ಉಡುಪಿ ಜೈಲಿನಲ್ಲಿ ಕೈದಿಗಳಿಗೆ ಗೆರಟೆ ಕರಕುಶಲ ತರಬೇತಿ

KannadaprabhaNewsNetwork |  
Published : Nov 07, 2026, 02:45 AM IST
05ಕೈದಿ | Kannada Prabha

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಡುಪಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇವರ ಸಂಯುಕ್ರಾಶ್ರಯದಲ್ಲಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿನ 32 ಬಂಧಿಗಳಿಗೆ ಗೆರಟೆ ಕರಕುಶಲ ವಸ್ತುಗಳ ಮತ್ತು ಅಲಂಕಾರಿಕ ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ತರಬೇತಿ ಹಮ್ಮಿಕೊಳ್ಳಲಾಯಿತು.

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಉಡುಪಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೊಪಾಯ ಇಲಾಖೆ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇವರ ಸಂಯುಕ್ರಾಶ್ರಯದಲ್ಲಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿನ 32 ಬಂಧಿಗಳಿಗೆ ಗೆರಟೆ ಕರಕುಶಲ ವಸ್ತುಗಳ ಮತ್ತು ಅಲಂಕಾರಿಕ ಮೌಲ್ಯವರ್ಧಿತ ಉತ್ಪನ್ನಗಳ ಕೌಶಲ್ಯ ತರಬೇತಿ ಹಮ್ಮಿಕೊಳ್ಳಲಾಯಿತು.

ಈ ತರಬೇತಿಯ ಸಮಾರೋಪ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ಯಶ್ವಂತ್ ರಾವ್, ಭಾರತೀಯ ವಿಕಾಸ ಟ್ರಸ್ಟ್‌ನ ಹಿರಿಯ ಸಹಾಯಕ ಜಗದೀಶ ಪೈ, ಟ್ರಸ್ಟ್ ನ ಮನೊಹರ್ ಕಟಗೇರಿ, ಪ್ರತಿಮಾ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆಯ ಅಧೀಕ್ಷಕ ವಿಜಯಕುಮಾರ ದಿ ಚವ್ಹಾಣ, ಜೈಲರ್ ಗಳಾದ ಡಿ.ಆರ್. ಕೊಣಿ ಹಾಗೂ ಎಸ್.ಎ. ಶಿರೋಳ, ಸಹಾಯಕ ಜೈಲರ್ ಸಿದ್ದಪ್ಪ ಟಿ. ಕೋಣೆ ಸಂಸ್ಥೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ