ಮುಂಡರಗಿ: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ನಾಯಕತ್ವ ತರಬೇತಿ ಶಿಬಿರಗಳು ಅವಶ್ಯ ಎಂದು ಜಿಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ ಹೇಳಿದರು.
ವಿದ್ಯಾರ್ಥಿಗಳು, ರಾಜಕಾರಣಿಗಳು, ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು, ರೈತರು ಸೇರಿದಂತೆ ವಿವಿಧ ರಂಗಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರಿಗೂ ತರಬೇತಿ ಅವಶ್ಯವಾಗಿದೆ. ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಹಿರಿಯ ಸದಸ್ಯ ಎಸ್.ಎಸ್. ಗಡ್ಡದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಬಿರದಲ್ಲಿ ನಾಯಕತ್ವದ ತತ್ವಗಳು, ನಾಯಕತ್ವದ ಶೈಲಿ, ನಾಯಕತ್ವದ ಸಂವಹನ ಕೌಶಲ್ಯಗಳು, ನಿರ್ಧಾರ ತೆಗೆದುಕೊಳ್ಳುವಿಕೆ ತಂಡ ನಿರ್ವಹಣೆ ಮತ್ತು ಸಮಸ್ಯ ಪರಿಹಾರದಂತಹ ವಿಷಯಗಳ ಕುರಿತು ತಿಳಿಸಲಾಗುತ್ತಿದೆ ಎಂದರು.ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಾ.ಉಮಾ ಕೊಳ್ಳಿ, ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಆರ್.ಎಸ್. ಪಾಟೀಲ, ಆನಂದ ನಾಡಗೌಡರ, ಎಂ.ವಿ. ಅರಳಿ, ಎನ್.ಎನ್. ಗೌಡರ, ಎಚ್. ವಿರೂಪಾಕ್ಷಗೌಡರ, ಜೋತಿ ಹಾನಗಲ್, ಅರುಣಾ ಪಾಟೀಲ, ಎನ್.ಎಸ್. ಎಸ್. ಯೋಜನಾಧಿಕಾರಿ ಕಾವೇರಿ ಬೋಲಾ ಹಾಗೂ ತಿಮ್ಮನಾಯಕ, ಎನ್.ಎಸ್.ಎಸ್ ಶಿಬಿರಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.