ಪಕ್ಷ ಸಂಘಟನೆಗೆ ಪ್ರಶಿಕ್ಷಣ ಮಹಾಭಿಯಾನ ಪೂರಕ: ರೂಪಾಲಿ ನಾಯ್ಕ

KannadaprabhaNewsNetwork |  
Published : Mar 25, 2026, 02:30 AM IST
ಉದ್ಘಾಟನೆ | Kannada Prabha

ಸಾರಾಂಶ

ಪ್ರಶಿಕ್ಷಣ ವರ್ಗ ಪಕ್ಷದ ಮೇಲಿನ ಬದ್ಧತೆ ಮತ್ತು ವೈಚಾರಿಕತೆ ಬೆಳೆಸುವ ಪ್ರಮುಖ ವೇದಿಕೆಯಾಗಿದೆ.

ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ

ಕನ್ನಡಪ್ರಭ ವಾರ್ತೆ ಕಾರವಾರ

ಪ್ರಶಿಕ್ಷಣ ವರ್ಗ ಪಕ್ಷದ ಮೇಲಿನ ಬದ್ಧತೆ ಮತ್ತು ವೈಚಾರಿಕತೆ ಬೆಳೆಸುವ ಪ್ರಮುಖ ವೇದಿಕೆಯಾಗಿದೆ. ಇದು ಕಾರ್ಯಕರ್ತರ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು.

ನಗರದ ಮುರಳೀಧರ ಮಠ ಇಂದಿರಾಕಾಂತ ಸಭಾಭವನದಲ್ಲಿ ನಗರ ಮಂಡಲದಿಂದ ಹಮ್ಮಿಕೊಂಡ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಇಂದು ಅಗಾಧವಾಗಿ ಬೆಳೆಯಲು ಕಾರ್ಯಕರ್ತರ ಶ್ರಮ ಅಪಾರವಾದದ್ದು. ಕಾರ್ಯಕರ್ತರೇ ಪಕ್ಷಕ್ಕೆ ಆಧಾರಸ್ತಂಭ. ಪ್ರಶಿಕ್ಷಣ ವರ್ಗದಿಂದ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಅಭಿಪ್ರಾಯಪಟ್ಟರು.

ನಗರ ಮಂಡಲ ಅಧ್ಯಕ್ಷರಾದ ನಾಗೇಶ್ ಕುರ್ಡೇಕರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಕ್ಷದ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ನಾಯಕ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ್ ನಾಯಕ, ನಗರ ಮಂಡಲ ಪ್ರಭಾರಿ ರಾಜು ಭಂಡಾರಿ, ಗ್ರಾಮೀಣ ಮಂಡಲ ಅಧ್ಯಕ್ಷರಾದ ಶುಭಾಷ ಗುನಗಿ, ವಿಶೇಷ ಆಹ್ವಾನಿತರಾದ ಮನೋಜ್ ಭಟ್, ನಯನಾ ನೀಲಾವರ, ನಗರಸಭೆ ಮಾಜಿ ಅಧ್ಯಕ್ಷ ರವಿರಾಜ್ ಅಂಕೋಲೇಕರ್, ಪಕ್ಷದ ಪ್ರಕೋಷ್ಟದ ಸುನೀಲ್ ಸೋನಿ, ಪ್ರಾಧ್ಯಾಪಕ ಎಂ.ವಿ. ಭಟ್ ಉಪಸ್ಥಿತರಿದ್ದರು.

ಭಾರತ ಮಾತೆಗೆ ದೀಪ ಬೆಳಗಿಸಿ ಪುಷ್ಪಾರ್ಚನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಶೋಕ್ ಗೌಡ ಗಣ್ಯರನ್ನು ಸ್ವಾಗತಿಸಿದರು.

ಈ ಸಂದರ್ಭ ಬಿಜೆಪಿ ಮುಖಂಡರು, ರಾಜ್ಯ ಹಾಗೂ ಜಿಲ್ಲಾ ಪ್ರಭಾರಿ, ಚುನಾಯಿತ ಸದಸ್ಯರು, ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆಗೆ ಸಂಸ್ಕಾರ ಸಂಸ್ಕೃತಿ ಬಗ್ಗೆ ಮಾಹಿತಿ ನೀಡಿ
ಬಿಸಿಯೂಟಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ