ರೇಸ್‌ಕೋರ್ಸ್ ರಸ್ತೇಲಿ 2 ತಿಂಗಳು ಸಂಚಾರ ಬಂದ್‌

KannadaprabhaNewsNetwork |  
Published : Oct 06, 2026, 03:30 AM IST
ಕಬ್ಬನ್‌ಪಾರ್ಕ್ ಮೆಟ್ರೊ ನಿಲ್ದಾಣದ ಬಳಿ ನಿಂತ ಮಳೆ ನೀರು  ಹರಿದು ಹೋಗಲು ಅಡ್ಡಿಯಾಗಿದ್ದ ಬ್ಲಾಕೇಜ್ ತೆರವು ಮಾಡುತ್ತಿರುವ ಪಾಲಿಕೆ ಸಿಬ್ಬಂದಿ. | Kannada Prabha

ಸಾರಾಂಶ

ವೈಟ್‌ ಟಾಪಿಂಗ್‌ ಕಾಮಗಾರಿಯ ಹಿನ್ನೆಲೆಯಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿ 2 ತಿಂಗಳವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ

ಕನ್ನಡಪ್ರಭ ವಾರ್ತೆ ಬೆಂಗಳೂರು

ವೈಟ್‌ ಟಾಪಿಂಗ್‌ ಕಾಮಗಾರಿಯ ಹಿನ್ನೆಲೆಯಲ್ಲಿ ರೇಸ್ ಕೋರ್ಸ್ ರಸ್ತೆಯಲ್ಲಿ 2 ತಿಂಗಳವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರೇಸ್ ಕೋರ್ಸ್ ರಸ್ತೆಯ ಮೌರ್ಯ ಜಂಕ್ಷನ್‌ನಿಂದ ಹರೇಕೃಷ್ಣ ರಸ್ತೆ ಜಂಕ್ಷನ್‌ವರೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವತಿಯಿಂದ ವೈಟ್‌ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದ್ದು, ಈ ರಸ್ತೆಯಲ್ಲಿ ಹೊಸದಾಗಿ ಮಳೆ ನೀರು ಕಾಲುವೆ, ಒಳಚರಂಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಹೀಗಾಗಿ ಅ.5 ರಿಂದ 60 ದಿನಗಳ ಕಾಲ ರೇಸ್‌ಕೋರ್ಸ್ ರಸ್ತೆಯ ಟ್ರಿಲೈಟ್ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೂ ಹಾಗೂ ಶಿವಾನಂದ ಜಂಕ್ಷನ್‌ನಿಂದ ಮೌರ್ಯ ಜಂಕನ್‌ವರೆಗೂ ಸಂಚರಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

*ಸ್ಯಾಂಕಿ ರಸ್ತೆಯಲ್ಲಿ ಕೆ.ಆರ್.ಮಾರ್ಕೆಟ್ ಕಡೆಗೆ ಸಂಚರಿಸುವ ಬಿಎಂಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಹಾಗೂ ಭಾರೀ ವಾಹನಗಳು ವಿಂಡ್ಸರ್‌ ಮ್ಯಾನರ್‌ನಿಂದ ನೇರವಾಗಿ ಎಲ್‌ಆರ್‌ಡಿಇ ಜಂಕ್ಷನ್‌ ಕಡೆಗೆ ಚಲಿಸಿ, ಎಲ್‌ಆರ್‌ಡಿಇ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಬಸವೇಶ್ವರ ಜಂಕ್ಷನ್ ಮುಖಾಂತರ ಸಂಚರಿಸುವುದು.*ಸ್ಯಾಂಕಿ ರಸ್ತೆಯಲ್ಲಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ಬಿಎಂಟಿಸಿ ಬಸ್‌ಗಳು, ಖಾಸಗಿ ಬಸ್‌ಗಳು ಹಾಗೂ ಭಾರೀ ವಾಹನಗಳು ಒಳಗೊಂಡಂತೆ ಎಲ್ಲಾ ರೀತಿಯ ವಾಹನಗಳು ಕುಮಾರಕೃಪ ರಸ್ತೆಯ ಮುಖಾಂತರ ಶಿವಾನಂದ ಸರ್ಕಲ್ ತಲುಪಿ ಬಲ ತಿರುವು ಪಡೆದು ಎಸ್‌.ಸಿ ರಸ್ತೆಯಲ್ಲಿ ಎಡತಿರುವು ಪಡೆದು ಮೆಜೆಸ್ಟಿಕ್ ಕಡೆಗೆ ಸಂಚರಿಸುವುದು.*ಹಳೇ ಜೆಡಿಎಸ್ ಜಂಕ್ಷನ್‌ನಿಂದ ಟ್ರಿಲೈಟ್ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಹಳೇ ಜೆಡಿಎಸ್ ಜಂಕ್ಷನ್‌ನಲ್ಲಿ ಎಡಭಾಗದ ರಸ್ತೆಯಲ್ಲಿ ಟ್ರಿಲೈಟ್ ಜಂಕ್ಷನ್ ಕಡೆಗೆ ಮತ್ತು ರೆಸ್‌ವ್ಯೂ ಜಂಕ್ಷನ್‌ನಲ್ಲಿ ಎಡತಿರುವ ಪಡೆದು ಕುಮಾರ ಕೃಪ ರಸ್ತೆಯ ಮೂಲಕ ಶಿವಾನಂದ ಜಂಕ್ಷನ್ ಕಡೆಗೆ ಸಂಚರಿಸುವುದು. *ಟ್ರಿಲೈಟ್ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ತರದ ವಾಹನಗಳು ಟ್ರಿಲೈಟ್ ಜಂಕ್ಷನ್‌ನಿಂದ ಶಿವಾನಂದ ಫ್ಲೈ ಓವರ್ ಮೇಲೆ ನೇರವಾಗಿ ಚಲಿಸುವ ಮೂಲಕ ನೆಹರು ಸರ್ಕಲ್‌ನಿಂದ ಎಸ್.ಸಿ. ರಸ್ತೆಯನ್ನು ತಲುಪಿ ಮೆಜೆಸ್ಟಿಕ್ ಕಡೆಗೆ ಸಂಚರಿಸುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದಿ ಕಲಿತು ಕೆಲಸಕ್ಕೆ ಬಾ ಎಂದಿದ್ದ ಮ್ಯಾನೇಜರ್‌ ವಜಾ
ಸಂಜೆ ಮಳೆಗೆ ಸುಸ್ತಾದ ಸಿಲಿಕಾನ್‌ ಸಿಟಿ: ವಾಹನ ಸವಾರರು ಹೈರಾಣ