ಸಂಚಾರಿ ನಿಯಮ ಪಾಲಿಸಿದರೆ ಸುರಕ್ಷಿತ

KannadaprabhaNewsNetwork |  
Published : Dec 04, 2024, 12:30 AM IST
3ಡಿಡಬ್ಲೂಡಿ2ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಆಯೋಜಿಸಿದ್ದ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.  | Kannada Prabha

ಸಾರಾಂಶ

ರಸ್ತೆ ಸಾರ್ವಜನಿಕರಿಗೆ ಸೇರಿದ್ದು, ಸ್ವೇಚ್ಛಾಚಾರಿಗಳಾಗಿ ತಮಗೆ ತಿಳಿದಂತೆ ರಸ್ತೆಗಳಲ್ಲಿ ವಾಹನ ಓಡಿಸಬಾರದು. ಇದರಿಂದ ಸವಾರನ ಜತೆಗೆ ಸಂಚರಿಸುವವರಿಗೆ ಮತ್ತು ಇತರ ಸಹ ಪ್ರಯಾಣಿಕರ ಪ್ರಾಣಕ್ಕೂ ತೊಂದರೆ ಆಗುತ್ತದೆ.

ಧಾರವಾಡ:

ರಸ್ತೆ ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವುದರಿಂದ ಎಲ್ಲ ಸಂಚಾರಿಗಳು ಸುರಕ್ಷಿತವಾಗಿರುತ್ತಾರೆ. 2024ರ ಜನವರಿಯಿಂದ ನವೆಂಬರ್‌ ವರಗೆ ಅವಳಿನಗರದಲ್ಲಿ 118 ವಾಹನ ಅಪಘಾತ ಪ್ರಕರಣಗಳಾಗಿದ್ದು, 126 ಜನ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಆಯೋಜಿಸಿದ್ದ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ರಸ್ತೆ ಸಾರ್ವಜನಿಕರಿಗೆ ಸೇರಿದ್ದು, ಸ್ವೆಚ್ಛಾಚಾರಿಗಳಾಗಿ ತಮಗೆ ತಿಳಿದಂತೆ ರಸ್ತೆಗಳಲ್ಲಿ ವಾಹನ ಓಡಿಸಬಾರದು. ಇದರಿಂದ ಸವಾರನ ಜತೆಗೆ ಸಂಚರಿಸುವವರಿಗೆ ಮತ್ತು ಇತರ ಸಹ ಪ್ರಯಾಣಿಕರ ಪ್ರಾಣಕ್ಕೂ ತೊಂದರೆ ಆಗುತ್ತದೆ. ರಸ್ತೆ ಸಂಚಾರ ನಿಯಮ ಗೌರವಿಸಿ, ಪ್ರತಿಯೊಬ್ಬರು ಪಾಲಿಸಬೇಕೆಂದರು.

ಜಿಲ್ಲೆಯಲ್ಲಿ ರಸ್ತೆ ಸಂಚಾರ ನಿಯಮಗಳ ಕುರಿತು ಸಾರ್ವಜನಿಕರ ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರದಿಂದ ಆಯೋಜಿಸಲಾಗಿದೆ. ಕರಪತ್ರ, ಫೋಸ್ಟರ್‌ಗಳ ಮೂಲಕ ಸಂಚಾರಿ ನಿಯಮಗಳ ಮಾಹಿತಿ ನೀಡಲಾಗಿದೆ ಎಂದರು.

ಸಾರಿಗೆ ಇಲಾಖೆ ಅಪರ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ, ಉಪ ಪೊಲೀಸ್‌ ಆಯುಕ್ತ ರವೀಶ ಸಿ.ಆರ್. ಮಾತನಾಡಿದರು. ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿದ್ದರು. ಎಲ್ಲರೂ ರಸ್ತೆ ಸುರಕ್ಷತೆ ಪಾಲನೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ ಸ್ವಾಗತಿಸಿದರು. ಕಚೇರಿ ಸಿಬ್ಬಂದಿ ಜಿ.ವಿ. ದಿನಮನಿ ವಂದಿಸಿದರು. ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿದ್ದರು. ಹೆಲ್ಮೆಟ್‌ ಧರಿಸಿಯುವಕ-ಯುವತಿಯರು ರಸ್ತೆ ಸಂಚಾರ ನಿಯಮ ಪಾಲಿಸಬೇಕು. ವಾಹನ ಓಡಿಸುವಾಗ ತಲೆಗೆ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸಬೇಕು. ಸೂಚಿತ ವೇಗದ ಮೀತಿ ಪಾಲಿಸಬೇಕು. ರಸ್ತೆ ಬದಿಯಲ್ಲಿ ಅಳವಡಿಸಿರುವ ಸೂಚನಾ ಫಲಕ ಗಮನಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...