ಮರ ಬಿದ್ದು ಮಡಿಕೇರಿ-ಮಾದಾಪುರ ರಸ್ತೆ ಸಂಚಾರ ವ್ಯತ್ಯಯ

KannadaprabhaNewsNetwork |  
Published : Jul 29, 2026, 02:45 AM IST
 | Kannada Prabha

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಧ್ಯಾಹ್ನವರೆಗೆ ಉತ್ತಮ ಮಳೆ ಸುರಿಯಿತು.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಧ್ಯಾಹ್ನವರೆಗೆ ಉತ್ತಮ ಮಳೆ ಸುರಿಯಿತು. ಮಳೆಯಿಂದಾಗಿ ಮಡಿಕೇರಿ- ಮಾದಾಪುರ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಬಿದ್ದು, ಅರ್ಧ ತಾಸು ರಸ್ತೆ ಸಂಚಾರದಲ್ಲಿ ವ್ಯತ್ಯಯ ಕಂಡುಬಂತು. ಮರ ತೆರವು ಬಳಿಕ ರಸ್ತೆ ಸಂಚಾರಕ್ಕೆಅವಕಾಶ ಮಾಡಿಕೊಡಲಾಯಿತು.

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.46 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.86 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 851.04 ಮಿ.ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 2089.90 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ 14, ನಾಪೋಕ್ಲು 15.80, ಸಂಪಾಜೆ 23.50, ಭಾಗಮಂಡಲ 31, ವಿರಾಜಪೇಟೆ 6.20, ಅಮ್ಮತ್ತಿ 4, ಹುದಿಕೇರಿ 6.30, ಶ್ರೀಮಂಗಲ 13, ಪೊನ್ನಂಪೇಟೆ 10, ಬಾಳೆಲೆ 8.03, ಸೋಮವಾರಪೇಟೆ 16, ಶನಿವಾರಸಂತೆ 30, ಶಾಂತಳ್ಳಿ 34, ಕೊಡ್ಲಿಪೇಟೆ 7.90, ಕುಶಾಲನಗರ 0.60, ಸುಂಟಿಕೊಪ್ಪ 19 ಮಿ.ಮೀ.ಮಳೆಯಾಗಿದೆ. ಹಾರಂಗಿ ಜಲಾಶಯ ಮಟ್ಟ;

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2857.55 ಅಡಿಗಳು. ಕಳೆದ ವರ್ಷ ಇದೇ ದಿನ 2853.61 ಅಡಿ. ಹಾರಂಗಿಯಲ್ಲಿ ಸುರಿದ ಮಳೆ 2.40 ಮಿ.ಮೀ., ಕಳೆದ ವರ್ಷ ಇದೇ ದಿನ 7.20 ಮಿ.ಮೀ., ಇಂದಿನ ನೀರಿನ ಒಳಹರಿವು 2356 ಕ್ಯುಸೆಕ್, ಕಳೆದ ವರ್ಷ ಇದೇ ದಿನ 10107 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 1500 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 14458 ಕ್ಯುಸೆಕ್. ನಾಲೆಗೆ 350 ಕ್ಯುಸೆಕ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಕಿದಿಯೂರು ಕ್ರೆ.ಕೋ.ಆಪ್ ಸೊಸೈಟಿ ಕಿನ್ನಿಮುಲ್ಕಿ ಶಾಖೆ ಶುಭಾರಂಭ
ಹಾಸನ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂಲ್ಕಿಯ ಮಹಿಳೆ ಸಾವು