ದೇವರಗುಡ್ಡದ ಮಾಳ ಮಲ್ಲೇಶ್ವರಸ್ವಾಮಿ ಕಾರಣಿಕದಲ್ಲಿ ಅವಘಡ- ಇಬ್ಬರ ಸಾವು

KannadaprabhaNewsNetwork |  
Published : Oct 04, 2025, 01:00 AM IST
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ದೇವರುಗುಡ್ಡದಲ್ಲಿ ವಿಜಯದಶಮಿ ದಿನದಂದು ತಡರಾತ್ರಿ ಜರುಗಿದ ಬಡಿಗೆ ಬಡದಾಟದ ದೃಶ್ಯ.  | Kannada Prabha

ಸಾರಾಂಶ

"ಗೋಪುರಕ್ಕೆ ಹಾವು ಹರಿದಾಡೀತು ಎಚ್ಚರ. ಗಂಗಿ ಹೊಳೆದಂಡಿಗೆ ನಿಂತಾಳ. ಉತ್ತರ ಭಾಗಕ್ಕೆ ಹೊಂಟಾಳ " ಎಂದು ತಿಳಿಸಿದ್ದಾರೆ.

ಸಿರುಗುಪ್ಪ: ಬಡಿಗೆ ಬಡದಾಟ ಹಬ್ಬ ಎಂದೇ ಪ್ರಸಿದ್ಧಿ ಪಡೆದಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ದೇವರಗುಡ್ಡ ಪ್ರದೇಶದಲ್ಲಿ ದಸರಾ ಅಂಗವಾಗಿ ಜರುಗಿದ ಮಾಳ ಮಲ್ಲೇಶ್ವರ ಜಾತ್ರೆಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಗೊರವಯ್ಯ ಕಾರಣಿಕ ನಡೆದಿದ್ದಾರೆ. "ಗೋಪುರಕ್ಕೆ ಹಾವು ಹರಿದಾಡೀತು ಎಚ್ಚರ. ಗಂಗಿ ಹೊಳೆದಂಡಿಗೆ ನಿಂತಾಳ. ಉತ್ತರ ಭಾಗಕ್ಕೆ ಹೊಂಟಾಳ " ಎಂದು ತಿಳಿಸಿದ್ದಾರೆ.

ಈ ಮಧ್ಯೆ ಪ್ರತಿ ವರ್ಷ ಸಂಪ್ರದಾಯದಂತೆ ನಡೆಯುವ ಬಡಿಗೆ ಬಡಿದಾಟದಲ್ಲಿ ಈ ಬಾರಿ ಅವಘಡ ಸಂಭವಿಸಿದ್ದು, ಇಬ್ಬರು ಮೃತರಾಗಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಐವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಈ ಕಾರಣಿಕವನ್ನು ಭಕ್ತರು ನಾನಾ ರೀತಿಯಲ್ಲಿ ಅರ್ಥೈಸಿದ್ದಾರೆ. ದೇಶದಲ್ಲಾಗುವ ರಾಜಕೀಯ ಏರುಪೇರುಗಳು, ಆರ್ಥಿಕ ಹಾಗೂ ಧಾರ್ಮಿಕ ನೆಲೆಯಲ್ಲಾಗುವ ಬೆಳವಣಿಗೆಗಳು ಕುರಿತು ಕಾರಣಿಕ ನುಡಿಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಕರ್ನಾಟಕಾಂಧ್ರ ಗಡಿಯಲ್ಲಿ ಜರುಗುವ ದೇವರಗುಡ್ಡದ ಜಾತ್ರೆಗೆ ಗಡಿಭಾಗದ ಕನ್ನಡದ ಗ್ರಾಮಗಳು ಹಾಗೂ ಬಳ್ಳಾರಿ ಜಿಲ್ಲೆಯ ನಾನಾ ಕಡೆಗಳಿಂದ ಸಾವಿರಾರು ಜನರು ಭಾಗವಹಿಸುತ್ತಾರೆ. ಹೀಗಾಗಿ ದೇವರಗುಡ್ಡದ ಕಾರಣಿಕ ಭವಿಷ್ಯವನ್ನು ತಿಳಿಯಲು ಈ ಭಾಗದ ಜನರು ಹೆಚ್ಚು ಕುತೂಹಲದಿಂದ ಕಾಯುತ್ತಾರೆ.

ಈ ಬಾರಿಯ ಗುಡ್ಡದ ಜಾತ್ರೆಯಲ್ಲಿ ನಡೆದ ಬಡಿದಾಟದಲ್ಲಿ ಇಬ್ಬರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪೈಕಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಆದೋನಿಯ ಆಂಜಿನೇಯಲು (50) ಹಾಗೂ ಅರಿಕೇರಿ ತಿಮ್ಮಪ್ಪ (40) ಮೃತರಾದವರು ಎಂದು ಗುರುತಿಸಲಾಗಿದೆ.

ದಸರಾ ಹಬ್ಬದಲ್ಲಿ ಗುಡ್ಡ ಪ್ರದೇಶದಲ್ಲಿ ಜರುಗುವ ಜಾತ್ರೆಯಲ್ಲಿ ದೇವರ ಮೂರ್ತಿಯನ್ನು ತಮ್ಮ ಊರಿಗೆ ಕರೆದೊಯ್ಯಲು ಭಕ್ತರು ಬಡಿದಾಡಿಕೊಳ್ಳುವ ವಿಶಿಷ್ಟ ಆಚರಣೆ ನೂರಾರು ವರ್ಷಗಳಿಂದಲೂ ನಡೆದುಕೊಂಡು ಬಂದಿದ್ದು, ಬಡಿದಾಟದಲ್ಲಿ ಪ್ರತಿವರ್ಷ ನೂರಾರು ಜನರಿಗೆ ತೀವ್ರವಾದ ಗಾಯಗಳಾಗುತ್ತವೆ. ಈ ಬಾರಿಯ ಬಡಿಗೆ ಬಡದಾಟದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ನೆರಣಿಕೆ, ಎಳ್ಳಾರ್ತಿ, ಅರಕೇರಿ, ಸುಳುವಾಯಿ, ವಿರುಪಾಪುರ ಸೇರಿದಂತೆ ನಾನಾ ಗ್ರಾಮಗಳ ಭಕ್ತರಿಗೆ ಪೆಟ್ಟಾಗಿದೆ ಎಂದು ಗೊತ್ತಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ನೆರಣಿಕೆ ಗ್ರಾಮಕ್ಕೆ ಸೇರಿದ ಮೀಸಲು ಅರಣ್ಯ ಪ್ರದೇಶದಲ್ಲಿ ಮಾಳ ಮಲ್ಲೇಶ್ವರ ಸ್ವಾಮಿ ದೇವಸ್ಥಾನವಿದ್ದು, ಪ್ರತಿವರ್ಷ ದಸರಾ ಹಬ್ಬದಂದು ಮಲ್ಲೇಶ್ವರಸ್ವಾಮಿ ಕಲ್ಯಾಣೋತ್ಸವ ನಿಮಿತ್ತ ಜಾತ್ರೆ ನಡೆಯುತ್ತದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಕಲ್ಯಾಣೋತ್ಸವದಲ್ಲಿ ಭಾಗವಹಿಸುತ್ತಾರೆ. ಬಳಿಕ ದೇವರನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯುವ ಕುರಿತಂತೆ ಬಡಿಗೆ ಬಡಿದಾಟ ನಡೆಯುತ್ತದೆ.

PREV

Recommended Stories

ಬೆಡ್‌ರೂಮಲ್ಲಿ ರಹಸ್ಯ ಕ್ಯಾಮೆರಾ: ಲೈಂಗಿಕಕ್ರಿಯೆ ಚಿತ್ರೀಕರಿಸಿ ದೌರ್ಜನ್ಯ
ಕಾವೇರಿ ಆರತಿ ನಿಲ್ಲಿಸಲ್ಲ: ಡಿಸಿಎಂ