ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಲು ಡಿಸಿ ಸೂಚನೆ

KannadaprabhaNewsNetwork |  
Published : Jul 25, 2024, 01:21 AM IST
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು. | Kannada Prabha

ಸಾರಾಂಶ

Traffic Ruls Follows awareness programme need: DC suggest

-ಜಿಲ್ಲಾಧಿಕಾರಿ ಡಾ. ಸುಶೀಲಾ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ

-----

ಕನ್ನಡಪ್ರಭ ವಾರ್ತೆ ಯಾದಗಿರಿ

ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆಗಳನ್ನು ದುರಸ್ತಿ ಪಡಿಸಿ. ಅಪಘಾತಗಳಾಗದಂತೆ ಎಚ್ಚರಿಕೆ ಫಲಕ ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು-ನೋವು ಉಂಟಾಗುತ್ತಿವೆ. ಅವುಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜಾಗೃತಿ ಅಭಿಯಾನ ನಡೆಸಿ, ಅಪಘಾತ ಪ್ರಕರಣ ನಿಯಂತ್ರಕ್ಕೆ ಕ್ರಮವಹಿಸುವಂತೆ ತಿಳಿಸಿದರು.

ರಸ್ತೆಗಳಲ್ಲಿ ಅನಗತ್ಯವಾಗಿ ಹಾಕಿರುವ ಹಂಪ್‌ಗಳನ್ನು ತೆರವುಗೊಳಿಸಬೇಕು. ನಗರದಲ್ಲಿನ ಮುಖ್ಯ ವೃತ್ತಗಳು ಸೇರಿದಂತೆ, ಮುಖ್ಯರಸ್ತೆ ಮಧ್ಯದಲ್ಲಿರುವ ರಸ್ತೆ ಗುಂಡಿಗಳ ದುರಸ್ತಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಬೇಕು. ವೇಗಮಿತಿ ತಪಾಸಣೆ ಕಾರ್ಯ ಕ್ರಮಬದ್ಧವಾಗಿ ನಡೆಸಬೇಕು ಎಂದರು.

ಅಪಘಾತ ವಿಭಜಕಗಳು, ಬ್ಯಾನರ್‌ ನಿಯಮಾನುಸಾರ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಅವಧಿ ಪೂರ್ಣಗೊಂಡ ವಾಹನಗಳು ಸಂಚರಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಲೆ ವಾಹನದಲ್ಲಿ ಕಡ್ಡಾಯ ಶಾಲಾ ಸಿಬ್ಬಂದಿ ನಿಯೋಜಿಸಬೇಕು ಎಂದರು.

ಬಿಡಾಡಿ ದನಗಳ ಕಾರಣದಿಂದ ಬೈಕ್ ಸವಾರರು, ಆಟೋ, ಕಾರ್ ಚಾಲಕರು ದನಗಳಿಂದ ನಿಯಂತ್ರಣ ತಪ್ಪಿ ಅಪಘಾತ, ಸಾವು-ನೋವು ಸಂಭವಿಸಿವೆ. ವಾರಸುದಾರರು ತಮ್ಮ ದನಗಳನ್ನು ರಸ್ತೆಗೆ ಬರದಂತೆ ಕಟ್ಟಿಹಾಬೇಕು, ಮಾಲೀಕರು ಇಲ್ಲದ ಜಾನುವಾರು ಸಂಬಂಧಿಸಿದ ಅಧಿಕಾರಿಗಳು ವಶಕ್ಕೆ ಪಡೆದು ಗೋಶಾಲೆಗೆ ಸಾಗಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.

ವಲಯ ಅರಣ್ಯ ಉಪ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಅಭಿಮನ್ಯು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದಕುಮಾರ ಎಸ್.ಎಸ್. ಇದ್ದರು.

-----

ಫೋಟೊ: 24ವೈಡಿಆರ್‌5: ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು.

------

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ