ಕನ್ನಡಪ್ರಭ ವಾರ್ತೆ ಕಲಬುರಗಿ
ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯುವ ಮತದಾರರಿಗೆ ಮತದಾನದ ಶಿಕ್ಷಣ ಮತ್ತು ಪ್ರಾಮುಖ್ಯತೆ ಕುರಿತು ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಕಾರ್ಯಾಗಾರ ಉದ್ಘಾಟಿಸಿದರು.
ಜಿಪಂ ಸಿಇಓ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ, ಪಾಲಿಕೆ ಉಪ ಆಯುಕ್ತ (ಆಡಳಿತ) ಮಾಧವ ಗಿತ್ತೆ, ಜಿಪಂ ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್, ಯೋಜನಾ ಮತ್ತು ಮೌಲ್ಯಮಾಪನ ಅಧಿಕಾರಿ ಮಧುಮತಿ, ಪ್ರಾಂಶುಪಾಲ ಬಸವರಾಜ ಬಿರಾದಾರ, ಸಹಾಯಕ ಪ್ರಾಧ್ಯಾಪಕ ಸೂರ್ಯಕಾಂತ ಭಾಗಿಯಾಗಿದ್ದರು.ಕಾರ್ಯಾಗಾರದಲ್ಲಿ ಪದವಿ ಪೂರ್ವ ಕಾಲೇಜಿನ 159, ಪದವಿ ಕಾಲೇಜಿನ 35 ಹಾಗೂ ಪ್ರೌಢ ಶಾಲೆಯ 50 ಜನ ಮಾಸ್ಟರ್ ಟ್ರೇನರ್ ಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸರ್ವರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಡಾ. ಗಿರೀಶ ಅವರು ವಂದಿಸಿದರು.