ಉದ್ಯೋಗಾವಕಾಶ ಪಡೆಯಲು ತರಬೇತಿ ಅತ್ಯವಶ್ಯಕ

KannadaprabhaNewsNetwork |  
Published : Apr 17, 2026, 01:30 AM IST
 ಕಂಪ್ಯೂಟರ್ ಸೈನ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಬಿ. ರಮೇಶ್, Iಇಇಇ ಸ್ಟೂಡೆಂಟ್ ಚಾಪ್ಟರ್ ಸಲಹೆಗಾರರಾದ ಶ್ರೀ ತೇಜೋನಿಧಿ ಎಂ.ಆರ್ ಸೇರಿದಂತೆ ಇತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಕಂಪ್ಯೂಟರ್‌ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಗುರುವಾರದಂದು ಆಯೋಜಿಸಲಾದ ಐಇಇಇ ಸ್ಟೂಡೆಂಟ್ ಚಾಪ್ಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಪಾಠ್ಯಕ್ರಮದ ಜೊತೆಗೆ ಉದ್ಯೋಗ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಕಾಲದ ಅವಶ್ಯಕತೆಯಾಗಿದೆ ಎಂದು ತಿಳಿಸಿದರು. ಸ್ಟೂಡೆಂಟ್ ಚಾಪ್ಟರ್‌ಗಳ ಮಹತ್ವವನ್ನು ವಿವರಿಸಿದ ಅವರು, ಇಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಉದ್ಯೋಗದ ಅವಕಾಶಗಳ ಬಗ್ಗೆ ಸ್ಪಷ್ಟ ಅರಿವು ಮೂಡಿಸುತ್ತವೆ ಎಂದರು. ವಿವಿಧ ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ. ವ್ಯಾಸಂಗದ ಜೊತೆಗೆ ತಾಂತ್ರಿಕ ಹಾಗೂ ಪ್ರಾಯೋಗಿಕ ತರಬೇತಿಯನ್ನು ಪಡೆಯುವುದು ಉದ್ಯೋಗಾವಕಾಶಗಳನ್ನು ಪಡೆಯಲು ಅತ್ಯಂತ ಅಗತ್ಯವಾಗಿದೆ ಎಂದು ಮಲೆನಾಡು ಇಂಜಿನಿಯರಿಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್. ಜೆ. ಅಮರೇಂದ್ರ ಅಭಿಪ್ರಾಯಪಟ್ಟರು.

ನಗರದ ಮಲೆನಾಡು ಎಂಜಿನಿಯರಿಗ್ ಕಾಲೇಜಿನ ಕಂಪ್ಯೂಟರ್‌ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದಲ್ಲಿ ಗುರುವಾರದಂದು ಆಯೋಜಿಸಲಾದ ಐಇಇಇ ಸ್ಟೂಡೆಂಟ್ ಚಾಪ್ಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಪಾಠ್ಯಕ್ರಮದ ಜೊತೆಗೆ ಉದ್ಯೋಗ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಕಾಲದ ಅವಶ್ಯಕತೆಯಾಗಿದೆ ಎಂದು ತಿಳಿಸಿದರು. ಸ್ಟೂಡೆಂಟ್ ಚಾಪ್ಟರ್‌ಗಳ ಮಹತ್ವವನ್ನು ವಿವರಿಸಿದ ಅವರು, ಇಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಉದ್ಯೋಗದ ಅವಕಾಶಗಳ ಬಗ್ಗೆ ಸ್ಪಷ್ಟ ಅರಿವು ಮೂಡಿಸುತ್ತವೆ ಎಂದರು. ವಿವಿಧ ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಮಾತನಾಡಿದ ಕಂಪ್ಯೂಟರ್‌ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಡಾ. ಚಂದ್ರಿಕಾ ಜೆ, ಐಇಇಇ ಸ್ಟೂಡೆಂಟ್ ಚಾಪ್ಟರ್‌ ಮೂಲಕ ಹಲವು ವಿಶೇಷ ತರಬೇತಿ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ತಾಂತ್ರಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ವ್ಯಕ್ತಿತ್ವ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಮಲೆನಾಡು ಕಾಲೇಜಿನ Iಇಇಇ ಬ್ರಾಂಚ್ ಕೌನ್ಸಿಲ್ ಮುಖ್ಯಸ್ಥರಾದ ಡಾ. ಪಿ.ಸಿ. ಶ್ರೀಕಾಂತ್ ಮಾತನಾಡಿ, ಹನಿವೆಲ್, ಗೂಗಲ್, ಮೈಕ್ರೋಸಾಫ್ಟ್ ಮುಂತಾದ ಜಾಗತಿಕ ಕಂಪನಿಗಳೊಂದಿಗೆ Iಇಇಇ ಸಂಸ್ಥೆಗೆ ಒಡನಾಟವಿದ್ದು, ಇದರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭ್ಯವಾಗುತ್ತವೆ ಎಂದರು. ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಂಪ್ಯೂಟರ್‌ ಸೈನ್ಸ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಬಿ. ರಮೇಶ್, Iಇಇಇ ಸ್ಟೂಡೆಂಟ್ ಚಾಪ್ಟರ್ ಸಲಹೆಗಾರರಾದ ಶ್ರೀ ತೇಜೋನಿಧಿ ಎಂ.ಆರ್ ಸೇರಿದಂತೆ ಇತರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರೈಡ್‌ ವಿದ್ಯಾರ್ಥಿನಿಯರ ಐತಿಹಾಸಿಕ ಸಾಧನೆ
ಬೇಡಿಕೆ ಈಡೇರದಿದ್ರೆ ವಿಧಾನಸೌಧದವರೆಗೂ ಪಾದಯಾತ್ರೆ