ಕೆ-ಸೆಟ್, ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

KannadaprabhaNewsNetwork |  
Published : Jun 23, 2025, 11:48 PM IST
ತರಬೇತಿ | Kannada Prabha

ಸಾರಾಂಶ

ಕೆ- ಸೆಟ್‌, ಯುಜಿಸಿ ನೆಟ್‌, ಜೆಆರ್‌ಎಫ್‌ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು.

ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು. ಆಸಕ್ತರು ಜೂನ್, 30 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

----------------------------------------------------------

ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಮಡಿಕೇರಿ : ಪ್ರಸಕ್ತ (2025-26) ಸಾಲಿಗೆ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ಸೇವಾಸಿಂಧು ಪೋರ್ಟಲ್‌ನ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.2025-26 ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ ನೀಡಲು ಸೇವಾಸಿಂಧು ಪೋರ್ಟಲ್‌ನ (https://sevasindhu.karnataka.gov.in/Sevasindhu/DepartmentServices) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಸದುಪಯೋಗಪಡಿಸಿಕೊಳ್ಳಲು ಕೋರಿದೆ.ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಮಾಹಿತಿ ಕೇಂದ್ರ, ಸೋಮವಾರಪೇಟೆ ದೂರವಾಣಿ ಸಂಖ್ಯೆ 8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ, ಕೊಡಗು ಜಿಲ್ಲೆ 9972799091 ಹಾಗೂ ತಾಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ