ತಂತ್ರಜ್ಞಾನ, ಎಐ ಕುರಿತು ಶಿಕ್ಷಕರಿಗೆ ತರಬೇತಿ

KannadaprabhaNewsNetwork |  
Published : Aug 26, 2026, 02:30 AM IST
ಕಾರ್ಯಾಗಾರದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನಿಜಾಮುದ್ದೀನ್ ಮಮ್ಮಿಗಟ್ಟಿ ಅವರಿಗೆ ಐಡಿಯಲ್ ಟೀಚರ್ಲೈಫ್‌ಟೈಮ್ ಅಚೀವ್‌ಮೆಂಟ್ ಅವಾರ್ಡ್ ನೀಡಿ ಗೌರವಿಸಲಾಯಿತು. | Kannada Prabha

ಸಾರಾಂಶ

ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್‌ (ಐಟಾ) ರಾಜ್ಯ ಘಟಕದಿಂದ ಹೆಬಳೆಯ ಶಮ್ಸ್ ಪದವಿಪೂರ್ವ ಕಾಲೇಜು ಹಾಗೂ ನ್ಯೂ ಶಮ್ಸ್ ಸ್ಕೂಲ್ ನ ಸಹಯೋಗದೊಂದಿಗೆ 21ನೇ ಶತಮಾನದ ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (ಎಐ)ಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಭಟ್ಕಳ

ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್‌ (ಐಟಾ) ರಾಜ್ಯ ಘಟಕದಿಂದ ಹೆಬಳೆಯ ಶಮ್ಸ್ ಪದವಿಪೂರ್ವ ಕಾಲೇಜು ಹಾಗೂ ನ್ಯೂ ಶಮ್ಸ್ ಸ್ಕೂಲ್ ನ ಸಹಯೋಗದೊಂದಿಗೆ 21ನೇ ಶತಮಾನದ ಶಿಕ್ಷಣ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (ಎಐ)ಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಬೆಂಗಳೂರಿನ ಮೌಲಾನಾ ಆಜಾದ್ ನ್ಯಾಷನಲ್ ಉರ್ದು ವಿಶ್ವವಿದ್ಯಾಲಯದ ಪಾಲಿಟೆಕ್ನಿಕ್ ಪ್ರಾಧ್ಯಾಪಕ ಮಹಬೂಬ್ ಉಲ್ ಹಕ್, 21ನೇ ಶತಮಾನದ ಬೋಧನಾ ಕೌಶಲಗಳು ಮತ್ತು ಶಿಕ್ಷಕರಿಗೆ ಉಪಯುಕ್ತ ಕೃತಕ ಬುದ್ಧಿಮತ್ತೆ (ಎಐ) ಸಾಧನಗಳುವಿಷಯದ ಕುರಿತು ಪ್ರಾಯೋಗಿಕ ತರಬೇತಿ ನೀಡಿ ಬದಲಾಗುತ್ತಿರುವ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಹಾಗೂ ಎಐ ಸಾಧನಗಳನ್ನು ಬೋಧನಾ ಪ್ರಕ್ರಿಯೆಯಲ್ಲಿ ಹೇಗೆ ಪರಿಣಾಮಕಾರಿಯಾಗಿ ಬಳಸಬಹುದು ಎಂಬುದನ್ನು ವಿವರಿಸಿದರು.

ಐಟಾ ರಾಜ್ಯ ಉಪಾಧ್ಯಕ್ಷ ಡಾ. ಸನಾಉಲ್ಲಾ ಶರೀಫ್ ಮಾತನಾಡಿ, ಶಿಕ್ಷಕರ ವೃತ್ತಿಯಲ್ಲಿ ಜ್ಞಾನ, ಮೌಲ್ಯಗಳು, ಜವಾಬ್ದಾರಿ ಹಾಗೂ ಮಾನವೀಯತೆಯ ಮಹತ್ವ ವಿವರಿಸಿದರು.

ಕಾರ್ಯಕ್ರಮದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಐಟಾ ಉ.ಕ. ಜಿಲ್ಲಾಧ್ಯಕ್ಷ ಅಲಿ ಮುನಿಗಾರ್, ಗಾಲಿಬ್ ಔಟಿ ಹಾಗೂ ಅಜ್ರಾ ಖಾತೂನ್ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ದೀರ್ಘಕಾಲದ ಸೇವೆಯನ್ನು ಗುರುತಿಸಿ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನಿಜಾಮುದ್ದೀನ್ ಮಮ್ಮಿಗಟ್ಟಿ ಅವರಿಗೆ ಐಡಿಯಲ್ ಟೀಚರ್ಲೈಫ್‌ಟೈಮ್ ಅಚೀವ್‌ಮೆಂಟ್ ಅವಾರ್ಡ್-2026 ನೀಡಿ ಗೌರವಿಸಲಾಯಿತು.

ಇದೇ ಸಂದರ್ಭನ್ಯೂ ಶಮ್ಸ್ ಶಾಲೆಯಲ್ಲಿ ಸುಮಾರು 18 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ಹಾಜಿರಾ ಜಬೀನ್ ಅವರಿಗೆ ಶಾಲೆಯಿಂದ ಬೀಳ್ಕೊಡಲಾಯಿತು. ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಮುಹಮ್ಮದ್ ರಝಾ ಮಾನ್ವಿ ಪ್ರಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಯಾಸೀನ್ ಭಿಕ್ಬಾ ಐಟಾದ ಗುರಿ ಮತ್ತು ಉದ್ದೇಶ ತಿಳಿಸಿದರು. ಸಂಸ್ಥೆಯ ಉಪಾಧ್ಯಕ್ಷ ಮೌಲಾನ ಜಿಯಾ ಉರ್ ರಹ್ಮಾನ್ ರುಕ್ನುದ್ದೀನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ-ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಸಯ್ಯದ್ ಕುತುಬ್ ಬರ್ಮಾವರ್ ನದ್ವಿ ಉಪಸ್ಥಿತರಿದ್ದರು. ಶಿಕ್ಷಕ ಅರಾಫತ್ ನಿರೂಪಿಸಿದರು. ಪ್ರಾಂಶುಪಾಲೆ ಫಹಮಿದಾ ಡಾಟಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಂಪಿಯಲ್ಲಿ ಹುಲಿ ಪ್ರತ್ಯಕ್ಷ: ಸೆರೆ ಹಿಡಿಯಲು ಸ್ಥಳೀಯರ ಒತ್ತಾಯ
ಕುಷ್ಟಗಿಯಲ್ಲಿ ಚುಟುಕು ಸಾಹಿತ್ಯ ಸಮ್ಮೇಳನ