು.ಮಂಗಳೂರು ನಗರದಲ್ಲಿ ಮಾಡಲಾಗಿರುವ ಸಂಚಾರ ಪರ್ಯಾಯ ವ್ಯವಸ್ಥೆ ಈ ಕೆಳಗಿನಂತಿದೆ.

1.ಹಂಪನಕಟ್ಟೆಯಿಂದ ಬಂಟ್ಸ್ ಹಾಸ್ಟೆಲ್ ಮುಖಾಂತರ ಲೇಡಿಹಿಲ್‌ಗೆ ಹೋಗುವ ಎಲ್ಲ ವಾಹನಗಳು ಕರಂಗಲಪಾಡಿ ಅಥವಾ ಭಾರತ್‌ ಬೀಡಿ ಜಂಕ್ಷನ್ ಮುಖಾಂತರ ಚಲಿಸುವುದು.

2.ಪಿ.ವಿ.ಎಸ್. ಜಂಕ್ಷನ್‌ನಿಂದ ಲೇಡಿಹಿಲ್ ಸರ್ಕಲ್‌ವರೆಗಿನ ಎಂ.ಜಿ. ರಸ್ತೆಗೆ ಬಂದು ಸೇರುವ ಎಲ್ಲ ಕೂಡು ರಸ್ತೆಗಳನ್ನು ಉಪಯೋಗಿಸುವ ವಾಹನ ಸವಾರರು ಬಿಜೈ ಚರ್ಚ್ ರೋಡ್ ಅಥವಾ ಕುದ್ರೋಳಿ ರಸ್ತೆಯನ್ನು ಉಪಯೋಗಿಸುವುದು. ಬಸ್‌ಗಳ ಸಂಚಾರಕ್ಕೆ ನಿಗದಿಪಡಿಸಿದ ರಸ್ತೆಗಳು:1.ಕೆ.ಎಸ್.ರಾವ್ ರಸ್ತೆ, ಎಂ.ಜಿ. ರಸ್ತೆ, ಬಂಟ್ಸ್ ಹಾಸ್ಟೆಲ್ ಮುಖಾಂತರ ಸಂಚರಿಸುವ ಎಲ್ಲ ಸಿಟಿ ಬಸ್‌ಗಳು, ಎಕ್ಸ್‌ಪ್ರೆಸ್ ಬಸ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಹಂಪನಕಟ್ಟ, ಡಾ.ಅಂಬೇಡ್ಕರ್ ವೃತ್ತ, ಬಲ್ಮಠ, ಹಾರ್ಟಿಕಲ್ಚರ್ ಜಂಕ್ಷನ್, ಕದ್ರಿ ಜಂಕ್ಷನ್, ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ. 2.ಕೊಟ್ಟಾರಚೌಕಿ ಮುಖಾಂತರ ಸ್ಟೇಟ್‌ಬ್ಯಾಂಕ್ ಕಡೆಗೆ ಬರುವ ಎಲ್ಲ ಸಿಟಿ ಬಸ್‌ಗಳು, ಎಕ್ಸ್‌ಪ್ರೆಸ್ ಬಸ್‌ಗಳು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ನಂತೂರು ಮುಖಾಂತರ ಸಂಚರಿಸಲು ಸೂಚಿಸಿದೆ. 3.ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದಿಂದ ಹೊರಹೋಗುವ ಹಾಗೂ ಒಳಬರುವ ಎಲ್ಲ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನ ಜಂಕ್ಷನ್ ಮೂಲಕ ಒಳ ಬರಲು ಹಾಗೂ ಹೊರ ಹೋಗಲು ಸೂಚಿಸಿದೆ. ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:ಪಿ.ವಿ.ಎಸ್ ಜಂಕ್ಷನ್‌ನಿಂದ ಲಾಲ್‌ಭಾಗ್ ಜಂಕ್ಷನ್‌ವರೆಗಿನ ಎಂ.ಜಿ ರಸ್ತೆಯಲ್ಲಿ, ಪಿವಿಎಸ್‌ ಜಂಕ್ಷನ್‌ನಿಂದ ಬಂಟ್ಸ್ ಹಾಸ್ಟೆಲ್ ಜಂಕ್ಷನ್‌ವರೆಗೆ ಹಾಗೂ ಲಾಲ್‌ಬಾಗ್ ಜಂಕ್ಷನ್‌ನಿಂದ ಕೆ.ಪಿ.ಟಿ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ