ವಿಕಲಚೇತನರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವವರಿಗೆ ತರಬೇತಿ ಅತಿ ಅಗತ್ಯ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ ಹೇಳಿದರು.
ಕನ್ನಡಪ್ರಭ ವಾರ್ತೆ ಉಡುಪಿ
ವಿಕಲಚೇತನರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವವರಿಗೆ ತರಬೇತಿ ಅತಿ ಅಗತ್ಯ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನಿ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಉಡುಪಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಸಹಯೋಗದೊಂದಿಗೆ ನಡೆದ ಉಡುಪಿ ಬ್ರಹ್ಮಾವರ, ಕಾಪು ತಾಲೂಕುಮಟ್ಟದ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಖ್ಯಅತಿಥಿಗಳಾಗಿದ್ದ ಜಿಲ್ಲಾ ರೆಡ್ ಕ್ರಾಸ್ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ. ಮಾತನಾಡಿ ವಿಕಲಚೇತನರಭಿವೃದ್ದಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಬೇಕಾದ ರೀತಿಯನ್ನು ವಿವರಿಸಿದರು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಸ್ವಾಗತಿಸಿದರು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥಶೆಟ್ಟಿಎಕ್ಕಾರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಬಳಿಕ ವಿಕಲಚೇತನರ ಮತ್ತು ಹಿರಿಯನಾಗರಿಕರ ಸಬಲೀಕರಣ ಇಲಾಖೆಯ ಯೋಜನಾಸಹಾಯಕ ಶಿವಾಜಿ, ನೋಡಲ್ ಅಧಿಕಾರಿ ಜಯಶ್ರೀ, ಫಿಸಿಯೋಥೆರಪಿಸ್ಟ್ ಡಾ. ಶ್ರೇಯಾ, ಮನಶಾಸ್ತ್ರಜ್ಞ ವೈಶಾಖ್ ವಾರಂಬಳ್ಳಿ, ವಾಕ್ ಮತ್ತು ಶ್ರವಣತಜ್ಞೆ ನೆಲಿಶಾಮೆರಿಲ್ ನಾಯ್ಕ್, ನಿವೃತ್ತ ಅಧಿಕಾರಿ ನಿರಂಜನಭಟ್, ಎ.ವಿ. ಬಾಳಿಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಾವ್ಯ ಟಿ., ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ. ಗಣನಾಥಶೆಟ್ಟಿಎಕ್ಕಾರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.